ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ
ಸರ್ಕಾರದ ಯೋಜನೆಗಳನ್ನು ಪಡೆಯಲು ಜನರು ನಕಲಿ ಆಧಾರ್, ವೋಟರ್ ಐಡಿ ಸೇರಿದಂತೆ ಅನೇಕ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಸಿಕ್ಕಿಬಿದ್ದ ಸಾಕಷ್ಟು ನಿದರ್ಶನಗಳಿವೆ. ಅಂತಹುದೇ ಮತ್ತೊಂದು ಪ್ರಸಂಗ ಸಂಶಿಯಲ್ಲಿ ನಡೆದಿದೆ.ಸಂಶಿಯ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಗುರುವಾರ ಬುರ್ಖಾ ತೊಟ್ಟು ಕುಳಿತಿದ್ದ ವ್ಯಕ್ತಿಯನ್ನು ಗ್ರಾಮಸ್ಥರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಮಾಡಿರುವ ತಂತ್ರ ಎಂದು ಅನುಮಾನಿಸಿ ಹಿಡಿದಿದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಬುರ್ಖಾ ತೊಟ್ಟು ಉಚಿತ ಪ್ರಯಾಣ: ಬಸ್ಸು ನಿಲ್ದಾಣದಲ್ಲಿ ಕುಳಿತಿದ್ದ ವ್ಯಕ್ತಿ ಪೊಲೀಸ್ ವಶ Read More »