ಕ್ರೈಂ

ವಿದ್ಯಾರ್ಥಿನಿ ಆತ್ಮಹತ್ಯೆ

ಮುಲ್ಕಿ: ವಿದ್ಯಾರ್ಥಿನಿ ಆತ್ಮ ಹತ್ಯೆಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್‌ನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬವರ ಪುತ್ರಿ ಉಜ್ವಲ (17) ಎಂದು ಗುರುತಿಸಲಾಗಿದೆ.ರೈಲ್ವೇ ಕ್ವಾಟರ್ಸ್‌ನ ಮನೆಯ ಎದುರು ಬದಿಯ ಕೋಣೆಯಲ್ಲಿ ಡೆತ್ ನೋಟ್ ಬರೆದಿಟ್ಟು ಪ್ಯಾನ್‌ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಉಜ್ವಲ ಮುಲ್ಕಿ ಖಾಸಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿದ ಬಳಿಕ ಮನೆ ಕಡೆ ಬಂದಿದ್ದು, […]

ವಿದ್ಯಾರ್ಥಿನಿ ಆತ್ಮಹತ್ಯೆ Read More »

ರಾಜ್ಯದ ಮುಖ್ಯ ಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಈಡಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA)ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ.ಲೋಕಾಯುಕ್ತ ಎಫ್ ಐಆರ್ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇಡಿ ಇಸಿಐಅರ್ ದಖಾಲಾಗಿದೆ.ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯದ ಮುಖ್ಯ ಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಈಡಿ Read More »

ಭೀಕರ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ತಂದೆ ಸಾವು

ಉಡುಪಿ : ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಸಂಭವಿಸಿದ ಘಟನೆ ವರದಿಯಾಗಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮಿತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32)

ಭೀಕರ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ತಂದೆ ಸಾವು Read More »

ಹಿಂದುಗಳ ಹೆಸರಿನಲ್ಲಿ ದಾಖಲಾತಿ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಾಗಿದ್ದ ಪಾಕಿಸ್ಥಾನಿ ಕುಟುಂಬದ ಬಂಧನ

ಹಿಂದುಗಳ ಹೆಸರಿನಲ್ಲಿ ದಾಖಲಾತಿ ಮಾಡಿಸಿಕೊಂಡು ಬೆಂಗಳೂರಿನ ಜಿಗಣಿ ಸಮೀಪ ವಾಸವಾಗಿದ್ದ ಪಾಕಿಸ್ತಾನಿ ಕುಟುಂಬ ಸದಸ್ಯರು ಹಾಗೂ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.ಪಾಕಿಸ್ತಾನ ಪ್ರಜೆಯ ಪತ್ನಿ ಬಾಂಗ್ಲಾದೇಶದವರಾಗಿದ್ದು, ಇಬ್ಬರು ಮಕ್ಕಳ ಜತೆ ಜಿಗಣಿ ಸಮೀಪದ ಅಪಾರ್ಟ್‌ ಮೆಂಟ್‌ ವೊಂದರಲ್ಲಿ ವಾಸವಾಗಿದ್ದರು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ಭಾನುವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಗಲಭೆಯಿಂದಾಗಿ ಬಂಧಿತ ವ್ಯಕ್ತಿ ಪಾಕ್‌ ನಿಂದ ಬಾಂಗ್ಲಾದೇಶಕ್ಕೆ ವಲಸೆ ಹೋಗಿದ್ದ.

ಹಿಂದುಗಳ ಹೆಸರಿನಲ್ಲಿ ದಾಖಲಾತಿ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಾಗಿದ್ದ ಪಾಕಿಸ್ಥಾನಿ ಕುಟುಂಬದ ಬಂಧನ Read More »

ಕಡವೆ ಬೈಕ್ ಸವಾರನ ಮೇಲೆ ಜಿಗಿದು ಬೈಕ್ ಸವಾರ ಗಂಭೀರ

ಪಂಜ : ಪಂಜದ ಕೂತ್ಕುಂಜ ಗ್ರಾಮದ ಜಳಕದಹೊಳೆ ಎಂಬಲ್ಲಿ ಕಡವೆ ಬೈಕ್ ಮೇಲೆ ಜಿಗಿದು ಬೈಕ್‌ ಸವಾರ ಗಾಯ ಗೊಂಡ ಘಟನೆ ಭಾನುವಾರ ರಾತ್ರಿ ವರದಿಯಾಗಿದೆ.ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಗಾಯ ಗೊಂಡವರು ಎಂದು ತಿಳಿದು ಬಂದಿದೆ.ಅವರು ಮನೆಯಿಂದ ಪಂಜ ಪೇಟೆಗೆ ಹೋಗುತ್ತಿದ್ದಾಗ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ಘಟನೆ ನಡೆದಿದೆ. ಅವರ ಕೈ,ಕಾಲು, ಭುಜದ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಢಬದ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪಂಜ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡವೆ ಬೈಕ್ ಸವಾರನ ಮೇಲೆ ಜಿಗಿದು ಬೈಕ್ ಸವಾರ ಗಂಭೀರ Read More »

ವಿದ್ಯುತ್ ಲೈನ್ ದುರಸ್ತಿ ವೇಳೆ ಕಾರ್ಮಿಕ ಬಿದ್ದು ಗಂಭೀರ

ಪಂಜ : ಸುಳ್ಯ ತಾಲೂಕಿನ ಪಂಜದ ಕರಿಕ್ಕಳ ಸಮೀಪ ವಿದ್ಯುತ್ ಲೈನ್ ಹಳೆ ತಂತಿ ಬದಲಾವಣೆ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ವರದಿಯಾಗಿದೆ.ಬೆಳ್ಳಾರೆ ಸಿದ್ದಿ ಇಲೆಕ್ಟಿಕಲ್ ನ ಸಿಬ್ಬಂದಿಗಳು ಕರಿಕ್ಕಳ ಸಮೀಪ ವೈರ್‌ ಬದಲಾವಣೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಂಬ ಮುರಿದು ಬಿದ್ದು ಕಂಬದಲ್ಲಿದ್ದ ಕಿಟ್ಟು ಎಂಬವರ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ವಿದ್ಯುತ್ ಲೈನ್ ದುರಸ್ತಿ ವೇಳೆ ಕಾರ್ಮಿಕ ಬಿದ್ದು ಗಂಭೀರ Read More »

ಹಠಾತ್ ಅನಾರೋಗ್ಯದಿಂದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸಾವು

ವಿಟ್ಲ: ಇದ್ದಕ್ಕಿದಂತೆ ಅನಾರೋಗ್ಯಕ್ಕೆ ಒಳಗಾಗಿ ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ಸದಸ್ಯ, ಬಿಜೆಪಿ ಮುಖಂಡ ಸುಮಾರು 38 ವರ್ಷ ಪ್ರಾಯದ ಉಮೇಶ್ ಗೌಡ ಗುರುವಾರ ರಾತ್ರಿ ನಿಧನ ಹೊಂದಿದರು. ವೃತ್ತಿಯಲ್ಲಿ ಅವರು ಕೃಷಿಕರಾಗಿದ್ದರು. ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ಮಪ್ಪಿದರು.

ಹಠಾತ್ ಅನಾರೋಗ್ಯದಿಂದ ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯ ಸಾವು Read More »

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪಿಯ ಮೇಲೆ ಹಲ್ಲೆ ನಡೆಸಿದ ಯುವಕನ ಬಂಧನ

ಸುಳ್ಯ : ವಿದ್ಯಾರ್ಥಿನಿ ಬಸ್ಸಲ್ಲಿ ಬರುತ್ರಿದ್ದಾಗ ಲೈಂಗಿಕ ದೌರ್ಜನ್ಯ ಎಸಗಿದ ಅಬ್ದುಲ್ ನಿಯಾಝ್ ಮೇಲೆ ಗುಂಪು ಹಲ್ಲೆ ನಡೆಸಲಾಗಿದೆ ಎನ್ನಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಮತ್ತೋರ್ವ ಯುವಕನನ್ನು ಸುಳ್ಯ ಪೊಲೀಸರು ಬಂಧಿಸಿ ಸುಳ್ಯ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಆರೋಪಿಗಳಲ್ಲಿ ಓರ್ವನಾದ ಸುಶ್ಮಿತ್ ಎಂಬಾತ ಕುಮಟದಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೋಲಿಸರು ಆತನನ್ನು ಬಂಧಿಸಿ ಸುಳ್ಯಕ್ಕೆ ಕರೆ ತಂದಿದ್ದು ನ್ಯಾಯಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.

ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ ಆರೋಪಿಯ ಮೇಲೆ ಹಲ್ಲೆ ನಡೆಸಿದ ಯುವಕನ ಬಂಧನ Read More »

ಬಸ್ಸಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ

ಸುಳ್ಯ : ವಿದ್ಯಾರ್ಥಿ ನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ನ್ಯಾಯಾಧೀಶರು ಆರೋಪಿಗೆ 14 ದಿವಸಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ

ಬಸ್ಸಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಗೆ ನ್ಯಾಯಾಂಗ ಬಂಧನ Read More »

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

ಸುಳ್ದ್ರ : ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಥಳಿತಕ್ಕೆ ಒಳಗಾಗಿ ಕೇರಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಆರೋಪಿ ನಿಯಾಜ್ ಎಂಬಾತನನ್ನು ಬುಧವಾರ ಸಂಜೆ ಸುಳ್ಯ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ ಎಂದು ತಿಳಿದು ಬಂದಿದೆ.ಘಟನೆಯ ಬಳಿಕ ಆರೋಪಿ ನಿಯಾಜ್ ಸುಳ್ಯ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಾಗಿ ಬಳಿಕ ತಪ್ಪಿಸಿಕೊಂಡು ಮುಳ್ಳೇರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ.ಈತನನ್ನು ಕೂಡಲೇ ಬಂಧಿಸುವಂತೆ ಹಿಂದೂ ಸಂಘಟನೆ ವತಿಯಿಂದ ನಿನ್ನೆ ಸುಳ್ಯ ಪೊಲೀಸ್ ಠಾಣಾ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಒತ್ತಾಯಿಸಿದ್ದರು.

ವಿದ್ಯಾರ್ಥಿನಿಗೆ ಬಸ್ಸಿನಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು Read More »

error: Content is protected !!
Scroll to Top