ಜಗಳ ಬಿಡಿಸಲು ಹೋದ ವಿದ್ಯಾರ್ಥಿಯ ಭೀಕರ ಕೊಲೆ
ಶಿವಮೊಗ್ಗದ ಸೂಳೆಬೈಲು ಬಡಾವಣೆಯಲ್ಲಿ ಜಗಳ ಬಿಡಿಸಲು ಹೋಗಿದ್ದ 16 ವರ್ಷದ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿ ಸಂಕೇತ್‌ನನ್ನು 9ನೇ ತರಗತಿಯ ನಾಲ್ವರು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಕೊಲೆಗೈದಿದ್ದಾರೆ. ಸೋಮವಾರ ಸ್ಪೆಷಲ್ ಕ್ಲಾಸ್ ಮುಗಿಸಿ ಹೊರಬರುತ್ತಿದ್ದಾಗ ವಿದ್ಯಾರ್ಥಿಗಳ ನಡುವೆ ಜಗಳವಾಗುತ್ತಿತ್ತು. ಅದನ್ನು ತಪ್ಪಿಸಲು ಹೋದ ಸಂಕೇತ್‌ಗೆ ಎದೆಯ ಭಾಗಕ್ಕೆ ಬಲವಾಗಿ ಗುದ್ದಿದ ಪರಿಣಾಮ ಕುಸಿದು ಬಿದ್ದಿದ್ದಾನೆ. ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ. ತುಂಗಾನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆಯಲಾಗಿದೆ.
ಜಗಳ ಬಿಡಿಸಲು ಹೋದ ವಿದ್ಯಾರ್ಥಿಯ ಭೀಕರ ಕೊಲೆ Read More »










