ಜ.12ಕ್ಕೆ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಉದ್ಘಾಟನೆ
ಸುಳ್ಯ: ಸುಳ್ಯ ತಾಲೂಕಿನ ಕುಕ್ಕುಜಡ್ಕದ ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಚೊಕ್ಕಾಡಿ ಪ್ರೌಢ ಶಾಲೆಯ ಸುವರ್ಣ ಮಹೋತ್ಸವ ಕಾರ್ಯಕ್ರಮ ಜ.12,13,14 ರಂದು ನಡೆಯಲಿದೆ. 3 ದಿನಗಳ ಕಾಲ ನಡೆಯುವ ಸುವರ್ಣ ಮಹೋತ್ಸವಕ್ಕೆ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಚೊಕ್ಕಾಡಿ ಎಜ್ಯುಕೇಶನ್ ಸೊಸೈಟಿಯ ಅಧ್ಯಕ್ಷರು ಹಾಗೂ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷರಾದ ಮಾಜಿ ಸಚಿವ ಎಸ್.ಅಂಗಾರ ಹೇಳಿದ್ದಾರೆ.ಅವರು ಸುಳ್ಯ ಪ್ರೆಸ್ ಕ್ಲಬ್ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಸುವರ್ಣ ಮಹೋತ್ಸವದ ಹಿನ್ನಲೆಯಲ್ಲಿ ಶಾಲೆಯ ಸಂಪೂರ್ಣ ಅಭಿವೃದ್ಧಿಗೆ ರೂಪುರೇಷೆ ತಯಾರಿಸಲಾಗಿದೆ. ಶಾಲೆಯಲ್ಲಿ ಗುಣಮಟ್ಟದ […]









