Author name: Tejas

ದೋಸ್ತ್ ವಾಹನ ಬುಲೆಟ್ ಬೈಕ್ ನಡುವೆ ಭೀಕರ ಅಪಘಾತ ಬುಲೆಟ್ ಸವಾರ ಸಾವು

ಸುಳ್ಯ ಸಮೀಪದ ಸುಳ್ಯ ನಾಗಪಟ್ಟಣ ರಸ್ತೆಯಲ್ಲಿ ದೋಸ್ತ್ ವಾಹನ ಮತ್ತು ಬುಲೆಟ್ ಬೈಕ್ ನಡುವೆ ಅಪಘಾತ ಸಂಭವಿಸಿ ಬುಲೆಟ್ ಬೈಕ್ ಸವಾರ ಸಾವನ್ನಪ್ಪಿದ ಘಟನೆ ಇದೀಗ ವರದಿಯಾಗಿದೆ.ಬುಲೆಟ್ ಬೈಕ್ ಸವಾರ ಕಲ್ಲಪಳ್ಳಿ ನಿವಾಸಿ ಪ್ರದೀಪ್ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ.ಹೆಚ್ಚಿನ ಮಾಹಿತಿ‌ ತಿಳಿದು ಬರಬೇಕಾಗಿದೆ.

ದೋಸ್ತ್ ವಾಹನ ಬುಲೆಟ್ ಬೈಕ್ ನಡುವೆ ಭೀಕರ ಅಪಘಾತ ಬುಲೆಟ್ ಸವಾರ ಸಾವು Read More »

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ

ಸುಳ್ಯ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಗಳಲ್ಲಿ ತೆರವಾಗಿರುವ ಒಟ್ಟು 7 ಅಂಗನವಾಡಿ ಕಾರ್ಯಕರ್ತೆ ಹಾಗೂ 18 ಅಂಗನವಾಡಿ ಸಹಾಯಕಿಯರ ಗೌರವಧನ ಸೇವೆಗಳ ಹುದ್ದೆಗೆ ಅನ್‌ಲೈನ್‌ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವ ಅವಧಿಯನ್ನು ದಿನಾಂಕ: 20.10.2025ರವರೆಗೆ ವಿಸ್ತರಿಸಲಾಗಿದೆ. ಪ್ರಸ್ತುತ 75 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅವುಗಳು ಪರಿಶೀಲನೆಗೆ ಲಭ್ಯವಾಗುವುದಿಲ್ಲ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ 3 ಹಂತಗಳನ್ನು ಪೂರ್ಣಗೊಳಿಸಿದ್ದಲ್ಲಿ ಮಾತ್ರ ಅರ್ಜಿಗಳು ಪರಿಶೀಲನೆಗೆ ಲಭ್ಯವಾಗುತ್ತದೆ. ಪ್ರತಿ ಹಂತ ಪೂರ್ಣಗೊಂಡಾಗ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಗೆ 1ನೇ ಹಂತ, 2ನೇ ಹಂತ,

ಅಂಗನವಾಡಿ ಕಾರ್ಯಕರ್ತೆ ಹುದ್ದೆ ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ Read More »

ಅಡ್ತಲೆಯಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ

ಯುವಜನ ಸಂಯುಕ್ತ ಮಂಡಳಿ (ರಿ.) ಸುಳ್ಯ ಹಾಗೂ ಸ್ಪಂದನ ಗೆಳೆಯರ ಬಳಗ (ರಿ.) ಅಡ್ತಲೆ ಇವರ ಆಶ್ರಯದಲ್ಲಿ ಗ್ರಾಮ ಪಂಚಾಯತ್ ಅರಂತೋಡು, ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ಹಾಗೂ ಚಂದನ ಯುವತಿ ಮಂಡಲ (ರಿ.) ಅಡ್ತಲೆ ಇವರ ಸಹಕಾರದೊಂದಿಗೆ ಪಂಚಸಪ್ತತಿ ಸ್ವಚ್ಛತಾ ಅಭಿಯಾನ-2025 ,75 ದಿನಗಳ ಸ್ವಚ್ಚತಾ ಅಭಿಯಾನಕ್ಕೆ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಕೇಶವ ಅಡ್ತಲೆ ಇವರು ದೀಪ ಬೆಳಗುವುದರ ಮೂಲಕ ಚಾಲನೆಯನ್ನು ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಗೌರವ ಸಲಹೆಗಾರರಾದ ಭವಾನಿ ಶಂಕರ ಅಡ್ತಲೆ,

ಅಡ್ತಲೆಯಲ್ಲಿ ಪಂಚಸಪ್ತತಿ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ Read More »

ಮೈಸೂರಿನಲ್ಲಿ ಬೆಲೂನ್ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ರೇಪ್ ಆ್ಯಂಡ್ ಮರ್ಡರ್ : ಆರೋಪಿ ಕಾಲಿಗೆ ಗುಂಡು

ದಸರಾ ಸಂದರ್ಭದಲ್ಲಿ ಮೈಸೂರಿಗೆ ಬೆಲೂನ್ ಮಾರಲು ವಲಸೆ ಬಂದಿದ್ದ 10 ವರ್ಷದ ಬಾಲಕಿ ಅತ್ಯಾಚಾರಕ್ಕೊಳಗಾಗಿ ಹತ್ಯೆಯಾಗಿದ್ದಾಳೆ.ಸಿಸಿಟಿವಿ ದೃಶ್ಯದ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ಪೊಲೀಸರು, ಆರೋಪಿ ಕಾರ್ತಿಕ್‌ನನ್ನು ಕೊಳ್ಳೇಗಾಲದಲ್ಲಿ ಕಾಲಿಗೆ ಗುಂಡು ಹಾರಿಸಿ ಬಂಧಿಸಿದ್ದಾರೆ. ಬಾಲಕಿಯ ಕುಟುಂಬ ಕಲಬುರಗಿಯಿಂದ ಬಲೂನ್ ವ್ಯಾಪಾರಕ್ಕಾಗಿ ಮೈಸೂರಿಗೆ ಬಂದಿತ್ತು. ಇವರು ದೊಡ್ಡಕೆರೆ ಮೈದಾನದಲ್ಲಿ ತಂಗಿದ್ದು ಬೇರೆ ಬೇರೆ ಸ್ಥಳಗಳಲ್ಲಿ ಬೆಲೂನ್ ಮಾರುತ್ತಿದ್ದರೆಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರಿನಲ್ಲಿ ಬೆಲೂನ್ ಮಾರಾಟ ಮಾಡುತ್ತಿದ್ದ ಅಪ್ರಾಪ್ತ ಬಾಲಕಿಯ ಅಪಹರಿಸಿ ರೇಪ್ ಆ್ಯಂಡ್ ಮರ್ಡರ್ : ಆರೋಪಿ ಕಾಲಿಗೆ ಗುಂಡು Read More »

ಪ್ರಿಯತಮೆ ಜತೆಗಿದ್ದ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ,ನೊಂದ ಯುವಕ ಆತ್ಮಹತ್ಯೆ

ಯುವಕನೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಕಾರ್ಕಳ ತಾಲೂಕಿನ ಬೆಲ್ಮಣ್ಣಿನ ಖಾಸಗಿ ಲಾಡ್ಜ್‌ನಲ್ಲಿ ನಡೆದಿದೆ.ಮೃತ ಯುವಕನನ್ನು ನಿಟ್ಟೆ ಗ್ರಾಮದ ಅಭಿಷೇಕ್ ಆಚಾರ್ಯ (23) ಎಂದು ತಿಳಿದು ಬಂದಿದೆ.ಪ್ರೀತಿಸಿದ ಯುವತಿ ಜತೆಗಿದ್ದ ಖಾಸಗಿ ವಿಡಿಯೋವನ್ನು ವೈರಲ್ ಮಾಡುವುದಾಗಿ ಗೆಳೆಯರಿಂದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.ಡೆತ್ ನೋಟ್‌ನಲ್ಲಿ ನಾಲ್ವರು ಬ್ಲ್ಯಾಕ್‌ಮೇಲ್ ಮಾಡಿದವರ ಹೆಸರು ಬರೆದಿಡಲಾಗಿದೆ ಎಂದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ. ಕಾರ್ಕಳ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಮುಂದುವರೆಸಿದ್ದಾರೆ.ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಹೆಸರಿಸಿದವರನ್ನು ಪೊಲೀಸರು

ಪ್ರಿಯತಮೆ ಜತೆಗಿದ್ದ ಖಾಸಗಿ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ,ನೊಂದ ಯುವಕ ಆತ್ಮಹತ್ಯೆ Read More »

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ

ಅಮೆರಿಕಾದ ನ್ಯೂಯಾರ್ಕ್ ನಲ್ಲಿ ನಡೆಯುತ್ತಿರುವ 80ನೇ ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾರತವನ್ನು ಪ್ರತಿನಿಧಿಸಿರುವ ದಕ್ಷಿಣ ಕನ್ನಡ ಸಂಸದರಾದ ಕ್ಯಾ. ಬ್ರಿಜೇಶ್ ಚೌಟ ಅವರು ನಮ್ಮ ದೇಶದ ಸುಸ್ಥಿರ ಅಭಿವೃದ್ಧಿಯ ಬಗ್ಗೆ ವಿಷಯ ಮಂಡಿಸಿದ್ದಾರೆ. ಆ ಮೂಲಕ ವಿಶ್ವದ ಅತ್ಯುನ್ನತ ವೇದಿಕೆಯಲ್ಲಿ ದೇಶವನ್ನು ಪ್ರತಿನಿಧಿಸುವ ಮೂಲಕ ಕರ್ನಾಟಕಕ್ಕೆ ಹೆಮ್ಮೆ ತಂದಿದ್ದಾರೆ.ಭಾರತದಿಂದ ಸರ್ವ ಪಕ್ಷಗಳ ಸಂಸದರನ್ನು ಒಳಗೊಂಡಿರುವ ಪಿಪಿ ಚೌಧರಿ ನೇತೃತ್ವದ ನಿಯೋಗವು ನ್ಯೂಯಾರ್ಕ್‌ನಲ್ಲಿ ಅ.8ರಿಂದ 14ರವರೆಗೆ ನಡೆಯುವ ವಿಶ್ವಸಂಸ್ಥೆಯ ಸಾಮಾನ್ಯ ಸಭೆ ಅಧಿವೇಶನದಲ್ಲಿ ಭಾಗವಹಿಸುತ್ತಿದೆ. ಈ

ವಿಶ್ವ ವೇದಿಕೆಯಲ್ಲಿ ಭಾರತವನ್ನು ಪ್ರತಿನಿಧಿಸಿ ದೇಶದ ನಿಲುವನ್ನು ಪ್ರಸ್ತುತಪಡಿಸಿದ ಕ್ಯಾ. ಚೌಟ Read More »

ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಋತುಚಕ್ರ ರಜೆ ಮಂಜೂರು

ಬೆಂಗಳೂರಿನಲ್ಲಿ ಅಕ್ಟೋಬರ್ 9 ರಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸಚಿವ ಸಂಪುಟವು ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ವೇತನ ಸಹಿತ ಋತುಚಕ್ರ ರಜೆ (ಮುಟ್ಟಿನ ರಜೆ) ನೀಡುವ ಪ್ರಸ್ತಾವನೆಗೆ ಅನುಮೋದನೆ ನೀಡಿದೆ. ಸಚಿವ ಸಂಪುಟ ಸಭೆಯ ಬಳಿಕ ಸಚಿವ ಹೆಚ್.ಕೆ. ಪಾಟೀಲ್ ಈ ಮಹತ್ವದ ಮಾಹಿತಿಯನ್ನು ಬಹಿರಂಗಪಡಿಸಿದರು. ಈ ನಿರ್ಧಾರವು ಮಹಿಳಾ ಉದ್ಯೋಗಿಗಳಿಗೆ ದೊಡ್ಡ ಉಡುಗೊರೆಯಾಗಿದೆ.

ಉದ್ಯೋಗಸ್ಥ ಮಹಿಳೆಯರಿಗೆ ಪ್ರತಿ ತಿಂಗಳು ಋತುಚಕ್ರ ರಜೆ ಮಂಜೂರು Read More »

ಸಿದ್ದರಾಮಯ್ಯ ಸಂಪುಟದಿಂದ 15 ಮಂದಿಗೆ ಕೋಕ್ ?

ಅಕ್ಟೋಬರ್ 13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಸಂಪುಟದ ಸಹೋದ್ಯೋಗಿಗಳಿಗೆ ಔತಣಕೂಟ ಆಯೋಜಿಸಿದ್ದಾರೆ. ಕ್ಯಾಬಿನೆಟ್ ಪುನಾರಚನೆಗೂ ಮುನ್ನ ಈ ಔತಣಕೂಟ ಏರ್ಪಡಿಸಲಾಗಿದೆ. ಸುಮಾರು 15 ಸಚಿವರನ್ನು ಸಂಪುಟದಿಂದ ಕೈಬಿಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನ. 11ರೊಳಗೆ ಬಿಹಾರ್‌ನಲ್ಲಿ ಎಲ್ಲ ಹಂತದ ಚುನಾವಣೆ ಮುಗಿಯಲಿದ್ದು, ನ. 14 ರಂದು ಬರುವ ಫಲಿತಾಂಶದ ಬಳಿಕ ರಾಜ್ಯ ಸಚಿವ ಸಂಪುಟ ಪುನಾರಚನೆ ಬಹುತೇಕ ಖಚಿತವಾಗಿದೆ ಎನ್ನಲಾಗಿದೆ, ಈ ಬಗ್ಗೆ ಹೈಕಮಾಂಡ್ ಮಟ್ಟದಲ್ಲಿ ಮಾತುಕತೆ ನಡೆದಿದೆ ಎಂದು ವರದಿಯಾಗಿದೆ.

ಸಿದ್ದರಾಮಯ್ಯ ಸಂಪುಟದಿಂದ 15 ಮಂದಿಗೆ ಕೋಕ್ ? Read More »

ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವು

ಕೊಡಗು ಜಿಲ್ಲೆಯ ಮಡಿಕೇರಿ ತಾಲೂಕಿನ ಕಾಟಕೇರಿ ಹರ್ ಮಂದಿರ್ ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಒಬ್ಬ ವಿದ್ಯಾರ್ಥಿ ಜೀವಂತ ದಹನವಾದ ಘಟನೆ ವರದಿಯಾಗಿಧ.ಎರಡನೇ ತರಗತಿಯ ವಿದ್ಯಾರ್ಥಿ ಪುಷ್ಪಕ್ (7) ಸಾವನ್ನಪ್ಪಿದ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಮೃತಪಟ್ಟ ವಿದ್ಯಾರ್ಥಿ ಚೆಟ್ಟಿಮಾನಿ ನಿವಾಸಿ ಎಂದು ಗುರುತಿಸಲಾಗಿದೆ. ಬೆಂಕಿ ಅವಘಡಕ್ಕೆ ಕಾರಣ ತಿಳಿದು ಬಂದಿಲ್ಲ. ಇಂದು ಮುಂಜಾನೆ ಮೂರು ಗಂಟೆ ಸಮಯದಲ್ಲಿ ಬೆಂಕಿ ಅವಘಡ ನಡೆದಿದೆ. ಅಗ್ನಿ ಶಾಮಕದಳ ಹಾಗೂ ಗ್ರಾಮಸ್ಥರಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದ್ದು,ಮಡಿಕೇರಿ ಗ್ರಾಮಾಂತರ

ಶಾಲೆಯ ವಸತಿಗೃಹದಲ್ಲಿ ಬೆಂಕಿ ಅವಘಡ ಸಂಭವಿಸಿ ಓರ್ವ ವಿದ್ಯಾರ್ಥಿ ಸಾವು Read More »

ಮತ್ತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ?

ಭಾರತೀಯ ಹವಾಮಾನ ಇಲಾಖೆಯು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಮತ್ತೆ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ದಕ್ಷಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ತುಮಕೂರು, ವಿಜಯನಗರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊಪ್ಪಳ, ರಾಯಚೂರು, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಳಗಾವಿ, ಬೀದ‌ರ್, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ

ಮತ್ತೆ ಕರಾವಳಿ ಭಾಗದಲ್ಲಿ ಭಾರೀ ಮಳೆ ? Read More »

error: Content is protected !!
Scroll to Top