ರಾಷ್ಟ್ರ ಮಟ್ಟದ ಪಾತ್ರಾಭಿನಯದಲ್ಲಿ ಸುಳ್ಯ ಜೂನಿಯರ್ ಕಾಲೇಜಿನ ವಿದ್ಯಾರ್ಥಿಗಳಿಗೆ ದ್ವಿತೀಯ ಸ್ಥಾನ,ವಿದ್ಯಾರ್ಥಿಗಳಿಗೆ ಸುಳ್ಯ ಪೇಟೆಯಲ್ಲಿ ತೆರದ ವಾಹನದಲ್ಲಿ ಮೆರವಣಿಗೆ ಮಾಡಿ ಗೌರವಾರ್ಪಣೆ
ರಾಷ್ಟ್ರೀಯ ಜನಸಂಖ್ಯಾ ಶಿಕ್ಷಣ ಯೋಜನೆಯಡಿ (NPEP) ಮಧ್ಯಪ್ರದೇಶದ ಗ್ವಾಲಿಯರ್ ನಲ್ಲಿ ನಡೆದ ರಾಷ್ಟ್ರ ಮಟ್ಟದ ಪಾತ್ರಾಭಿನಯ ಸ್ಪರ್ಧೆಯಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ದ್ವಿತೀಯ ಸ್ಥಾನ ಪಡೆದು ವಿಶೇಷ ಸಾಧನೆ ಮಾಡಿದ್ದು, ಜ.13ರಂದು ವಿದ್ಯಾರ್ಥಿಗಳು ಸುಳ್ಯಕ್ಕೆ ಆಗಮಿಸುತ್ತಿದ್ದಂತೆ ಅವರನ್ನು ಸುಳ್ಯದ ಖಾಸಗಿ ಬಸ್ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತಿಸಿ, ಬರಮಾಡಿಕೊಳ್ಳಲಾಯಿತು.ಸಮೂಹ ಮಾಧ್ಯಮಗಳ ಸುರಕ್ಷಿತ ಬಳಕೆ ಎಂಬ ವಿಷಯದ ಮೇಲೆ ಆಂಗ್ಲ ಭಾಷೆಯಲ್ಲಿ ಪ್ರಸ್ತುತ ಪಡೆಸಿದ ಪಾತ್ರಾಭಿನಯವನ್ನು ಸಂಸ್ಥೆಯ ಉಪಪ್ರಾಂಶುಪಾಲರಾದ ಪ್ರಕಾಶ ಮೂಡಿತ್ತಾಯ ಇವರು ರಚಿಸಿ ನಿರ್ದೇಶನ ಮಾಡಿದ್ದರು. […]










