Author name: Tejas

ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಸ್ಕೂಟರ್ ಸವಾರ ಕೂದಳೆಲೆ ಅಂತರದಿಂದ ಪಾರು!

ದ.ಕ ಜಿಲ್ಲೆಯ ಕೆಲ ಭಾಗದಲ್ಲಿ ಭಾರೀ ಗಾಳಿ ಮಳೆ ಸುರಿದಿದ್ದು ಬಂಟ್ವಾಳ ತಾಲೂಕಿನ ಮಾಣಿ ಪುತ್ತೂರು ಹೆದ್ದಾರಿಯ ನೇರಳೆಕಟ್ಟೆ ಸಮೀಪ ತೆಂಗಿನ ಮರವೊಂದು ರಸ್ತೆಗೆ ಬಿದ್ದು ಸ್ಕೂಟರ್ ಸವಾರ ಕೂದಳೆಲೆ ಅಂತರಿಂದ ಪಾರಾದ ಘಟನೆ ಮಂಗಳವಾರ ಸಂಜೆ ವರದಿಯಾಗಿದೆ.ಸ್ಕೂಟರ್ ಸವಾರ ವೇಗವಾಗಿ ಸ್ಕೂಟರ್ ನಲ್ಲಿ ತೆರಳುತ್ತಿದ್ದಂತೆ ತೆಂಗಿನ ಮರ ಮುರಿದ್ದು ಸ್ಕೂಟರ್ ಮುಂಭಾಗವೇ ಬಿತ್ತು.ಅದ್ರಷ್ಠವಶಾತ್ ಸ್ಕೂಟರ್ ಸವಾರ ಅಪಾಯದಿಂದ ಪಾರಾಗಿದ್ದಾನೆ.

ಭಾರೀ ಗಾಳಿ ಮಳೆಗೆ ರಸ್ತೆಗೆ ಉರುಳಿ ಬಿದ್ದ ತೆಂಗಿನ ಮರ,ಸ್ಕೂಟರ್ ಸವಾರ ಕೂದಳೆಲೆ ಅಂತರದಿಂದ ಪಾರು! Read More »

ವಿದ್ಯಾಳಿಗೆ ರಾಜ್ಯದಲ್ಲಿ ಐದನೇ ಸ್ಥಾನ

ಈ ಬಾರಿಯ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಕಡಬ ತಾಲೂಕಿನ ಕಾಣಿಯೂರು ಸರಕಾರಿ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗ ದಲ್ಲಿ ಶ್ರೀವಿದ್ಯಾ ಎನ್ 595 ಅಂಕ ಪಡೆದುಕೊಂಡು, ರಾಜ್ಯಕ್ಕೆ 5ನೇ ಸ್ಥಾನ ಮತ್ತು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ರಾಜ್ಯ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಸಾಧನೆ ಮೆರೆದಿದ್ದಾರೆ.ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಗುರು ನಾರಾಯಣ್ ಭಟ್ ಕಾಣಿಯೂರು ಮತ್ತು ಶೈಲಶ್ರೀಯವರ ಪುತ್ರಿ ವಿದ್ಯಾ.

ವಿದ್ಯಾಳಿಗೆ ರಾಜ್ಯದಲ್ಲಿ ಐದನೇ ಸ್ಥಾನ Read More »

ವೈಷ್ಣವಿಗೆ ರಾಜ್ಯದಲ್ಲಿ ಆರನೇ ಸ್ಥಾನ

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು ಸುಳ್ಯ ಮಾದರಿ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸುನಂದಾ ಶೆಟ್ಟಿಯವರ ಪುತ್ರಿ, ಮೂಡಬಿದಿರೆ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ವೈಷ್ಣವಿ ಶೆಟ್ಟಿ 594 ಅಂಕಗಳೊಂದಿಗೆ ರಾಜ್ಯಕ್ಕೆ 6 ನೇ ಸ್ಥಾನಿಯಾಗಿದ್ದಾರೆ.

ವೈಷ್ಣವಿಗೆ ರಾಜ್ಯದಲ್ಲಿ ಆರನೇ ಸ್ಥಾನ Read More »

ಪಿ.ಯು.ಪಿ ಫಲಿತಾಂಶ ಪ್ರಕಟ,ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದುದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಂತೆ ಉಡುಪಿ ಮೊದಲ ಸ್ಥಾನ(ಶೇ.93.90 )ಗಳಿಸಿರೆ ದಕ್ಷಿಣ ಕನ್ನಡ(93.57) ದ್ವಿತೀಯ ಸ್ಥಾನ ಗಳಿಸಿದೆ.ದಕ್ಷಿಣಕನ್ನಡ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ ಗಳಿಸಿ ಜಿಲ್ಲೆಗೆ ಕೀರ್ತಿ ತಂದಿದ್ದಾರೆ.ದಕ್ಷಿಣ ಕನ್ನಡದ ಎಕ್ಸಪರ್ಟ್ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ಅಮೂಲ್ಯ ಕಾಮತ್ ಅವರು 600ಕ್ಕೆ 599 ಅಂಕ ಗಳಿಸಿ ವಿಜ್ಞಾನ ವಿಭಾಗದಲ್ಲಿ ಮೊದಲ ಸ್ಥಾನ ಪಡೆದರೆ. ದಕ್ಷಿಣ ಕನ್ನಡದ ಜಿಲ್ಲೆಯ ಕೆನಾರ ಪಿಯು ಕಾಲೇಜಿನ ವಿದ್ಯಾರ್ಥಿನಿಯಾಗಿರುವ ದೀಪಶ್ರೀ ಅವರು 600 ಕ್ಕೆ 599 ಅಂಕ

ಪಿ.ಯು.ಪಿ ಫಲಿತಾಂಶ ಪ್ರಕಟ,ದ.ಕ ಜಿಲ್ಲೆಯ ಇಬ್ಬರು ವಿದ್ಯಾರ್ಥಿನಿಯರು ರಾಜ್ಯಕ್ಕೆ ಪ್ರಥಮ Read More »

ಅರಂತೋಡು : ಕಾರು ಅಪಘಾತಗೊಂಡು ಜಖಂ

ಅರಂತೋಡು : ಮಾಣಿ ಮೈಸೂರು ರಾಷ್ಟ್ರೀಯ ಹೆದ್ದಾರಿ ಅರಂತೋಡು ಕಾಮಧೇನು ಹೋಟೆಲ್ ಬಳಿ ಕಾರು ಅಪಘಾತಗೊಂಡು ಕಾರು ಜಖಂಗೊಂಡ ಘಟನೆ ಮಂಗಳವಾರ ವರದಿಯಾಗಿದೆ.ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.ಕಾರು ಸುಳ್ಯದಿಂದ ಮಡಿಕೇರಿ ಕಡೆ ತೆರಳುತ್ತಿತ್ರು.

ಅರಂತೋಡು : ಕಾರು ಅಪಘಾತಗೊಂಡು ಜಖಂ Read More »

ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಗೆ ಮುತ್ತು ಕೊಟ್ಟ ಯುವಕನಿಗೆ ಪೊಲೀಸರಿಂದ ಹುಡುಕಾಟ ಆರಂಭ

ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಯನ್ನು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಲು ಪೊಲೀಸರು ಕರೆ ತರುತ್ತಿರುವಾಗ ಆತನಿಗೆ ಯುವಕನೋರ್ವ ಮುತ್ತು ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುದ್ದಿ ವೈರಲ್ ಆಗುತ್ತಿದ್ದಂತೆ ಮುತ್ತು ಕೊಟ್ಟವನಿಗಾಗಿ ಪೊಲೀಸರು ಹುಡುಕಾಡುತ್ತಿದ್ದಾರೆ.ಮುತ್ತು ಕೊಟ್ಟ ಯುವಕ ಉಜಿರೆ ನಿವಾಸಿ ಹೈದರ್ ನಿರ್ಸಾಲ್ ಮಗ ಸಹಲ್ ನಿರ್ಸಾಲ್ ಎಂದು ಗುರುತಿಸಲಾಗಿದೆ. ಬೆಳ್ತಂಗಡಿ ಪೊಲೀಸರಿಂದ ಸಹಲ್ ನಿರ್ಸಾಲ್ ಗಾಗಿ ಹುಡುಕಾಟ ಮುಂದುವರಿದಿದೆ.

ಪ್ರವೀಣ್ ನೆಟ್ಟಾರ್ ಕೊಲೆ ಆರೋಪಿಗೆ ಮುತ್ತು ಕೊಟ್ಟ ಯುವಕನಿಗೆ ಪೊಲೀಸರಿಂದ ಹುಡುಕಾಟ ಆರಂಭ Read More »

ನಾಳೆ(ಏ.8)ಕ್ಕೆ ದ್ಪೀತಿಯ ಪಿ.ಯು.ಸಿ‌ ಫಲಿತಾಂಶ

ಬೆಂಗಳೂರು; ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಲಿದೆ.ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆಯ . ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ.https://karresults.nic.in ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ

ನಾಳೆ(ಏ.8)ಕ್ಕೆ ದ್ಪೀತಿಯ ಪಿ.ಯು.ಸಿ‌ ಫಲಿತಾಂಶ Read More »

ವಾಮಾಚಾರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಧರ್ಮಗುರು!

ವಾಮಾಚಾರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಧರ್ಮಗುರುವನ್ನು ಪೊಲೀಸರು ಬಂಧಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಗುರುವಾಯನಕೆರೆಯ ನಿವಾಸಿ ಜಿ.ಅಬ್ದುಲ್ ಕರೀಮ್ ಅಲಿಯಾಸ್ ಕೂಳೂರು ಉಸ್ತಾದ್ ಬಂಧಿತ ಆರೋಪಿ. ಮಂಗಳೂರು ಪೊಲೀಸರು ಈತನನ್ನು ಬಂಧಿಸಿದ್ದಾರೆ.ಮಹಿಳೆಯೊಬ್ಬರಿಗೆ ಯಾರೋ ಮಾಟ, ಮಂತ್ರ ಮಾಡಿಸಿದ್ದಾರೆಂದು ನಂಬಿಸಿದ್ದ ಆರೋಪಿ, ಆಕೆಗೆ ಪರಿಹಾರ ಒದಗಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಲಾಗಿದೆ.ಚಿಕಿತ್ಸೆಯ ನೆಪದಲ್ಲಿ ಆರೋಪಿ ಕೂಳೂರು ಉಸ್ತಾದ್ 1 ಲಕ್ಷ ರೂಪಾಯಿ ಪಡೆದು ವಂಚಿಸಿದ್ದ ಎನ್ನಲಾಗಿದೆ. ಮಹಿಳೆ ಖಿನ್ನತೆಯ ಸಮಸ್ಯೆಯಿಂದ ಬಳಲುತ್ತಿದ್ದರು.

ವಾಮಾಚಾರದ ನೆಪದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಧರ್ಮಗುರು! Read More »

ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ ರೂ.50 ಏರಿಕೆ

ಕೇಂದ್ರ ಸರಕಾರ ಅಡುಗೆ ಅನಿಲದ ಸಿಲಿಂಡ‌ರ್ ಬೆಲೆಯನ್ನು ಏರಿಕೆ ಮಾಡಿದೆ. 14.2 ಕಿಲೋ ಎಲ್‌ಪಿಜಿ ಬೆಲೆಯನ್ನು ಸಿಲಿಂಡರ್‌ಗೆ 50ರೂ. ನಷ್ಟು ಹೆಚ್ಚಳ ಮಾಡಿದೆ..ಕೇಂದ್ರ ತೈಲ ಸಚಿವ ಹರ್ದೀಪ್ ಸಿಂಗ್ ಪುರಿ ಅವರು ಎಲ್‌ಪಿಜಿ ಬೆಲೆ ಏರಿಕೆ ಮಾಡಿರುವುದನ್ನು ಸೋಮವಾರ (ಇಂದು) ದೃಢಪಡಿಸಿದ್ದಾರೆ. ಉಜ್ವಲಾ ಮತ್ತು ಸಾಮಾನ್ಯ ವರ್ಗದ ಗ್ರಾಹಕರಿಗೆ ಅನಿಲ ಬೆಲೆಯನ್ನು ಹೆಚ್ಚಳ ಮಾಡಲಾಗಿರುವ ಕುರಿತು ಸಚಿವರು ಹೇಳಿದ್ದಾರೆ.

ಅಡುಗೆ ಅನಿಲದ ಬೆಲೆ ಸಿಲಿಂಡರ್ ಗೆ ರೂ.50 ಏರಿಕೆ Read More »

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಆರೋಪಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು!

ಬೆಳ್ತಂಗಡಿ: ಬಿಜೆಪಿ ಜಿಲ್ಲಾ ಯುವ ಮೋರ್ಚದ ಸದಸ್ಯರಾಗಿದ್ದ ಬೆಳ್ಳಾರೆ ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣದ ಆರೋಪಿ ಬೆಳ್ಳಾರೆ ನಿವಾಸಿ ಶಾಫಿ ಬೆಳ್ಳಾರೆಯನ್ನು ಎ. 7ರಂದು ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರುಪಡಿಲಾಯಿತು.ಆರೋಪಿ ಶಾಫಿ ಬೆಳ್ಳಾರೆಯನ್ನು ಬಾಡಿ ವಾರೆಂಟ್ ಮೂಲಕ ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.2017 ರಲ್ಲಿ ಆರ್.ಎಸ್.ಎಸ್ ಹಾಗೂ ಕಲ್ಲಡ್ಕ ಭಟ್ ವಿರುದ್ಧ ಉದ್ರೇಕಕಾರಿ ಭಾಷಣ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಕೋರ್ಟ್ ಗೆ ಹಾಜರು ಪಡಿಸಲಾಗಿದೆ.ಆರೋಪಿ ಶಾಫಿ ಬೆಳ್ಳಾರೆ ಅವರನ್ನು ಪ್ರವೀಣ್ ನೆಟ್ವಾರ್

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ ಆರೋಪಿ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು! Read More »

error: Content is protected !!
Scroll to Top