Author name: Tejas

ಕಾಡಾನೆ ಅರಣ್ಯದಲ್ಲಿ ಸಾವು

ಬೆಳ್ತಂಗಡಿ ತಾಲೂಕಿನ ಚಾರ್ಮಾಡಿಯ ಕತ್ತರಿಗುಡ್ಡ ಅನ್ನಾರು ಪರಿಸರದಲ್ಲಿ ಗುರುವಾರ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಶುಕ್ರವಾರ ಮ್ರತಪಟ್ಟಿದೆ ಎಂದು ತಿಳಿದು ಬಂದಿದೆ.ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಗ್ರಾಮದ ಅನಾರು ಪ್ರದೇಶದ ಗುಡ್ಡದಲ್ಲಿ ಫೆ.13 ರಂದು ಮಧ್ಯಾಹ್ನ ಕಾಡನೇ ಅರೆ ಪ್ರಜ್ಞಾ ಸ್ಥಿತಿಯಲ್ಲಿ ಬಿದ್ದಿದ್ದ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಗೆ ಮಾಹಿತಿ ಬಂದಿದ್ದು ತಕ್ಷಣ ಸಿಬ್ಬಂದಿ ಹಾಗೂ ಪಶು ವೈದ್ಯರಾದ ಡಾ. ಯಶಸ್ವಿಯವರು ಸ್ಥಳಕ್ಕೆ ಹೋಗಿ ಚಿಕಿತ್ಸೆ ನೀಡಿದ್ದರು. ಆದರೆ ಆನೆ ಸ್ಥಿತಿ ಗಂಭೀರವಾಗಿದ್ದರಿಂದ ಇಂದು ಅದು ಮೃತಪಟ್ಟಿದೆ ಎನ್ನಲಾಗಿದೆ.

ಕಾಡಾನೆ ಅರಣ್ಯದಲ್ಲಿ ಸಾವು Read More »

ಅರಂತೋಡು : ವಿಷ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು

ಅರಂತೋಡು ಗ್ರಾಮದ ಅಡಿಗಾರ ನಾರಾಯಣ ಎಂಬವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ್ದು ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ ಘಟನೆ ಶುಕ್ರವಾರ ವರದಿಯಾಗಿದೆ.ಜೀವನ್ಮರಣದ ಹೋರಾಟದಲ್ಲಿದ್ದ ನಾರಾಯಣ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ನೀಡಿದರೂ ಫಲಕಾರಿಯಾಗಿಲ್ಲ.

ಅರಂತೋಡು : ವಿಷ ಸೇವಿಸಿದ ವ್ಯಕ್ತಿ ಚಿಕಿತ್ಸೆ ಫಲಕಾರಿಯಾಗದೆ ಸಾವು Read More »

ಅರಂತೋಡು : ಆತ್ಮಹತ್ಯೆಗೆ ಯತ್ನಿಸಿ ವ್ಯಕ್ತಿ ಗಂಭೀರ

ಅರಂತೋಡು ಗ್ರಾಮದ ಅಡಿಗಾರ ನಾರಾಯಣ ಎಂಬವರು ವಿಷ ಕುಡಿದು ಆತ್ಮಹತ್ಯೆಗೆ ಯತ್ನ ಮಾಡಿದ ಘಟನೆ ಶುಕ್ರವಾರ ವರದಿಯಾಗಿದೆ.ಜೀವನ್ಮರಣದ ಹೋರಾಟದಲ್ಲಿರುವ ಅವರನ್ನು ಸುಳ್ಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಅರಂತೋಡು : ಆತ್ಮಹತ್ಯೆಗೆ ಯತ್ನಿಸಿ ವ್ಯಕ್ತಿ ಗಂಭೀರ Read More »

ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಆರೋಪ,ರೂಂ ಬಾಯ್ ಪೊಲೀಸ್ ವಶ!

ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಹೊರ ಗುತ್ತಿಗೆ ನೌಕರ ರೂಂ ಬಾಯ್ ವಸತಿ ಗೃಹವೊಂದರಲ್ಲಿ ಕರ್ತವ್ಯದಲ್ಲಿದ್ದಾತ ಮಹಿಳೆಯೊಬ್ಬರು ಸ್ನಾನ ಮಾಡುತ್ತಿರುವಾಗ ವಿಡಿಯೋ ಮಾಡಿರುವುದಾಗಿ ಆರೋಪಿಸಲಾಗಿದೆ.ಪ್ರಕರಣ ಹಿನ್ನೆಲೆಯಲ್ಲಿ ಯುವಕನ್ನು ದೇವಸ್ಥಾನ ವತಿಯಿಂದ ಪೊಲೀಸ್‌ ಠಾಣೆಗೆ ಒಪ್ಪಿಸಲಾಗಿದ್ದು ಮೊಬೈಲ್ ಪರಿಶೀಲಿಸಲಾಗುತ್ತಿರುವುದಾಗಿ ತಿಳಿದು ಬಂದಿದೆ.

ಮಹಿಳೆ ಸ್ನಾನ ಮಾಡುವಾಗ ವಿಡಿಯೋ ಮಾಡಿದ ಆರೋಪ,ರೂಂ ಬಾಯ್ ಪೊಲೀಸ್ ವಶ! Read More »

14 ದಿವಸದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆ

ವಿರಾಜಪೇಟೆ ತಾಲ್ಲೂಕಿನ ಕೊಟ್ಟೋಳಿಯಲ್ಲಿ ಬಾಣಂತಿ ಮಹಿಳೆಯೊಬ್ಬರು ತನ್ನ 14 ದಿವಸದ ಹಸುಗೂಸನ್ನು ಬಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ದಾರಣ ಘಟನೆ ನಡೆದಿದೆ.ವಿರಾಜಪೇಟೆ ತಾಲೂಕಿನ ಕೊಟ್ಟೋಳಿ ಗ್ರಾಮದ ನಿವಾಸಿ ಎಂ.ಎಂ ದಿನೇಶ್ ಎಂಬುವವರ ಪತ್ನಿ ಕಾವೇರಮ್ಮ (24) ನೇಣಿಗೆ ಶರಣಾದ ಮಹಿಳೆ.4 ವರ್ಷಗಳ ಹಿಂದೆ ದಿನೇಶ್-ಕಾವೇರಮ್ಮ ಮದುವೆಯಾದ್ದು, ಫೆ.12 ರಂದು ಪತಿ ದಿನೇಶ್ ತಮ್ಮ ಮನೆಯ ಸಮೀಪದ ಕಾಫಿ ತೋಟದಲ್ಲಿ ಕೆಲಸ ಮಾಡುವ ವೇಳೆ ಮನೆಯಲ್ಲಿ ಮಗುವಿನ ಕೂಗಾಟ ಕೇಳಿ ಬಂದು ನೋಡಿದ್ದಾರೆ. ಕಾವೇರಮ್ಮ ಸ್ನಾನದ ಕೋಣೆಯಲ್ಲಿ

14 ದಿವಸದ ಹಸುಗೂಸನ್ನು ಬಿಟ್ಟು ಮಹಿಳೆ ಆತ್ಮಹತ್ಯೆ Read More »

ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ಹರಿಶ್ಚಂದ್ರ ಕೆ, ಒಕ್ಕೂಟ ಪದಾಧಿಕಾರಿಗಳು, ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ Read More »

ಕೊಳ್ತಿಗೆ : ತಂದೆಯಿಂದ ಮಗಳ ಮೇಲೆ ಅತ್ಯಾಚಾರ !

ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ತಂದೆಯೇ ಅತ್ಯಾಚಾರ ನಡೆಸಿ ರಾಕ್ಷಸ ಸ್ವಭಾವ ಮೆರೆದ ಘಟನೆ ನಡೆದಿದೆ. ಬಗ್ಗೆ ಬಾಲಕಿಯ ತಾಯಿ ಬೆಳ್ಳಾರೆ ಪೊಲೀಸ್‌ ಠಾಣೆಯಲ್ಲಿ ಫೆ.12 ರಂದು ದೂರು ನೀಡಿದ್ದು ಪೋಕೋ ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.ನೀಚ ಕ್ರತ್ಯ ಎಸಗಿದ ತಂದೆಯನ್ನು ಬಂಧಿಸಲು ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಕೊಳ್ತಿಗೆ : ತಂದೆಯಿಂದ ಮಗಳ ಮೇಲೆ ಅತ್ಯಾಚಾರ ! Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿ ಗಳಿಗೆ ಮಾಹಿತಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿಕಾಲೇಜಿನ ಪ್ರಾಂಶುಪಾಲರಾದ ಪ್ರೊ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮ Read More »

ಆತ್ಮ ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು

ಕೆಲ ದಿನಗಳ ಹಿಂದೆ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಪುತ್ತೂರಿನ ಕಾಲೇಜೊಂದರ ವಿದ್ಯಾರ್ಥಿನಿ ಸ್ಪಂಧಿಸದೆ ಫೆ 12ರಂದು ಮೃತಪಟ್ಟಿದ್ದಾಳೆ.ಫೆ 6 ರಂದು ಈಕೆ ಶಾಲನ್ನು ಕುತ್ತಿಗೆಗೆ ಬಿಗಿದು ಆತ್ಮಹತ್ಯೆಗೆ ಯತ್ನಿಸಿರುವುದಾಗಿ ಮೂಲಗಳಿಂದ ತಿಳಿದು ಬಂದಿದೆ. ಇದರಿಂದ ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿಲಾಗಿತ್ತು. ಅಲ್ಲಿಂದ ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದು ಅಲ್ಲಿ ಆಕೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದಾಗಿ‌ ತಿಳಿದು ಬಂದಿದೆ.

ಆತ್ಮ ಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ ಸಾವು Read More »

error: Content is protected !!
Scroll to Top