Author name: Tejas

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ನಡೆದಿದೆ.ಉಪ್ಪಿನಂಗಡಿ ಗ್ರಾಮ ಪುತ್ತೂರು ನಿವಾಸಿ ಬಿ.ಕೆ ಅಬ್ದುಲ್ ರಹೀಮಾನ್ ಎಂಬವರು ಪುತ್ತೂರು ತಾಲೂಕು ಉಪ್ಪಿನಂಗಡಿ ಗ್ರಾಮದ ಪೆರಿಯಡ್ಕ ಎಂಬಲ್ಲಿ ಕೆ.ಜಿ.ಎನ್ ಜನರಲ್ ಸ್ಟೋರ್ ಹೊಂದಿದ್ದು, ವ್ಯಾಪಾರ ಮಾಡಿಕೊಂಡಿದ್ದಾಗ, ಪರಿಚಯ ಇರುವ ಆರೋಪಿ ಜಕಾರಿಯ ಎಂಬುವರು ಏಕಾಏಕಿಯಾಗಿ ಅಂಗಡಿ ಒಳಗಡೆ ಅಕ್ರಮ ಪ್ರವೇಶ ಮಾಡಿ ಹಲ್ಲೆ ನಡೆಸಿದ್ದು, ಈ ವೇಳೆ ಇತರ ಆರೊಪಿಗಳಾದ ಹಮೀದ್, ರಫಿಕ್, […]

ಅಂಗಡಿಗೆ ನುಗ್ಗಿ ಅಂಗಡಿ ಮಾಲೀಕನಿಗೆ ಹಲ್ಲೆ Read More »

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬಿಜೆಪಿ ಯುವ ಮುಖಂಡ ಪ್ರವೀಣ್ ಹತ್ಯೆ ಪ್ರಕರಣದ ಮೂವರು ಆರೋಪಿಗಳ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಸುಳ್ಯ ತಾಲೂಕಿನ ಬೆಳ್ಳಾರೆಯ ನೆಟ್ಟಾರು ನಿವಾಸಿ ಬಿಜೆಪಿ ಯುವ ಮುಂಖಡ ಪ್ರವೀಣ್ ನೆಟ್ಟಾರು ಎಂಬಾತನನ್ನು ಆತನ ಕೋಳಿ ಅಂಗಡಿ ಬಳಿಯೇ ಕಳೆದ ವರ್ಷ ಮಾರಕಾಸ್ತ್ರಗಳಿಂದ ಮಾರಣಾಂತಿಕವಾಗಿ ಹಲ್ಲೆ ನಡೆಸಲಾಗಿತ್ತು. ಇದರಿಂದ ಗಂಭೀರವಾಗಿ ಗಾಯಗೊಂಡಿದ್ದ ಪ್ರವೀಣ್ ನೆಟ್ಟಾರು ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದರು.ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟಿಗೆ ಮೂವರು ಆರೋಪಿಗಳು ಜಾಮೀನು ಅರ್ಜಿ ಸಲ್ಲಿಸಿದ್ದರು. ನ್ಯಾಯಮೂರ್ತಿ

ಪ್ರವೀಣ್ ನೆಟ್ಟಾರು ಹತ್ಯೆ : ಆರೋಪಿಗಳ ಜಾಮೀನು ಅರ್ಜಿ ವಜಾಗೊಳಿಸಿದ ಹೈಕೋರ್ಟ್ Read More »

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆಯ ಗುರಿ : ಡಾ.ವಿರೇಂದ್ರ

ಸುಳ್ಯ : ದುಶ್ಚಟ ಮುಕ್ತ ಸಮಾಜಕ್ಕಾಗಿ ಹಾಗೂ ಮದ್ಯಮುಕ್ತ ನಾಡಿಗಾಗಿ ಜನಜಾಗೃತಿ ವೇದಿಕೆ ನಿರಂತರ ಎಚ್ಚರಿಕೆ ನೀಡುತ್ತಿದೆ. ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕೆ ಸಂಕಲ್ಪ ಮಾಡಿ ಜನಜಾಗೃತಿ ವೇದಿಕೆ ಕಾರ್ಯಪ್ರವೃತ್ತವಾಗಿದೆ ಎಂದು ಧರ್ಮಸ್ಥಳ ಧರ್ಮಾಧಿಕಾರಿಗಳು ಹಾಗೂ ರಾಜ್ಯಸಭಾ ಸದಸ್ಯರಾದ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ಹೇಳಿದ್ದಾರೆ .ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಸುಳ್ಯದ ಅಮರಶ್ರೀಭಾಗ್ ಕುರುಂಜಿ

ದುಶ್ಚಟ ಮುಕ್ತ ಸಮಾಜ ನಿರ್ಮಾಣ ಜನಜಾಗೃತಿ ವೇದಿಕೆಯ ಗುರಿ : ಡಾ.ವಿರೇಂದ್ರ Read More »

ಅ.3ಕ್ಕೆ ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ‌ಸಮಾವೇಶ

ಸುಳ್ಯ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ದ. ಕ. ಜಿಲ್ಲೆ-02, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದ.ಕ ಜಿಲ್ಲೆ ಇದರ ವತಿಯಿಂದ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ‌ಸಮಾವೇಶ ಅ.3 ರಂದು ಸುಳ್ಯದ ಅಮರಶ್ರೀಭಾಗ್ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಲಿದೆ ಎಂದು ಜನಜಾಗೃತಿ ವೇದಿಕೆಯ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ .ವೀರೇಂದ್ರ ಹೆಗ್ಗಡೆ

ಅ.3ಕ್ಕೆ ಸುಳ್ಯದಲ್ಲಿ ಗಾಂಧಿಸ್ಮೃತಿ, ಜನಜಾಗೃತಿ ಜಾಥಾ ಮತ್ತು ‌ಸಮಾವೇಶ Read More »

ಅ.1ಕ್ಕೆ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಗಾಣಿಗ ಸಮ್ಮಿಲನ ಕಾರ್ಯಕ್ರಮ

ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಗಾಣಿಗ ಸಮ್ಮಿಲನ ಕಾರ್ಯಕ್ರಮ ಅ.1ರಂದು ಕೇರ್ಪಳ ದುರ್ಗಾ ಪರಮೇಶ್ವರಿ ಕಲಾ ಮಂದಿರದಲ್ಲಿ ನಡೆಯಲಿದೆ ಎಂದು ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಉದ್ದಂತಡ್ಕ ತಿಳಿಸಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಅಂದು ಬೆಳಗ್ಗೆ ಸಂಘದ ವಾರ್ಷಿಕ ಮಹಾಸಭೆಯು ಚಂದ್ರಶೇಖರ ಉದ್ದಂತಡ್ಕ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಮುಖ್ಯ ಅತಿಥಿಗಳಾಗಿಹಿರಿಯರಾದ ಶಂಕರ ಪಾಟಾಳಿ ಪರಿವಾರಕಾನ, ಅಪ್ಪು ಮಾಸ್ತರ್ ಜಯನಗರ,

ಅ.1ಕ್ಕೆ ಪಾಟಾಳಿ ಯಾನೆ ಗಾಣಿಗ ಸಮಾಜ ಸೇವಾ ಸಂಘದ ವಾರ್ಷಿಕ ಮಹಾ ಸಭೆ ಹಾಗೂ ಗಾಣಿಗ ಸಮ್ಮಿಲನ ಕಾರ್ಯಕ್ರಮ Read More »

ಭೀಕರ ಬೈಕ್ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು

ಉಪ್ಪಿನಂಗಡಿ ಪುತ್ತೂರು ರಸ್ತೆಯ ಕೆಮ್ಮಾಯಿ ಪೆಟ್ರೋಲ್ ಬಂಕ್ ಬಳಿ ನಡೆದ ಭೀಕರ ಬೈಕ್ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಇಂದು ನಡೆದಿದೆ.ಸೇಡಿಯಾಪು ಬಳಿಯ ನಿವಾಸಿ ಚೈತ್ರೇಶ್ ಯಾನೆ ಚರಣ್ ಮೃತ ಬೈಕ್ ಸವಾರ ಎಂದು ಗುರುತಿಸಲಾಗಿದೆ. ಬೈಕ್ ಸ್ಕಿಡ್ ಆಗಿ ಬಿದ್ದು ಅಪಘಾತ ಸಂಭವಿಸಿದೆ . ಸವಾರನ ತಲೆ ಮತ್ತು ಭಜಕ್ಕೆ ಗಂಭೀರ ಗಾಯವಾಗಿತ್ತು. ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ತೆರಳಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಭೀಕರ ಬೈಕ್ ಅಪಘಾತದಲ್ಲಿ ಯುವಕ ಸ್ಥಳದಲ್ಲೇ ಸಾವು Read More »

ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಭಾರಿ ಮಳೆ, ಪ್ರವಾಹ ಹಿನ್ನೆಲೆಯಲ್ಲಿ ಕಡಬ ತಾಲೂಕಿನ ಎಲ್ಲ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಇಂದು (ಜು.24) ರಜೆ ಘೋಷಿಸಿ ಕಡಬ ತಹಸೀಲ್ದಾರ್ ಆದೇಶಿಸಿದ್ದಾರೆ.ಕಡಬ ತಾಲೂಕಿನಲ್ಲಿ ಕಳೆದ ಮೂರು ದಿವಸಗಳಿಂದ ಭಾರೀ ಮಳೆ ಸುರಿಯುತ್ತಿದ್ದು ಹೊಳೆ ತೊರೆಗಳು ತುಂಬಿ ಹರಿಯುತ್ರಿವೆ

ಕಡಬ ತಾಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ರಜೆ ಘೋಷಣೆ Read More »

ದೇವರಹಳ್ಳಿ- ಏನೆಕಲ್ಲು ಸಂಚಾರ ಬಂದ್

ಭಾರೀ ಮಳೆ ಮುಂದುವರಿದಿದ್ದು ಸುಬ್ರಹ್ಮಣ್ಯ ಸಮೀಪದ ಕಲ್ಲಾಜೆ ಹೊಳೆಯ ನೆರೆ ನೀರು ಹೊಳೆ ಬದಿಯ ತೋಟಗಳಿಗೆ ನುಗ್ಗಿದ್ದು, ಮನೆಗಳಿಗೂ ನುಗ್ಗುವ ಭೀತಿ ಉಂಟಾಗಿದೆ. ದೇವರಹಳ್ಳಿ- ಏನೆಕಲ್ಲು ಸಂಚಾರವು ಬಂದ್ ಆಗಿದೆ.ಕಲ್ಲಾಜೆ ಹೊಳೆಯಲ್ಲಿ ಹೂಳು ತುಂಬಿರುವುದರಿಂದ ನೀರಿನ ಸರಾಗ ಹರಿವಿಗೆ ತಡೆಯಾಗಿ ನೀರು ನುಗ್ಗುತ್ತಿದೆ ಎಂದು ಸ್ಥಳೀಯರು ದೂರಿದ್ದಾರೆ. ಲೋಕೇಶ್, ಮಹೇಶ್ , ಯಶೋಧರ ಮಾಣಿಬೈಲು, ರಾಘವ ಮಾಣಿಬೈಲು ಮೊದಲಾದವರ ಕೃಷಿ ತೋಟ ಜಲಾವೃತಗೊಂಡಿದೆ. ಯಶೋಧರ ಹಾಗೂ ಚಂದ್ರಕಲಾ ಎಂಬರ ಮನೆಗೆ ನೀರು ಆವರಿಸುವ ಬೀತಿ ಎದುರಾಗಿದೆ. ಕಳೆದ

ದೇವರಹಳ್ಳಿ- ಏನೆಕಲ್ಲು ಸಂಚಾರ ಬಂದ್ Read More »

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ

ಸುಳ್ಯ ಪಾಣತ್ತೂರು ಸಂಪರ್ಕ ಕಡಿತ ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ವರದಿಯಾಗಿದೆ.ರಸ್ತೆಯ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು , ಪೊಲೀಸ್ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬಾಟೋಳಿ ಭಾಗದಲ್ಲಿ ಬಾರಿ

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ Read More »

ವೇಶ್ಯಾವಟಿಕೆ ಅಡ್ಡೆಗೆ ಪೊಲೀಸ್ ದಾಳಿ

ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ.ಆರೋಪಿಗಳ ಪ್ಯೆಕಿ ಖಾಲಿದ್‌ ತಲೆಮರೆಸಿಕೊಂಡಿದ್ದು, ಸಲಾಮತ್‌, ಚಂದ್ರರನ್ನು ವಶಕ್ಕೆ ಪಡೆಯಲಾಗಿದೆ.ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಮಾಹಿತಿ ಸಿಕ್ಕಿರುವ ಹಿನ್ನಲೆಯಲ್ಲಿ ಶೋಧನಾ ವಾರೆಂಟ್‌ ಪಡೆದುಕೊಂಡು ಸಿಬಂದಿಗಳು ದಾಳಿ ನಡೆಸಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿದ್ದ 4 ಮೊಬೈಲ್‌ ಪೋನ್‌ಗಳು, 10000 ರೂ.ನಗದು, -ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಣಿಪಾಲ

ವೇಶ್ಯಾವಟಿಕೆ ಅಡ್ಡೆಗೆ ಪೊಲೀಸ್ ದಾಳಿ Read More »

error: Content is protected !!
Scroll to Top