Author name: Tejas

ನಿವೃತ್ತ ಶಿಕ್ಷಕಿ ಪುಷ್ಪಾವತಿ ನಿಧನ

ಅರಂತೋಡು ಗ್ರಾಮದ ಕರಿಂಬಿ ಚಿನ್ನಪ್ಪ ಮಾಸ್ತರ್‌ರ ಪತ್ನಿ , ನಿವ್ರತ್ತ. ಶಿಕ್ಷಕಿ ಪುಷ್ಪಾವತಿ (68 )ಅಲ್ಪಕಾಲದ ಅಸೌಖ್ಯದಿಂದಾಗಿ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.ಪುಷ್ಪಾವತಿಯವರು ಪೆರುವಾಜೆ, ಗಾಂಧಿನಗರ, ತೊಡಿಕಾನ, ಸೋಣಂಗೇರಿ ಶಾಲೆಗಳಲ್ಲಿ ಶಿಕ್ಷಕಿ, ಮುಖ್ಯ ಶಿಕ್ಷಕಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದರು. ಮೃತರು ಪತಿ, ಪುತ್ರ ಪ್ರಹ್ಲಾದ್ ಕೆ.ಸಿ., ಪುತ್ರಿ ಡಾ. ಪಲ್ಲವಿ ಪ್ರಶಾಂತ್ ತಂಟೆಪ್ಪಾಡಿ, ಸೊಸೆ, ಅಳಿಯ, ಮೊಮ್ಮಕ್ಕಳು ಸೇರಿದಂತೆ ಕುಟುಂಬಸ್ಥರು, ಬಂಧುಮಿತ್ರರನ್ನು ಅಗಲಿದ್ದಾರೆ.

ನಿವೃತ್ತ ಶಿಕ್ಷಕಿ ಪುಷ್ಪಾವತಿ ನಿಧನ Read More »

ಮನೆ ಮುಂದೆ ಐದು ಚಿರತೆ ಪತ್ಯಕ್ಷ

ಕಾಸರಗೋಡಿನ ಮಳಿಯಾರು ಗ್ರಾಮ ಪಂಚಾಯತ್ ವ್ಯಾಪ್ತಿಗೊಳಪಟ್ಟ ಪ್ರದೇಶದಲ್ಲಿ ಚಿರತೆಗಳ ಭೀತಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಡಿ.25 ರಂದು ರಾತ್ರಿ ಇಲ್ಲಿನ ಮನೆಯೊಂದರ ಪರಿಸರದಲ್ಲಿ ಐದು ಚಿರತೆಗಳು ಗುಂಪಾಗಿ ಏಕಕಾಲದಲ್ಲಿ ಕಂಡು ಬಂದಿದೆ. ಮುಳಿಯಾರು ಪಯೋಲಾದ ಕಲೆಯಪ್ಪಾಡಿ ಕೃಷ್ಣನ್ ಅವರ ಮನೆ ಪರಿಸರದಲ್ಲಿ ಚಿರತೆಗಳು ಗುಂಪಾಗಿ ಕಾಣಿಸಿಕೊಂಡಿತು.ಮನೆಯವರು ಪಕ್ಕದ ದೈವ ಕೋಲ ಉತ್ಸವಕ್ಕೆ ಹೋಗಿದ್ದು, ಅಲ್ಲಿಂದ ರಾತ್ರಿ ಮನೆಗೆ ವಾಪಸಾಗುತ್ತಿದ್ದಾಗ ಮನೆ ಪರಿಸರದಲ್ಲಿ ಚಿರತೆಗಳ ಗುಂಪು ಕಂಡು ಬಂದಿದ್ದು, ಆತಂಕಕ್ಕೆ ಕಾರಣವಾಗಿದೆ. ಕೆಲವೇ ಹೊತ್ತಿನಲ್ಲಿ ಈ ಚಿರತೆಗಳು ಅಲ್ಲಿಂದ

ಮನೆ ಮುಂದೆ ಐದು ಚಿರತೆ ಪತ್ಯಕ್ಷ Read More »

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ, ಸಂಸ್ಮರಣೆ ಕಾರ್ಯಕ್ರಮ

ಸುಳ್ಯ: ಕೆವಿಜಿ ಶಿಕ್ಷಣ ಸಂಸ್ಥೆಗಳ ಸ್ಥಾಪಕ ಅಮರ ಸುಳ್ಯದ ಅಮರ ಶಿಲ್ಪಿ ಎಂದು ಖ್ಯಾತ ನಾಮರಾದ ಡಾ.ಕುರುಂಜಿ ವೆಂಕಟ್ರಮಣ ಗೌಡರ 96ನೇ ಜನ್ಮ ದಿನಾಚರಣೆಯ ಅಂಗವಾಗಿ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಕುರುಂಜಿಭಾಗ್‌ನ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ ಮಾಡಿ ಡಾ.ಕುರುಂಜಿಯವರ ಸಂಸ್ಮರಣೆ ಮಾಡಿ ಅವರ ಗುಣಗಾನ ಮಾಡಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ಇದರ ಅಧ್ಯಕ್ಷ ಹಾಗೂ ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ.ಕೆ.ವಿ.ರೇಣುಕಾಪ್ರಸಾದ್ ಅವರು ಮಾತನಾಡಿಡಾ.ಕುರುಂಜಿ ವೆಂಕಟ್ರಮಣ

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ ಕಮಿಟಿ ಬಿ ವತಿಯಿಂದ ಡಾ.ಕೆ.ವಿ.ಜಿ ಅವರ ಪುತ್ಥಳಿಗೆ ಹಾರಾರ್ಪಣೆ, ಸಂಸ್ಮರಣೆ ಕಾರ್ಯಕ್ರಮ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ,ಶಾಲಾ ಕಾಲೇಜು ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ

ಮಾಜಿ ಪ್ರಧಾನಿ ಡಾ.ಮನಮೋಹನ್‌ ಸಿಂಗ್‌ ನಿಧನ ಹೊಂದಿದ ಹಿನ್ನೆಲೆಯಲ್ಲಿ ಕೇಂದ್ರ ಸರಕಾರವು ಶುಕ್ರವಾರ (ಡಿ.27) ಎಲ್ಲ ಸರಕಾರಿ ಕಾರ್ಯಕ್ರಮಗಳನ್ನು ರದ್ದುಗೊಳಿಸಿ 7 ದಿನದ ರಾಷ್ಟ್ರೀಯ ಶೋಕಾಚರಣೆಯ ಘೋಷಿಸಿದೆ.ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ನಿಧನದ ಗೌರವಾರ್ಥ ರಾಜ್ಯದಲ್ಲೂ ಕಾಂಗ್ರೆಸ್‌ ನೇತೃತ್ವದ ಸರಕಾರವೂ ಏಳು ದಿನಗಳ ಶೋಕಾಚರಣೆ ಘೋಷಿಸಿದ್ದು, ಶುಕ್ರವಾರ (ಡಿ. 27) ಸರ್ಕಾರಿ ರಜೆ ಘೋಷಿಸಿದ್ದು, ಶಾಲೆ, ಕಾಲೇಜುಗಳು ಬ್ಯಾಂಕ್‌ಗಳು ಹಾಗೂ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆ,ಶಾಲಾ ಕಾಲೇಜು ಸರಕಾರಿ ಕಚೇರಿಗಳಿಗೆ ರಜೆ ಘೊಷಣೆ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ವೈರಲ್

ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇಂದು ವಿಧಿವಶರಾಗಿದ್ದಾರೆ. ಮನಮೋಹನ್ ಸಿಂಗ್ ಅವರು ಭಾರತದ 13ನೇ ಪ್ರಧಾನಿಯಾಗಿ ಭಾರತದ ಆಡಳಿತ ನಡೆಸಿದ್ದಾರೆ. ಆರ್ಥಿಕ ತಜ್ಞರಾಗಿಯೂ ಸೇವೆ ಸಲ್ಲಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ. ಅವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ. ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಕೊನೆ ಕ್ಷಣದ ಫೋಟೋ ವೈರಲ್ Read More »

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ

ನವದೆಹಲಿ : ನರೇಂದ್ರ ಮೋದಿಗೂ ಮುನ್ನ ಎರಡು ಅವಧಿಗಳ ಕಾಲಕ್ಕೆ ದೇಶದ ಪ್ರಧಾನಿ ಪಟ್ಟವನ್ನು ಅಲಂಕರಿಸಿದ್ದ ಮನಮೋಹನ್ ಸಿಂಗ್ ಅವರು ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ 92 ವರ್ಷದ ಮನಮೋಹನ್ ಸಿಂಗ್ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಡಾ. ಸಿಂಗ್ ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. 1991 ರಲ್ಲಿ ರಾಜ್ಯಸಭೆಗೆ ಪ್ರವೇಶ ಮಾಡುವ ತಮ್ಮ ರಾಜಕೀಯ ಇನ್ನಿಂಗ್ಸ್‌ ಆರಂಭಿಸಿದ್ದ ಸಿಂಗ್, 2024ರ ಏಪ್ರಿಲ್‌ನಲ್ಲಿ ಅವರ ರಾಜ್ಯಸಭೆ ಅಧಿಕಾರವಧಿ ಅಂತ್ಯವಾಗಿತ್ತು. ಈ ಮೂಲಕ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಇನ್ನಿಲ್ಲ Read More »

ಮೇಯಲು ಬಿಟ್ಟಿದ ದನದ ಕಾಲಿಗೆ ಕಡಿದ ಕಟುಕ

ಮೇಯಲು ಬಿಟ್ಟಿದ್ದ ದನದ ಕಾಲಿಗೆ ಪಕ್ಕದ ಮನೆಯ ವ್ಯಕ್ತಿಯೋರ್ವರು ಕತ್ತಿಯಿಂದ ಕಡಿದು ಗಂಭೀರ ಗಾಯಗೊಳಿಸಿದ ಘಟನೆ ರಾಮಕುಂಜ ಗ್ರಾಮದ ಕೊಂಡ್ಯಾಡಿ ಎಂಬಲ್ಲಿ ನಡೆದಿದೆ. ಈ ಬಗ್ಗೆ ಕಡಬ ಪೊಲೀಸರಿಗೆ ದೂರು ನೀಡಲಾಗಿದೆ. ಕೊಂಡ್ಯಾಡಿಯ ಮಹಿಳೆಯೋರ್ವೆ ಕಡಬ ಪೊಲೀಸರಿಗೆ ದೂರು ನೀಡಿದ್ದು, ಕೊಟ್ಟಿಗೆಯಿಂದ ದನವನ್ನು ತೋಟಕ್ಕೆ ಮೇಯಲು ಬಿಟ್ಟಿದ್ದೆ. ದನ ಸಂಜೆಯಾದರೂ ಮರಳಿ ಮನೆಗೆ ಬಾರಲಿಲ್ಲ. ಹುಡುಕಾಡಿದಾಗ ಪಕ್ಕದ ಮನೆಯ ಅಬ್ಬಾಸ್ ರ ತೋಟದಲ್ಲಿ ಕಾಲಿಗೆ ಗಂಭೀರ ಗಾಯವಾದ ಸ್ಥಿತಿಯಲ್ಲಿ ಬಿದ್ದುಕೊಂಡಿತ್ತು ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಮೇಯಲು ಬಿಟ್ಟಿದ ದನದ ಕಾಲಿಗೆ ಕಡಿದ ಕಟುಕ Read More »

ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ: ಈಗಲೇ ಅರ್ಜಿ ಸಲ್ಲಿಸಿ

ಸರ್ಕಾರ ಕಾರ್ಮಿಕರ ಕ್ಷೇಮಾಭಿವೃದ್ಧಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಮದುವೆ ಸಹಾಯಧನವೂ ಒಂದಿದೆ. ಹೌದು, ಈ ಯೋಜನೆಯಡಿ ನೋಂದಾಯಿತ ಕಾರ್ಮಿಕರ ಮೊದಲ ಮದುವೆ ಅಥವಾ ಕಾರ್ಮಿಕರ ಮಕ್ಕಳ ಮದುವೆಗೆ ಮಂಡಳಿಯಿಂದ ಸಹಾಯಧನ ಪಡೆಯಬಹುದು. ಫಲಾನುಭವಿ ಅಥವಾ ಅವರ ಇಬ್ಬರು ಮಕ್ಕಳ ಮದುವೆಗೆ ತಲಾ ₹ 60 ಸಾವಿರದವರೆಗೆ ಸಹಾಯಧನ ನೀಡುತ್ತದೆ. ಫಲಾನುಭವಿಯು ಮಂಡಳಿಯ ಅಧಿಕೃತ ವೆಬ್‌ಸೈಟ್‌ನಲ್ಲಿ ಅಗತ್ಯ ದಾಖಲೆಗಳನ್ನು ಸಲ್ಲಿಸಿ ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು.

ಮದುವೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ: ಈಗಲೇ ಅರ್ಜಿ ಸಲ್ಲಿಸಿ Read More »

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಸುಳ್ಯದ ಅಮರ ಶಿಲ್ಪಿ ಡಾ. ಕುರುಂಜಿ ವೆಂಕಟ್ರಮಣ ಗೌಡರ 96ನೇ ಜಯಂತ್ಯೋತ್ಸವ ಅಂಗವಾಗಿ ಸುಳ್ಯದಲ್ಲಿ ಬುಧವಾರ ಸಾಂಸ್ಕೃತಿಕ ಮತ್ತು ಕ್ರೀಡಾ ಸ್ಪರ್ಧೆ ನಡೆಯಿತು.ಸುಳ್ಯದ ಕಾನೂನು ಕಾಲೇಜಿನಲ್ಲಿ ಸ್ಪರ್ಧಾ ಕಾರ್ಯಕ್ರನಕ್ಕೆ ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತಸರ ಡಾ.ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಚಾಲನೆ ನೀಡಿ ಶುಭ ಹಾರೈಸಿದರು. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ. ಡಾ.ಎನ್‌.ಎ.ಜ್ಞಾನೇಶ್ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಕೆವಿಜಿ ಸುಳ್ಯ ಹಬ್ಬ ಸಮಾಜ

ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ Read More »

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಡಾ.ರೇಣುಕಾಪ್ರಸಾದ್ ಅವರಿಗೆ ಗೌರವಾರ್ಪಣೆ

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಬಹುಮತದಿಂದ ಆಯ್ಕೆಗೊಂಡ ಕೊಡುಗೈ ಧಾನಿ ಡಾ.ರೇಣುಕಾಪ್ರಸಾದ್ ರವರನ್ನು ಗೌಡರ ಯಾನೆ ಒಕ್ಕಲಿಗರ ಜಿಲ್ಲಾ ಮಾತೃ ಸಂಘದ ಪದಾಧಿಕಾರಿಗಳು ಪುಷ್ಪಗುಚ್ಛ ನೀಡಿ ಗೌರವಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಮಾತೃಸಂಘದ ಅಧ್ಯಕ್ಷ ಲೋಕಯ್ಯ ಗೌಡ ಕೆ., ಪ್ರಧಾನ ಕಾರ್ಯದರ್ಶಿ ದಿನೇಶ್ ಮಡಪ್ಪಾಡಿ, ಕಾರ್ಯದರ್ಶಿ ಕೆ.ರಾಮಣ್ಣ ಗೌಡ ಕೊಂಡೆಬಾಯಿ, ಆಡಳಿತ ಮಂಡಳಿಯ ಲತಾ ಕುದ್ರಾಜೆ, ತಿಮ್ಮಯ್ಯ ಪಿಂಡಿಮನೆ, ಅನಿತಾ ರಾಮಣ್ಣ ಗೌಡ ಮುಂತಾದವರು ಉಪಸ್ಥಿತರಿದ್ದರು.

ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾಗಿ ಆಯ್ಕೆಗೊಂಡ ಡಾ.ರೇಣುಕಾಪ್ರಸಾದ್ ಅವರಿಗೆ ಗೌರವಾರ್ಪಣೆ Read More »

error: Content is protected !!
Scroll to Top