ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಭಾಗೀರಥಿ ಮುರುಳ್ಯ
ಸುಳ್ಯ: ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ.ವಿದ್ಯಾರ್ಥಿಗಳು ಪ್ರತಿಭೆಯನ್ನು ತೋರ್ಪಡಿಸುವ ಮೂಲಕ ವೇದಿಯನ್ನು ಸದುಪಯೋಗಪಡಿಸಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೂಬನಗರ ಇದರ ಸಹಭಾಗಿತ್ವದಲ್ಲಿ ವಿನೂಬನಗರ ವಿದ್ಯಾಸಂಸ್ಥೆಯಲ್ಲಿ ಎರಡು ದಿನಗಳ ಕಾಲ ನಡೆಯುವ ತಾಲೂಕು ಮಟ್ಟದಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನ.13ರಂದು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ […]










