Author name: Tejas

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಉಪನ್ಯಾಸಕ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದೂ ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು Read More »

ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು

ರಾಯಚೂರಿನ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ತರುಣಕುಮಾರ ತಂದೆ ಮಲ್ಲೇಶ (14) ಶಾಲೆಯಲ್ಲಿ ಲೋ ಬಿಪಿ ಉಂಟಾಗಿ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿದ್ದಾನೆ. ಪೋಷಕರಿಗೆ ಇಬ್ಬರು ಮಕ್ಕಳಿದ್ದು ಮೃತ ಬಾಲಕ ಹಿರಿಯ ಪುತ್ರನೆಂದು ಹೇಳಲಾಗುತ್ತಿದೆ.

ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು Read More »

ಶಿಕ್ಷಕಿ ಲಾಲಿಯವರಿಗೆ ನೇಶನ್ ಬಿಲ್ಡರ್ ಅವರ್ಡ್

ಪೆರಾಜೆ ಗ್ರಾಮದ ಅಮಚೂರು‌ ಕಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿ ಲಾಲಿ ಪಿ.ಜೆ ಅವರು ಮಡಿಕೇರಿ ರೋಟರಿ ಕ್ಲಬ್ ವತಿಯಿಂದ ಶೈಕ್ಷಣಿಕ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ನೀಡಲಾಗುವ 2024 2025ನೇ ಸಾಲಿನ ನೇಶನ್ ಬಿಲ್ಡರ್ ಅವರ್ಡ್ ನ್ನು ಮಡಿಕೇರಿಯಲ್ಲಿ ರೋಟರಿ ಕ್ಲಬ್ ವತಿಯಿಂದ ನಡೆದ ಕಾರ್ಯಕ್ರಮದಲ್ಲಿ ಸ್ವೀಕರಿಸಿದ್ದಾರೆ.ಶೈಕ್ಷಣಿಕ ಕ್ಷೇತ್ರದಲ್ಲಿ ಇವರ ಬಹುಮುಖ ಪ್ರತಿಭೆ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಸೇವೆಯನ್ನು ಪರಿಗಣಿಸಿ ಮಡಿಕೇರಿಯಲ್ಲಿ ಸೆ.4 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.ಸ್ಕೌಟ್ ಮತ್ತು ಗೈಡ್ಸ್ ಸಂಸ್ಥೆಯಲ್ಲಿ

ಶಿಕ್ಷಕಿ ಲಾಲಿಯವರಿಗೆ ನೇಶನ್ ಬಿಲ್ಡರ್ ಅವರ್ಡ್ Read More »

ಅರುಣ್ ಕುಮಾರ್ ಪುತ್ತಿಲ ಹಾಗೂ ಬೆಂಬಲಿಗರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಲೈಂಗಿಕ ದೌರ್ಜನ್ಯ ಆರೋಪಗೊಳಗಾಗಿರುವ ಹಿಂದು ಮುಖಂಡ ಅರುಣ್ ಕುಮಾರ್ ಪುತ್ತಿಲರಿಗೆ ನ್ಯಾಯಾಲಯ ಜಾಮೀನು ನೀಡಿರುವ ಹಿನ್ನಲೆಯಲ್ಲಿ ಪುತ್ತಿಲ ಹಾಗೂ ಬೆಂಬಲಿಗರು ಬುಧವಾರ ಬೆಳಿಗ್ಗೆ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಡೆಯಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದರು.ಅರುಣ್ ಕುಮಾ‌ರ್ ಪುತ್ತಿಲ ಪುತ್ತೂರು ದೇವಳದ ಗದ್ದೆಗೆ ಆಗಮಿಸುತ್ತಿದ್ದಂತೆ ಆನೇಕ ಮಂದಿ ಆಗಮಿಸಿ ಶುಭ ಕೋರಿದರು.ಇದೇ ಸಂದರ್ಭ ಮಾಧ್ಯಮದ ಜೊತೆ ಮಾತನಾಡಿ ಅವರು, ಈ ಪ್ರಕರಣದ ಹಿಂದೆ ಕಾಣದ ಕೈಗಳ ಭಾರೀ ಷಡ್ಯಂತ್ರ ಇದೆ.ಅದರಿಂದ ಮುಕ್ತನಾಗಿ ಹೊರ ಬಂದಿದ್ದೇನೆ. ಈಗಲೂ ಆರೋಪಗಳಿಂದ

ಅರುಣ್ ಕುಮಾರ್ ಪುತ್ತಿಲ ಹಾಗೂ ಬೆಂಬಲಿಗರಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಳದಲ್ಲಿ ವಿಶೇಷ ಪ್ರಾರ್ಥನೆ Read More »

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಆಯ್ಕೆ

ಮಂಗಳೂರು: ದ.ಕ ಜಿಲ್ಲೆಯ ಅಲ್ಪಸಂಖ್ಯಾತ ಮೋರ್ಚಾದ ಉಪಾಧ್ಯಕ್ಷರಾಗಿ ಯುವ ನ್ಯಾಯವಾದಿ ಮಹಮ್ಮದ್ ಅಸ್ಗರ್ ನೇಮಕಗೊಂಡಿದ್ದಾರೆ.ಬಿಜೆಪಿ ಬೂತ್ ಅಧ್ಯಕ್ಷರಾಗಿ, ಪಜೀರು ಗ್ರಾಮದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ವಿಧಾನಸಭಾ ಕ್ಷೇತ್ರ ಬಿಜೆಪಿ ಅಲ್ಪಸಂಖ್ಯಾತರ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸಿದ್ದಾರೆ.

ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷರಾಗಿ ಮಹಮ್ಮದ್ ಅಸ್ಗರ್ ಆಯ್ಕೆ Read More »

ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ

ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ (ಪದವಿ ಪೂರ್ವ ವಿಭಾಗ)ಮಂಗಳೂರು ಮತ್ತು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಅರಂತೋಡು ಆಶ್ರಯದಲ್ಲಿ ಸುಳ್ಯ ತಾಲೂಕು ಮಟ್ಟದ ಪದವಿಪೂರ್ವ ಕಾಲೇಜಿನ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ನಡೆಯಿತು. ಪಂದ್ಯಾಟದ ಉದ್ಘಾಟನೆಯನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಸುಳ್ಯದ ಪ್ರಾಧ್ಯಾಪಕ ಡಾ.ಹರ್ಷವರ್ಧನ್ ಕುತ್ತಮೊಟ್ಟೆ ನೆರವೇರಿಸಿದರು.ಅಧ್ಯಕ್ಷತೆ ಕಾಲೇಜಿನ ಸಂಚಾಲಕರು ಮತ್ತು ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತ ಕೆ.ಆರ್.ಗಂಗಾಧರ್ ವಹಿಸಿದ್ದರು. ಪ್ರಭಾರ ಪ್ರಾಂಶುಪಾಲ ಸುರೇಶ್ ವಾಗ್ಲೆ ಸ್ವಾಗತಿಸಿದರು. ಮುಖ್ಯಗುರು ಸೀತಾರಾಮ

ಅರಂತೋಡು : ಪದವಿ ಪೂರ್ವ ವಿಭಾಗದ ತ್ರೋಬಾಲ್ ಪಂದ್ಯಾಟ Read More »

ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ

ಅರಂತೋಡು : ತ್ರೋಬಾಲ್ ಪಂದ್ಯಾಟ ಉದ್ಘಾಟನೆ Read More »

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ

ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ಸರ್ಕಾರಿ ಮಾದರಿ ಏರಿಯಾ ಪ್ರಾಥಮಿಕ ಶಾಲೆ ಅರಂತೋಡು ಇದರ ಜಂಟಿ ಆಶ್ರಯದಲ್ಲಿ ಬಾಲಕ ಮತ್ತು ಬಾಲಕಿಯರ ತ್ರೋಬಾಲ್ ಪಂದ್ಯಾಟ ಅರುಂತೋಡು ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅರಂತೋಡು ಶಾಲೆಯ ಎಸ್ ಡಿ ಎಂ ಸಿ ಅಧ್ಯಕ್ಷ ಸುರೇಶ್ ಯು ಕೆ ಉಳುವಾರು ವಹಿಸಿದರು. ಸಭಾ ಕಾರ್ಯಕ್ರಮದ ಉದ್ಘಾಟನೆಯನ್ನು ಅರಂತೋಡು ತೋಡಿಕಾನ ಕೃಷಿ ಪತ್ತಿನ ಸಹಕಾರಿ ಸಂಘದ

ಅರಂತೋಡು ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತ್ರೋಬಾಲ್ ಪಂದ್ಯಾಟ Read More »

ಸಹಾಯಧನ ವಿತರಣೆ ಕಾರ್ಯಕ್ರಮ

ಶ್ರೀ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ ) ಸುಳ್ಯ ತಾಲೂಕು ಸಂಪಾಜಿ ವಲಯ ದ ಅಡ್ಡಡ್ಕ ಕಾರ್ಯಕ್ಷೇತ್ರದ ಶ್ರೀ ನಾಗಬ್ರಹ್ಮ ಸಂಘದ ಸದಸ್ಯ ವಸಂತ ಬಾಜಿ ನಡ್ಕ ರವರ ಅಂಗಡಿಗೆ ಇತ್ತೀಚೆಗೆ ಸುರಿದ ಗಾಳಿ ಮಳೆಗೆ ಮರ ಬಿದ್ದು ಅಂಗಡಿ ಸಂಪೂರ್ಣವಾಗಿ ಹಾನಿಯಾಗಿತ್ತು ಈ ಸಂದರ್ಭದಲ್ಲಿ ಸಹಾಯಧನಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಗೆ ಮನವಿ ಸಲ್ಲಿಸಿದಾಗ ಪೂಜ್ಯರಾದ ಡಾ|| ಡಿ ವೀರೇಂದ್ರ ಹೆಗ್ಗಡೆಯವರು 15 ಸಾವಿರ ರೂಪಾಯಿಯನ್ನು ಮಂಜೂರು ಮಾಡಿದ್ದರು ಮಂಜೂರಾತಿ ಪತ್ರವನ್ನು

ಸಹಾಯಧನ ವಿತರಣೆ ಕಾರ್ಯಕ್ರಮ Read More »

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ

ಕಡಬ : ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ, ಕಡಬ ಬ್ಲಾಕ್ ಸಮಿತಿ ವತಿಯಿಂದ ಪಡಿತರ ಅಂಗಡಿಯಲ್ಲಿ ವಿತರಿಸುವ ಅಕ್ಕಿಯನ್ನು ಸಾರ್ವಜನಿಕರ ಹಿತದೃಷ್ಟಿಯಿಂದ ಸಮರ್ಪಕವಾಗಿ ವಿತರಿಸಲು ಆಗ್ರಹಿಸಿ ಕಡಬ ತಾಲೂಕು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಆಹಾರ ನಿರೀಕ್ಷಕರಾದ ಶಂಕರ್ ರವರಿಗೆ ಮನವಿ ನೀಡಲಾಯಿತು.ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ವಿತರಿಸಲ್ಪಡುವ ಅಕ್ಕಿಯಲ್ಲಿ ಸಂಪೂರ್ಣವಾಗಿ ಕುಚ್ಚಲಕ್ಕಿ ನೀಡುವುದರಿಂದ ಸಾರ್ವಜನಿಕರಿಗೆ ಸಮಸ್ಯೆಯಾಗುತ್ತಿರುವುದನ್ನು ಮನಗಂಡು ಪ್ರತಿ ಕುಟುಂಬಕ್ಕೂ ನಿಗದಿಯಾದ ಅಕ್ಕಿಯ ಪ್ರಮಾಣದಲ್ಲಿ ಅರ್ಧದಷ್ಟು ಬೆಳ್ತಿಗೆ ಅಕ್ಕಿ ನೀಡಲು ಬೇಕಾಗಿ

ಪಡಿತರ ಅಕ್ಕಿ ಆದ್ಯತೆಗನುಸಾರ ಸಮರ್ಪಕ ವಿತರಣೆಗೆ ಆಗ್ರಹ Read More »

error: Content is protected !!
Scroll to Top