Author name: Tejas

ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ

ಸುಳ್ಯ ತಾಲೂಕಿನ ಗೆಳೆಯರ ಬಳಗ ಐವರ್ನಾಡು ಇದರ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಅಮೆಚೂರು ಕಬಡ್ಡಿ ಅಸೋಸಿಯೇಷನ್‌, ದ.ಕ.ಜಿಲ್ಲಾ ಅಮೆಚೂರು ಕಬಡ್ಡಿ ಅಸೋಸಿಯೇಷನ್ ಮಂಗಳೂರು ಹಾಗೂ ಸುಳ್ಯ ತಾಲೂಕು ಅಮೆಚೂರು ಕಬಡ್ಡಿ ಅಸೋಸಿಯೇಷನ್ ಇವರ ಸಹಭಾಗಿತ್ವದಲ್ಲಿ ಆಹ್ವಾನಿತ 12 ತಂಡಗಳ ಅಂತ‌ರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಪುರುಷರ ಕಬಡ್ಡಿ ಪಂದ್ಯಾಟವು ಫೆ.22 ರಂದು ಐವರ್ನಾಡು ಸ.ಪ.ಪೂ.ಕಾಲೇಜು ಮೈದಾನದಲ್ಲಿ ಅರಂಭಗೊಂಡಿದೆ.ಪ್ರಥಮ ಪಂದ್ಯಾಟ ಆಳ್ವಾಸ್ ಮೂಡಬಿದಿರೆ ಹಾಗೂ ಎನ್.ಎಂ.ಸಿ ಸುಳ್ಯ ನಡುವೆ ನಡೆದು ಎನ್.ಎಂ‌.ಸಿ ಸುಳ್ಯ ವಿಜಯಿಯಾಗಿದೆ.

ಐವರ್ನಾಡು : ಪ್ರಥಮ ಪಂದ್ಯಾಟದಲ್ಲಿ ಎನ್.ಎಂ.ಸಿ ಗೆ ಜಯ Read More »

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ

ಗೆಳೆಯರ ಬಳಗ ಐವರ್ನಾಡು ಸಾರಥ್ಯದಲ್ಲಿ ನಡೆಯುವ ಕಬಡ್ಡಿ ಪಂದ್ಯಾಟಕ್ಕೆ ಹಿರಿಯ ಕೃಷಿಕ ಕೊರಗಪ್ಪ ಗೌಡ ಪೂಜಾರಿಮನೆ ತೆಂಗಿನಕಾಯಿ ಒಡೆಯುವುದರ ಮೂಲಕ ಚಾಲನೆ ನೀಡಿದರು.ರಾಜ್ಯ ಹಾಗೂ ಕೇರಳ ,ತಮಿಳು ನಾಡಿನ ಬಲಿಷ್ಟ 12 ತಂಡಗಳು ಭಾಗವಹಿಸಿದ್ದು ತೀವ್ರ ಹಣಾ ಹಣಿ ನೀಡಲು, ಪ್ರೇಕ್ಷಕರಿಗೆ ರಸದೌತಣ ನೀಡಲು ಅಂಕಣ ಸಜ್ಜಾಗಿದೆ .ಸುತ್ತಲು ಸುಂದರ ಗ್ಯಾಲರಿ ವ್ಯವಸ್ಥೆ ಮಾಡಲಾಗಿದ್ದು ಪ್ರೇಕ್ಷಕರಿಗೆ ಭಾರೀ ವ್ಯವಸ್ಥೆ ಮಾಡಲಾಗಿದೆ.

ಐವರ್ನಾಡು : ಅಂತರ್ ರಾಜ್ಯ ಮಟ್ಟದ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟಕ್ಕೆ ಅದ್ದೂರಿ ಚಾಲನೆ Read More »

ಫೆ.28ಕ್ಕೆ ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕ ಸುಳ್ಯದಲ್ಲಿ ಉದ್ಘಾಟನೆ

ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕವು ಫೆ. 28 ರಂದು ಸುಳ್ಯದಲ್ಲಿ ಉದ್ಘಾಟನೆಗೊಳ್ಳಲಿದೆ ಎಂದುಸಂಸ್ಥೆಯ ಅಧ್ಯಕ್ಷ ಸವಣೂರು ಸೀತಾರಾಮ ರೈ ಯವರು ಹೇಳಿದರು.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಸಹಕಾರ ರತ್ನ ದಿ. ವಾರಣಾಶಿ ಸುಬ್ರಾಯ ಭಟ್‌ರವರ ಪ್ರಯತ್ನ ಹಾಗೂ ಸಹಕಾರ ರತ್ನ ಎಂ.ಎನ್. ರಾಜೇಂದ್ರಕುಮಾರ್ ಇವರ ಪ್ರೋತ್ಸಾಹದೊಂದಿಗೆ ಪ್ರಾರಂಭಗೊಂಡ ಮಾಸ್ ಸಂಸ್ಥೆ ಕಳೆದ 23 ವರ್ಷಗಳಿಂದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಡಿಕೆ ಕೃಷಿಕರ ಹಿತ ಸಂರಕ್ಷಿಸುವ ಸಲುವಾಗಿ

ಫೆ.28ಕ್ಕೆ ಮಾಸ್ ಲಿಮಿಟೆಡ್ ಸಂಸ್ಥೆಯ ಸುಳ್ಯ ಶಾಖೆಯ ಅಡಿಕೆ ಸಂಸ್ಕರಣಾ ಘಟಕ ಸುಳ್ಯದಲ್ಲಿ ಉದ್ಘಾಟನೆ Read More »

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರಿಗೆ ಗಾಯ

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ರಿಕ್ಷಾ ಪಲ್ಟಿಯಾಗಿ ರಿಕ್ಷಾದಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮಹಿಳೆಯರು ಗಾಯಗೊಂಡ ಘಟನೆ ಸರ್ವೆ ಗ್ರಾಮದ ಸೊರಕೆ ಕರ್ಮಿನಡ್ಕ ಎಂಬಲ್ಲಿ ಇಂದು ನಡೆದಿದೆ.ಗಾಯಗೊಂಡ ಮಹಿಳೆಯರನ್ನು ಸರೋಜಿನಿ, ವೇದಾವತಿ ಹಾಗೂ ಮಾಲತಿ ಎಂದು ಗುರುತಿಸಲಾಗಿದೆ.ಸರ್ವೆ ಕಡೆಗೆ ಹೋಗುತ್ತಿದ್ದ ಲಾರಿ ವಿರುದ್ದ ದಿಕ್ಕಿನಿಂದ ಬರುತ್ತಿದ್ದ ಆಟೋ ರಿಕ್ಷಾಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಿಕ್ಷಾ ಪಲ್ಟಿಯಾಗಿದೆ. ಅವಿನಾಶ್ ಎಂಬವರ ರಿಕ್ಷಾದಲ್ಲಿ ಮೂವರು ಮಹಿಳೆಯರು ಹೋಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ.ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ

ಆಟೋ ರಿಕ್ಷಾಗೆ ಲಾರಿ ಡಿಕ್ಕಿ ಹೊಡೆದು ಇಬ್ಬರು ಮಹಿಳೆಯರಿಗೆ ಗಾಯ Read More »

ಸರಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ

ಸರ್ಕಾರಿ ಕೆಲಸ ಕೊಡಿಸೋದಾಗಿ ಹೇಳಿ 2.66 ಲಕ್ಷ ರೂ ಹಣ ಪಡೆದು ವಂಚನೆ ಮಾಡಿರುವ ಬಗ್ಗೆ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತನಗೆ ನಮ್ರತಾ ಎಂಬಾಕೆಯ ಪರಿಚಯವಾಗಿದ್ದು, ಆಕೆ ಟೆಂಡರ್‌ದಾರ ಅವಿನಾಶ್ ಶೆಟ್ಟಿಗೆ 2.50 ಲಕ್ಷ ರೂ. ನೀಡಿದರೆ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿದ್ದಳು. ಅದರಂತೆ ತಾನು ಅವಿನಾಶ್‌ ಶೆಟ್ಟಿಗೆ ಕರೆ ಮಾಡಿ ಆತನ ಸೂಚನೆಯಂತೆ ತನ್ನ ಮಗಳಿಗೆ ಉದ್ಯೋಗ ದೊರಕಿಸಿಕೊಡಲು ವಿನಂತಿಸಿದೆ. ಹಾಗೇ ಚೆಕ್ ಕೂಡ ನೀಡಿದೆ.ಬಳಿಕ ಆತನನ್ನು ವಿಚಾರಿಸಿದಾಗ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದಿದ್ದ. ಬಳಿಕ ಇದೊಂದು ವಂಚನೆಯ

ಸರಕಾರಿ ಕೆಲಸ ಕೊಡಿಸುವುದಾಗಿ ಹಣ ಪಡೆದು ವಂಚನೆ Read More »

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವನ್ನಪ್ಪಿರುವ ಘಟನೆ ಉಪ್ಪಿನಂಗಡಿ ಸಮೀಪದ ಮಠ ಎಂಬಲ್ಲಿ ನಡೆದಿದೆ. ದಾವಣಗೆರೆ ಜಗಳೂರು ತಾಲೂಕು ಪಲ್ಲಗಟ್ಟೆ ನಿವಾಸಿ ವೀರಭದ್ರ (29) ಮೃತ ಯುವಕ.ವೀರಭದ್ರ ಕಬ್ಬಿಣದ ರಾಡ್ ನಲ್ಲಿ ತೆಂಗಿನಕಾಯಿ ಕೀಳುವಾಗ ವಿದ್ಯುತ್ ತಂತಿಗೆ ರಾಡ್ ತಗುಲಿ ಕರೆಂಟ್ ಶಾಕ್ ಹೊಡೆದು ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ವೀರಭದ್ರ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಪಲ್ಲಾಗಟ್ಟೆ ಮನೆ ನಿವಾಸಿ ಗುತ್ಯಪ್ಪ ಎಂಬವರ ಮಗನಾಗಿದ್ದು ತೋಟದ ಕಾರ್ಮಿಕನಾಗಿ ಕುವೆಚ್ಚಾರ್‌ನಲ್ಲಿ ಕೆಲಸ ಮಾಡುತ್ತಿದ್ದರು.

ವಿದ್ಯುತ್ ತಂತಿ ಸ್ಪರ್ಶಿಸಿ ಯುವಕ ಸಾವು Read More »

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ?

ಸರಕಾರಿ ಶಾಲೆಗಳ ಇಷ್ಟ ಪಡುವವರಿಗೆ ಆತಂಕವೊಂದು ಎದುರಾಗಿದೆ‌.ರಾಜ್ಯ ಸರಕಾರ ದಾಖಲಾತಿ ಕಡಿಮೆ ಇರುವ ಪ್ರಾಥಮಿಕ ಶಾಲೆಗಳ ವಿಲೀನಕ್ಕೆ ಹೆಜ್ಜೆಯಿಟ್ಟಿದೆ. ಇದರಿಂದ ರಾಜ್ಯದ ಆರು ಸಾವಿರಕ್ಕೂ ಹೆಚ್ಚು ಪ್ರಾಥಮಿಕ ಶಾಲೆಗಳಿಗೆ ಕುತ್ತು ಎದುರಾಗಿದೆ.ಮೊದಲ ಹಂತವಾಗಿ 8 ಶೈಕ್ಷಣಿಕ ಜಿಲ್ಲೆಯಲ್ಲಿ ಪ್ರಾಥಮಿಕ ಶಾಲೆಗಳನ್ನು ವಿಲೀನ ಮಾಡಿ ಮಾದರಿ ಶಾಲೆ ನಡೆಸುವ ಕಾರ್ಯಯೋಜನೆ ನಡೆಯುತ್ತಿದೆ. ಇದರಲ್ಲಿ ಶಿಕ್ಷಣ ಸಚಿವರ ಹುಟ್ಟೂರು ಶಿವಮೊಗ್ಗ ಜಿಲ್ಲೆ ಕೂಡ ಸೇರಿದೆ. ಕಾರವಾರ, ಶಿರಸಿ ಶೈಕ್ಷಣಿಕ ಜಿಲ್ಲೆಗಳನ್ನೂ ಆಯ್ಕೆ ಮಾಡಿಕೊಳ್ಳಲಾಗಿದೆ. ಈ ಪೈಕಿ ಕೆಲ ಜಿಲ್ಲೆಗಳಲ್ಲಿ ಮಾದರಿ

ರಾಜ್ಯದಲ್ಲಿ 25% ಸರಕಾರಿ ಶಾಲೆಗಳಿಗೆ ಬೀಗ ? Read More »

ಬೀದಿ ಬದಿಯಲ್ಲಿ ಅನಾರೋಗ್ಯ ದಿಂದ ಜೀವನ ನಡೆಸುತಿದ್ದ ಅನಾಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ ನಗರ ಪಂಚಾಯತ್ ಸದಸ್ಯ ಉಮ್ಮರ್!

ಸುಳ್ಯ ನಗರ ಬೀದಿ ಬದಿಯಲ್ಲಿ ಅಲೆಮಾರಿ ಜೀವನ ನಡೆಸುತಿದ್ದ ಅನಾಥ ವೃದ್ಧೆಯೋರ್ವರು ಅನಾರೋಗ್ಯ ಪೀಡಿತರಾಗಿ ಸುಳ್ಯ ಖಾಸಗಿ ಬಸ್‌ ನಿಲ್ದಾಣ ಬಳಿ ರಸ್ತೆ ಬದಿ ಆಶ್ರಯ ಪಡೆದು ಕೊಂಡು ಸಂಕಷ್ಟದಲ್ಲಿ ಇದ್ದರು. ಅನಾರೋಗ್ಯಕ್ಕೆ ಒಳಗಾಗಿ ಅಸಹಾಯಕ ಪರಿಸ್ಥಿತಿಯಲ್ಲಿ ಇದ್ದದ್ದನ್ನು ಗಮನಿಸಿದ ನಗರ ಪಂಚಾಯತ್ ಸದಸ್ಯ ಕೆ ಎಸ್ ಉಮ್ಮರ್ ರವರು ವೃದ್ಧೆಯನ್ನು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರನ್ನು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬೀದಿ ಬದಿಯಲ್ಲಿ ಅನಾರೋಗ್ಯ ದಿಂದ ಜೀವನ ನಡೆಸುತಿದ್ದ ಅನಾಥ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಿದ ನಗರ ಪಂಚಾಯತ್ ಸದಸ್ಯ ಉಮ್ಮರ್! Read More »

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ  :    ಡಾ. ನರೇಂದ್ರ ರೈ ದೇರ್ಲ

ಸುಖ ಯಾವುದನ್ನು ಸೃಷ್ಟಿಸುವುದಿಲ್ಲ ಸತತ ಪರಿಶ್ರಮದಿಂದ ಸಾಹಿತ್ಯ ಸೃಷ್ಟಿಯಾಗುತ್ತದೆ. ಆ ನಿಟ್ಟಿನಲ್ಲಿ ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಡಾ. ನರೇಂದ್ರ ರೈ‌ ದೇರ್ಲ ಅಭಿಪ್ರಾಯಪಟ್ಟರು. ಅವರು ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಕನ್ನಡ ಸಂಘವುಕನ್ನಡ ವಿಭಾಗ ಹಾಗೂ ಐಕ್ಯೂಎಸಿ ಸಹಯೋಗದೊಂದಿಗೆ ಹಮ್ಮಿಕೊಂಡ “ಬರವಣಿಗೆ ಮಾಧ್ಯಮ ಶಿಬಿರ”ದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡುತ್ತಿದ್ದರು. ಬದುಕನ್ನು ಕಟ್ಟಿಕೊಡುವ ಮಾಧ್ಯಮ ಬರವಣಿಗೆ ಶಾಶ್ವತವಾಗಿಸುತ್ತದೆ. ನಿಮ್ಮ ಒಂದೇ ಒಂದು ಬರಹ ಕೂಡ ನಿಮ್ಮನ್ನು ಶಾಶ್ವತವಾಗಿಸಬಹುದು. ಆ ನಿಟ್ಟಿನಲ್ಲಿ ಓದುವ

ಹಳ್ಳಿಯ ಬೇರುಗಳು ಸಾಹಿತ್ಯವನ್ನು ಸೃಷ್ಟಿಸುತ್ತವೆ  :    ಡಾ. ನರೇಂದ್ರ ರೈ ದೇರ್ಲ Read More »

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ

ಶಿವಮೊಗ್ಗ ಲೋಕಸಭಾ ಕ್ಷೇತ್ರದ ಸಂಸದ ಬಿ.ವೈ .ರಾಘವೇಂದ್ರ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕುಟುಂಬ ಸಮೇತರಾಗಿ ಫೆ.19 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.ಈ ಸಂದರ್ಭದಲ್ಲಿ ದೇವಳದ ಕಚೇರಿ ವ್ಯವಸ್ಥಾಪಕ ಪಾರ್ಶ್ವನಾಥ ಜೈನ್ ಜೊತೆಗಿದ್ದು ಸಹಕರಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಸಂಸದ ಬಿ.ವೈ ರಾಘವೇಂದ್ರ ಭೇಟಿ Read More »

error: Content is protected !!
Scroll to Top