Author name: Tejas

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ

ಗರ್ಭಿಣಿ ಹೆಂಗಸೊಬ್ಬರು ಹೆರಿಗೆ ನೋವು ಕಾಣಿಸಿಕೊಂಡು ತಪಾಸಣೆಗೆ ತಾಲೂಕು ಆಸ್ಪತ್ರೆಗೆ ಕೆ.ಎಸ್.ಆರ್.ಟಿ.ಸಿ ಬಸ್‌ನಲ್ಲಿ ಹೋಗುತ್ತಿದ್ದಾಗ ಮಾರ್ಗ ಮಧ್ಯೆದಲ್ಲಿ ಬಸ್ಸಿನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ್ದಾರೆ.ಬಸ್‌ನಲ್ಲೇ ಅವಳಿ ಮಕ್ಕಳಿಗೆ ಜನ್ಮ ನೀಡಿದ ಮಹಿಳೆಯನ್ನು ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ರಜಿಯಭಾನು ಎಂದು ಗುರುತಿಸಲಾಗಿದೆ.ರಜಿಯಾಭಾನು 7 ತಿಂಗಳ ಗರ್ಭಿಣಿಯಾಗಿದ್ದು, ಹೊಟ್ಟೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಈಕೆ ಹುಣಸನಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ತಪಾಸಣೆಗೆ ಹೋದಾಗ ವೈದ್ಯರು ತಪಾಸಣೆ ನಡೆಸಿ ಅಲ್ಲಿಂದ ಹೊಸದುರ್ಗ ಸಮುದಾಯ ಆರೋಗ್ಯಕೇಂದ್ರಕ್ಕೆ ಹೋಗುವಂತೆ ತಿಳಿಸಿದ್ದಾರೆ.ಬಸ್‌ನಲ್ಲೇ ಅವಧಿ ಪೂರ್ವ […]

ಬಸ್ಸಲ್ಲಿ ಹೆರಿಗೆ ನೋವು ಕಾಣಿಸಿಕೊಂಡು ಅವಳಿ ಮಕ್ಕಳಿಗೆ ಜನ್ಮ ನೀಡಿದ ತಾಯಿ Read More »

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು

ಹಾವೇರಿ: ಮಗ ಮೃತಪಟ್ಟ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಹಾವೇರಿಯ ಬಸವೇಶ್ವರ ನಗರದಿಂದ ವರದಿಯಾಗಿದೆ.ತಂದೆ ಡಾ.ವೀರಭದ್ರಪ್ಪ ಗುಂಡಗಾವಿ, ಮಗ ಡಾ.ವಿನಯ ಗುಂಡಗಾವಿ ಮೃತ ದುರ್ದೈವಿಗಳು.ವೃತ್ತಿಯಲ್ಲಿ ತಂದೆ, ಮಗ ಇಬ್ಬರು ವೈದ್ಯರಾಗಿ ಸೇವೆ ಸಲ್ಲಿಸುತ್ತಿದ್ದರು ಎನ್ನಲಾಗಿದೆ. ಆಕಸ್ಮಿಕವಾಗಿ ವಿನಯ ಅವರು ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿದ್ದಾರೆ .ಈ ವಿಚಾರ ಕೇಳಿ ತಂದೆ ವೀರಭದ್ರಪ್ಪ ಅವರೂ ಕೂಡ ಹೃದಯಾಘಾತಕ್ಕೆ ಒಳಗಾಗಿ ಒಂದೇ ದಿನ ತಂದೆ ಮಗ ಮೃತಪಟ್ಟಿದ್ದಾರೆ.ಇಬ್ಬರ ಸಾವಿನಿಂದ ನೊಂದ ಕುಟುಂಬದಲ್ಲಿ ದು:ಖ ಮಡುಗಟದಟ್ಟಿದೆ.

ಮಗನ ಸಾವಿನ ಸುದ್ದಿ ಕೇಳಿ ತಂದೆಯೂ ಹೃದಯಾಘಾತದಿಂದ ಸಾವು Read More »

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ

ಎಮಿರೇಟ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಅರಂತೋಡು ಇದರ ವತಿಯಿಂದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿವರನ್ನು ಅ.20 ರಂದು ನಡೆದ ಕ್ರಿಕೆಟ್ ಪಂದ್ಯಾಟದ ಸಮರೋಪ ಸಮಾರಂಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆಯವರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂಧರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಟಿ.ಎಂ ಶಹೀದ್ ತೆಕ್ಕಿಲ್, ನಿವೃತ್ತ ದೈಹಿಕ ಶಿಕ್ಷಕ ಎ.ಸಿ ವಸಂತ, ಪ್ರಗತಿಪರ ಕೃಷಿಕರು ತೀರ್ಥರಾಮ ಪರ್ನೋಜಿ ಉಳುವಾರು, ಅಶ್ರಪ್ ಗುಂಡಿ, ಸಿದ್ಧೀಕ್ ಕೊಕ್ಕೊ, ಕೆ.ಎಂ

ಅರಂತೋಡು ಎಮಿರೇಟ್ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಸದಾನಂದ ಮಾವಜಿಯವರಿಗೆ ಸನ್ಮಾನ Read More »

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರಕಾರಗಳಿಗೆ ಮನವಿ ಮಾಡಲು ಡಾ. ವಿರೇಂದ್ರ ಹೆಗ್ಗಡೆ ಭೇಟಿ ಮಾಡಿದ ಹೋರಟಗಾರರು

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ರಿ ಸುಬ್ರಮಣ್ಯ ವಲಯ ಇದರ ವತಿಯಿಂದ ಇಂದು ಪರಮ ಪೂಜ್ಯ ಡಾ. ಡಿ ವೀರೇಂದ್ರ ಹೆಗ್ಗಡೆ ರವರನ್ನು ಭೇಟಿ ಮಾಡಿ ಕಸ್ತೂರಿ ರಂಗನ್ ವರದಿ ಜಾರಿ ವಿರೋಧಿಸಿ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆ ಇದರ ವತಿಯಿಂದ ಹರಿಹರದಲ್ಲಿ ನಡೆದ ಪ್ರತಿಭಟನ ಸಭೆಯ ಮನವಿಯನ್ನು ವಿರೇಂದ್ರ ಹೆಗ್ಗಡೆಯವರಿಗೆ ನೀಡಿ ಅವರ ಜೊತೆ ಕಸ್ತೂರಿ ರಂಗನ್ ವರದಿ ಜಾರಿ ಆಗದಂತೆ ಸರಕಾರಗಳಿಗೆ ಮನವಿ ನೀಡುವಂತೆ ವಿನಂತಿಸಲಾಯಿತುಮನವಿ ಸ್ವೀಕರಿಸಿದ ಪೂಜ್ಯರು ಕಸ್ತೂರಿ ರಂಗನ್ ವರದಿ ಜಾರಿಗೆ

ಕಸ್ತೂರಿ ರಂಗನ್ ವರದಿ ವಿರೋಧಿಸಿ ಸರಕಾರಗಳಿಗೆ ಮನವಿ ಮಾಡಲು ಡಾ. ವಿರೇಂದ್ರ ಹೆಗ್ಗಡೆ ಭೇಟಿ ಮಾಡಿದ ಹೋರಟಗಾರರು Read More »

ಮಹಾಮಳೆಗೆ ಅಣ್ಣ ತಂಗಿ ನಾಪತ್ತೆ

ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಬೆಂಗಳೂರು ಜನರ ಜೀವನ ಅಸ್ತವ್ಯಸ್ತಗೊಂಡಿದೆ. ಭಾರೀ ಮಳೆ ನಡುವೆ ನಗರದ ಕೆಂಗೇರಿ ಬಳಿ ಅಣ್ಣ, ತಂಗಿ ನಿನ್ನೆಯಿಂದ ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಅಣ್ಣ ಶ್ರೀನಿವಾಸ್ ಶ್ರೀನಿವಾಸನ ತಂಗಿ ನಾಪತ್ತೆಯಾದ ಮಕ್ಕಳು ಮಳೆನೀರಿನಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಇನ್ನು ನಾಪತ್ತೆಯಾಗಿರುವ ಮಕ್ಕಳಿಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದ್ದು, ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.

ಮಹಾಮಳೆಗೆ ಅಣ್ಣ ತಂಗಿ ನಾಪತ್ತೆ Read More »

ಸಿಲಿಂಡರ್ ಸ್ಪೋಟಗೊಂಡು ಐವರು ಸಾವು

ಸಿಕಂದರಾಬಾದ್ : ಸಿಕಂದರಾಬಾದ್ ಮನೆಯೊಂದರಲ್ಲಿ ಸೋಮವಾರ ರಾತ್ರಿ ಸಿಲಿಂಡರ್ ಸ್ಫೋಟಗೊಂಡು ಐವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.ಸ್ಫೋಟದಿಂದಾಗಿ ಮನೆಯ ಒಂದು ಭಾಗ ಕುಸಿದಿದೆ.ರಕ್ಷಣ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೀರತ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಧ್ರುವ ಕಾಂತ್ ಠಾಕೂರ್ ತಿಳಿಸಿದ್ದಾರೆ.ರಿಯಾಜುದ್ದೀನ್ ಎಂಬುವರ ಮನೆಯಲ್ಲಿ ರಾತ್ರಿ 8.30 ರಿಂದ 9 ರ ನಡುವೆ ಈ ಘಟನೆ ಸಂಭವಿಸಿದ್ದು, ಮನೆಯಲ್ಲಿ ಸುಮಾರು 19 ಜನರು ವಾಸಿಸುತ್ತಿದ್ದರು.ಎಂಟು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಯಿತು.ಕೆಲವರ ಸ್ಥಿತಿ ತುಂಬಾ ಗಂಭೀರವಾಗಿದೆ” ಎಂದು ಅವರು

ಸಿಲಿಂಡರ್ ಸ್ಪೋಟಗೊಂಡು ಐವರು ಸಾವು Read More »

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ

ವಿದ್ಯಾಮಾತಾ ಅಕಾಡೆಮಿಯಲ್ಲಿ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನೇಮಕಾತಿ ಪರೀಕ್ಷೆಗೆ ಪೂರ್ವ ತಯಾರಿ ತರಬೇತಿಯನ್ನು ಪಡೆದ ಬಸವರಾಜ್ ರವರು ಕರ್ನಾಟಕ ರಾಜ್ಯ ಪೊಲೀಸ್ ನ ಸಬ್ ಇನ್ಸ್ಪೆಕ್ಟರ್ 545 ಹುದ್ದೆಯ ನೇಮಕಾತಿ ಪ್ರಕ್ರಿಯೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಿ ನೇಮಕಾತಿಗೊಂಡಿರುತ್ತಾರೆ.ಮೂಲತಃ ಬೆಳಗಾವಿ ಜಿಲ್ಲೆಯ ಕಾಗವಡ ತಾಲೂಕಿನ ಕಾತ್ರಾಳ್ ಗ್ರಾಮದ ನಿವಾಸಿಗಳಾದ ಶಂಕರ ಮತ್ತು ಯಮುನವ್ವ ದಂಪತಿಗಳ ಪುತ್ರ ಬಸವರಾಜ ಮುದವಿ ರವರು ಪ್ರಸ್ತುತ ಸುಳ್ಯ ಆರಕ್ಷಕ ಠಾಣೆಯಲ್ಲಿ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮುದವಿಯವರು ಈ ಹಿಂದೆ ಬೆಳ್ಳಾರೆ ಆರಕ್ಷಕ

ವಿ. ಅಕಾಡೆಮಿಯ ವಿದ್ಯಾರ್ಥಿ ಬಸವರಾಜ ಮುದವಿ ಸಬ್ ಇನ್ಸ್ಪೆಕ್ಟರ್ ಆಗಿ ಆಯ್ಕೆ Read More »

ವಿಧಾನಪರಿಷತ್ ಚುನಾವಣೆ : ಆಲೆಟ್ಟಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಂದ ಮತದಾನ

ವಿಧಾನಪರಿಷತ್‌ ಚುನಾವಣೆ ಹಿನ್ನಲೆಯಲ್ಲಿ ಆಲೆಟ್ಟಿ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಗ್ರಾ.ಪಂ. ಸದಸ್ಯರು ಮತ ಚಲಾವಣೆ ಮಾಡಿದರು.ಗ್ರಾಮ ಪಂಚಾಯತ್ ಅಧ್ಯಕ್ಷೆ ವೀಣಾವಸಂತ ಆಲೆಟ್ಟಿ,ಉಪಾಧ್ಯಕ್ಷೆ ಕಮಲಾ ನಾಗಪಟ್ಟಣ, ಸದಸ್ಯರಾದ ದಿನೇಶ್ ಕಣಕ್ಕೂರು, ಸುದೇಶ್ ಅರಂಬೂರು, ಶಿವಾನಂದ ರಂಗತ್ತಮಲೆ, ಪುಷ್ಪಾವತಿ ಕುಡೆಕಲ್ಲು, ಶಶಿಕಲಾ ದೋಣಿಮೂಲೆ,ಭಾಗೀರಥಿ ಪತ್ತುಕುಂಜ,ಅನಿತಾ ಅರಂಬೂರು, ಶಾಂತಪ್ಪ ಪಿಂಡಿಬನ ಮತ ಚಲಾಯಿಸಿದರು.

ವಿಧಾನಪರಿಷತ್ ಚುನಾವಣೆ : ಆಲೆಟ್ಟಿ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಿಂದ ಮತದಾನ Read More »

ವಿಧಾನ ಪರಿಷತ್ ಚುನಾವಣೆಗೆ ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ

ಅಜ್ಜಾವರ : ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರು ವಿಧಾನ ಪರಿಷತ್ ಚುನಾವಣೆಗೆ ಮತದಾನ ಮಾಡಿದರು.ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರಾದ ರವಿರಾಜ ಕರ್ಲಪ್ಪಾಡಿ, ಸತ್ಯವತಿ ಬಸವನಪಾದೆ, ದಿವ್ಯಾ ಪಡ್ಡಂಬೈಲು, ಸರೋಜಿನಿ ಕರಿಯಮೂಲೆ, ರತ್ನಾವತಿ ಹನಿಯಡ್ಕ ತಮ್ಮ ಮತವನ್ನು ಚಲಾಯಿಸಿದರು.ಈ ಸಂದರ್ಭದಲ್ಲಿ ಬಿಜೆಪಿ ಸುಳ್ಯ ಮಂಡಲ ಕೋಶಾಧಿಕಾರಿ ಸುಬೋಧ್ ಶೆಟ್ಟಿ ಮೇನಾಲ, ಅಜ್ಜಾವರ ಶಕ್ತಿ ಕೇಂದ್ರ ಪ್ರಮುಖರಾದ ರಾಜೇಶ್ ಮೇನಾಲ, ಸುಳ್ಯ ಸಿಎ ಬ್ಯಾಂಕ್ ಅಧ್ಯಕ್ಷರಾದ ವಿಕ್ರಂ ಅಡ್ಪಂಗಾಯ, ಮಾಜಿ ತಾಲೂಕು ಪಂಚಾಯತ್ ಅಧ್ಯಕ್ಷರಾದ

ವಿಧಾನ ಪರಿಷತ್ ಚುನಾವಣೆಗೆ ಅಜ್ಜಾವರ ಗ್ರಾಮ ಪಂಚಾಯತ್ ನಲ್ಲಿ ಬಿಜೆಪಿ ಬೆಂಬಲಿತ ಸದಸ್ಯರಿಂದ ಮತದಾನ Read More »

ನಿವೃತ್ತ ಕ್ರಷಿ ಇಲಾಖೆಯ ಉದ್ಯೋಗಿ ಕೇಶವ ನಾಯಕ್ ಬೆಟ್ಟಂಪಾಡಿ ನಿಧನ

ಸುಳ್ಯ ನಗರದ ಬೆಟ್ಟಂಪಾಡಿ ಕೇಶವ ನಾಯಕ್ ಅಸೌಖ್ಯದಿಂದು ಅ.21 ರಂದು ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.ಅವರಿಗೆ 67 ವರ್ಷ ಪ್ರಾಯವಾಗಿತ್ತು.ಅವರು ಕ್ರಷಿ ಇಲಾಖೆಯ ನಿವೃತ್ತ ಉದ್ಯೋಗಿಯಾಗಿದ್ದರು.ಮ್ರತರು ಪತ್ನಿ ಉಷಾ,ಮಕ್ಕಳಾದ ಶರ್ಮಿಳ,ರೇಷ್ಮಾ,ರಮ್ಯ, ಕುಟುಂಬಸ್ಥರನ್ನು ಬಂಧುಗಳನ್ನು ಅಗಲಿದ್ದಾರೆ.

ನಿವೃತ್ತ ಕ್ರಷಿ ಇಲಾಖೆಯ ಉದ್ಯೋಗಿ ಕೇಶವ ನಾಯಕ್ ಬೆಟ್ಟಂಪಾಡಿ ನಿಧನ Read More »

error: Content is protected !!
Scroll to Top