Author name: Tejas

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಇಂದು ಸಾರ್ವಜನಿಕರ ಕುಂದು-ಕೊರತೆ ಆಲಿಸಿದರು. ಈ ವೇಳೆ ಜಿಲ್ಲೆಯ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳು ತಮ್ಮ ಭಾಗದ ಸಮಸ್ಯೆ, ಬೇಡಿಕೆಗಳು ಮತ್ತು ಅಹವಾಲುಗಳನ್ನು ಸಂಸದರ ಗಮನಕ್ಕೆ ತಂದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಸಂಸದರು, ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳೊಂದಿಗೆ ಸಮಸ್ಯೆಗಳ ನಿವಾರಣೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇದಲ್ಲದೇ ಸಾರ್ವಜನಿಕ ಭೇಟಿ ವೇಳೆ ವಿವಿಧ […]

ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರಿಂದ ಸಾರ್ವಜನಿಕರ ಅಹವಾಲು ಸ್ವೀಕಾರ Read More »

ಅಡ್ತಲೆ : ಮರ ಬಿದ್ದು ಹಾನಿ

ಅಡ್ತಲೆ ಶಾಲೆಯ ಬಳಿ ಬೃಹತ್ ಆಕಾರದ ಮೇ ಪ್ಲವರ್ ಮರ ಆರಂತೋಡು -ಏಳಿಮಲೆ ರಸ್ತೆಗೆ ಅಡ್ಡಲಾಗಿ ಬಿದ್ದು ಅಡ್ತಲೆ ಶಾಲಾ ಗೆಟ್, ಕಾಂಪೌಂಡ್, ವಿದ್ಯುತ್ ಕಂಬಗಳು ಹಾನಿಯಾದ ಘಟನೆ ಮೇ.19ರಂದು ವರದಿಯಾಗಿದೆ.ಬಳಿಕ ಅಡ್ತಲೆಯ ಯುವಕರು ರಸ್ತೆ ಮರ ತೆರವು ಮಾಡಿ ವಾಹನ ಸಂಚಾರಕ್ಕೆ ಅನುಕೂಲ ಮಾಡಿ ಕೊಟ್ಟರು.

ಅಡ್ತಲೆ : ಮರ ಬಿದ್ದು ಹಾನಿ Read More »

ಇಂದು ಪವರ್ ಕಟ್

ಮೆಸ್ಕಾಂ ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ 11 ಕೆ.ವಿ. ಫೀಡರುಗಳಲ್ಲಿ ಮೇ. 19 ಮಂಗಳವಾರದಂದು ತುರ್ತು ನಿಯತಕಾಲಿಕ ನಿರ್ವಹಣಾ ಕಾರ್ಯವನ್ನು ಹೊಂದಿದೆ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪೋ, ತೊಡಿಕಾನ, ಕೋಲ್ಟಾರ್, ದೇವರಗುಂಡ, ಅಜ್ಜವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10:00 ರಿಂದ ಸಾಯಂಕಾಲ 6:00 ರ ತನಕ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಗ್ರಾಹಕರು ಒದಗಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇಂದು ಪವರ್ ಕಟ್ Read More »

ತೊಡಿಕಾನ : ಕಿರಣ್ ಚಾಂಬಾಡು ನಿಧನ

ಸುಳ್ಯ ತಾಲೂಕು ತೊಡಿಕಾನ ಗ್ರಾಮದ ಚಾಂಬಾಡು ನಿವಾಸಿ ಐತ್ತಪ್ಪ ಅವರ ಮಗ ಕಿರಣ್ ಮಡಿಕೇರಿಯಲ್ಲಿ ಮರ ಕಡಿಯುತ್ತಿದ್ದ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ವರದಿಯಾಗಿದೆ.ಮ್ರತರು ಇಬ್ಬರು ಸಹೋದರು,ಹಾಗೂ ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.

ತೊಡಿಕಾನ : ಕಿರಣ್ ಚಾಂಬಾಡು ನಿಧನ Read More »

ಜಯಚಂದ್ರ ತೊಡಿಕಾನ ನಿಧನ

ತೊಡಿಕಾನ ಗ್ರಾಮದ ಕಲ್ಲಪಳ್ಳಿ ನಿವಾಸಿ ಬಳ್ಳದಲ್ಲಿ ನೆಲೆಸಿದ್ದ, ಜಯಚಂದ್ರ (57ವ.) ಹೃದಯಾಘಾತದಿಂದ ಮೇ.18ರಂದು ರಾತ್ರಿ ನಿಧಾನರಾಗಿರುವುದಾಗಿತಿಳಿದುಬಂದಿದೆ. ಇವರು ಬಳ್ಪ ಪೇಟೆಯಲ್ಲಿ ಪ್ಯಾನ್ಸಿ ಅಂಗಡಿಯನ್ನು ನಡೆಸುತ್ತಿದ್ದರು‌.ಮೃತರು ಪತ್ನಿ, ಪುತ್ರಿ, ಸಹೋದರ, ಸಹೋದರಿಯರು, ಕುಟುಂಬಸ್ಥರು ಹಾಗೂ ಬಂಧು ಮಿತ್ರರನ್ನು ಅಗಲಿದ್ದಾರೆ. ಮೃತರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ ನಂತರ ಬಳ್ಳದಲ್ಲೇ ನೆರವೇರಲಿರುವುದಾಗಿ ತಿಳಿದುಬಂದಿದೆ.ಜಯಚಂದ್ರ ಕ್ರಷಿ ಬಿಂಬ ಪತ್ರಿಕೆಯ ಸಂಪಾದಕ ರಾಧಾಕ್ರಷ್ಣ ತೊಡಿಕಾನ ಅವರ ಸಹೋದರ.

ಜಯಚಂದ್ರ ತೊಡಿಕಾನ ನಿಧನ Read More »

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ

ಸುಳ್ಯ ತಾಲೂಕು ಮಾಹಿತಿ ಕೇಂದ್ರ ಮತ್ತು ಮುಸ್ಲಿಂ ಯೂತ್ ಫೆಡರೇಶನ್ ಇದರ ವತಿಯಿಂದ ಸುಳ್ಯ ತಾಲ್ಲೂಕು ಪಂಚಾಯತ್ ಸಭಾಂಗಣದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಮಾಹಿತಿ ಶಿಬಿರ ಮತ್ತು SSLCಯಲ್ಲಿ ಮತ್ತು PUC ಯಲ್ಲಿ ರಾಜ್ಯಮಟ್ಟದಲ್ಲಿ ಅತಿಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಶುಭಾಹಾರೈಸಲಾಯಿತು.

ಸುಳ್ಯ : ವಿದ್ಯಾರ್ಥಿಗಳ ಶೈಕ್ಷಣಿಕ ಮಾಹಿತಿ ಶಿಬಿರ Read More »

ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ

ಕರ್ನಾಟಕ ರಾಜ್ಯದ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು KRS ಪಕ್ಷದಿಂದ ಲಕ್ಷ ಸಹಿ ಸಂಗ್ರಹ ಅಭಿಯಾನ ಮಾಡಿ ರಾಷ್ಟ್ರಪತಿ ಮತ್ತು ರಾಜ್ಯಪಾರಿಗೆ ಸಲ್ಲಿಸಲಾಯಿತು.ಸುಳ್ಯದಲ್ಲಿ ಸಹಿ ಸಂಗ್ರಹ‌ ಅಭಿಯಾನದ ನೇತ್ರತ್ವವನ್ನು ಕೆ.ಆರ್.ಎಸ್ ತಾಲೂಕು ಅಧ್ಯಕ್ಷ ಶಾರೀಕ್ ಡಿ.ಎಂ ಹಾಗೂ ಇತರ ಪದಾಧಿಕಾರಿಗಳು ವಹಿಸಿದ್ದರು.

ರಾಜ್ಯ ಸರಕಾರಿ ಕಚೇರಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಕೆ.ಆರ್.ಎಸ್ ಪಕ್ಷದ ವತಿಯಿಂದ ಮನವಿ Read More »

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ

ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಸಂಸದ ಕ್ಯಾ.  ಬ್ರಿಜೇಶ್ ಚೌಟ ಅವರು ಮೇ 19ರ ಮಂಗಳವಾರದಂದು ಸಾರ್ವಜನಿಕರ ಭೇಟಿಗೆ ತಮ್ಮ ಕಚೇರಿಯಲ್ಲಿ ಲಭ್ಯವಿರುತ್ತಾರೆ. ಪಡೀಲ್‌ನಲ್ಲಿರುವ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ನಾಳೆ ಬೆಳಗ್ಗೆ 10ರಿಂದ ಮಧ್ಯಾಹ್ನ12ಗಂಟೆಯವರೆಗೆ ಅವರು ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ, ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ. ಸಾರ್ವಜನಿಕರು ಹಾಗೂ ಕ್ಷೇತ್ರದ ಮತದಾರರು ತಮ್ಮ ಸಮಸ್ಯೆಗಳು ಮತ್ತು ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಸಂಸದರನ್ನು ಖುದ್ದಾಗಿ ಭೇಟಿಯಾಗಿ ಚರ್ಚಿಸಬಹುದಾಗಿದೆ. ಆ ಮೂಲಕ ಸಾರ್ವಜನಿಕರು ತಮ್ಮ ಕುಂದು-ಕೊರತೆಗಳನ್ನು ಸಂಸದರ

ಸಂಸದ ಕ್ಯಾ. ಬ್ರಿಜೇಶ್ ಚೌಟ ನಾಳೆ ಸಾರ್ವಜನಿಕರ ಭೇಟಿಗೆ ಲಭ್ಯ Read More »

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರೂ11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ

ಮಂಗಳೂರು: ಮಂಗಳೂರು ನಗರದ ಹೊರವಲಯದ ಪ್ರಮುಖ ಹೆದ್ದಾರಿ ಜಂಕ್ಷನ್‌ಗಳಾದ ಬೈಕಂಪಾಡಿ ಮತ್ತು ಕೂಳೂರು ಬಳಿ ಸುಗಮ ಸಂಚಾರ ಹಾಗೂ ಅಪಘಾತ ಮುಕ್ತ ವಲಯ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದಿಂದ ಮಹತ್ವದ ಕಾಮಗಾರಿಗಳಿಗೆ ಅನುಮೋದನೆ ನೀಡಿ ಅನುದಾನ ಮಂಜೂರು ಮಾಡಿದೆ ಎಂದು ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ರಾ. ಹೆ. 66ರಲ್ಲಿ ಬರುವ ಈ ಎರಡು ಪ್ರಮುಖ ಜಂಕ್ಷನ್‌ನಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ಅಂಡರ್‌ಪಾಸ್ ನಿರ್ಮಾಣಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು

ಬೈಕಂಪಾಡಿ, ಕೂಳೂರು ಜಂಕ್ಷನ್ ಬಳಿ ಅಂಡರ್ ಪಾಸ್ ನಿರ್ಮಾಣಕ್ಕೆ ಕೇಂದ್ರ ಸರ್ಕಾರದಿಂದ ರೂ11.63 ಕೋ ರೂ. ಅಧಿಕ ಅನುದಾನ ಮಂಜೂರು: ಸಂಸದ ಕ್ಯಾ. ಬ್ರಿಜೇಶ್ ಚೌಟ Read More »

ಅರಂಬೂರು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅಶೋಕ ಪೀಚೆ ಆಯ್ಕೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸಂಪಾಜೆ ವಲಯ ಅರಂಬೂರು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅಶೋಕ ಪೀಚೆ ಆಯ್ಕೆಗೊಂಡಿದ್ದಾರೆ.

ಅರಂಬೂರು ಒಕ್ಕೂಟದ ನೂತನ ಅಧ್ಯಕ್ಷರಾಗಿ ಅಶೋಕ ಪೀಚೆ ಆಯ್ಕೆ Read More »

error: Content is protected !!
Scroll to Top