ಜುಲೈ 23: ತೆಕ್ಕಿಲ್ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50 ನೇ ವರ್ಷದ ಪುಣ್ಯಸ್ಮರಣೆ ಹಾಗೂ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ
ಅರಂತೋಡಿನ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಟಾನದ ವತಿಯಿಂದ ತೆಕ್ಕಿಲ್ ಮೊಹಮ್ಮದ್ ಹಾಜಿಯವರ 50ನೇ ವರ್ಷದ ಪುಣ್ಯಸ್ಮರಣೆ ಹಾಗೂ ಸ್ಪೀಕರ್ ಯು.ಟಿ. ಖಾದರ್ ಅವರಗೆ ತೆಕ್ಕಿಲ್ ಎಕ್ಸಲೆನ್ಸ್ ಪ್ರಶಸ್ತಿ ಪ್ರದಾನ ಸಮಾರಂಭ ಜು.23ರಂದು ಬೆಳಿಗ್ಗೆ 10 ಗಂಟೆಗೆ ಅರಂತೋಡು ತೆಕ್ಕಿಲ್ ಸಮುದಾಯ ಭವನದಲ್ಲಿ ನಡೆಯಲಿದೆ ಎಂದು ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನದ ಅಧ್ಯಕ್ಷ ಟಿ.ಎಂ.ಶಹೀದ್ ತೆಕ್ಕಿಲ್ ಹೇಳಿದ್ದಾರೆ. ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಕೇರಳ ಸರಕಾರದ ಬಂದರು ಮತ್ತು ವಸ್ತು ಸಂಗ್ರಹಾಲಯ ಸಚಿವರಾದ ಅಹಮ್ಮದ್ ದೇವರಕೋವಿಲ್ ಕಾರ್ಯಕ್ರಮವನ್ನು ಉದ್ಘಾಟಿಸಿ […]










