ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಸಾವು
ಪುತ್ತೂರಿನ ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಅವರಿಗೆ 49 ವರ್ಷ ಪ್ರಾಯವಾಗಿತ್ತು. ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಗುರುವಾರ ಮಂಗಳೂರಿನಲ್ಲಿ ಬೈಕ್ ಚಲಾಯಿಸುತ್ತಿದ್ದ ಸಂದರ್ಭದ ಕಾರು ಡಿಕ್ಕಿ ಹೊಡೆದು ಅಪಘಾತ ಸಂಭವಿಸಿತ್ತು. ತೀವ್ರ ಗಾಯಗೊಂಡ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಅಲ್ಲಿ ಅವರು ಚಿಕಿತ್ಸೆಗೆ ಸ್ಪಂಧಿಸದೆ ಶುಕ್ರವಾರ ಬೆಳಗ್ಗೆ ನಿಧನರಾದರು.
ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್ ಅಪಘಾತದಲ್ಲಿ ಸಾವು Read More »










