ಕ್ರೈಂ

ಬಾಗಿಲಿನ ದಾರಂದ ಬಿದ್ದು ಮಗು ಸಾವು

ಬೆಳ್ತಂಗಡಿ : ತಲೆಯ ಮೇಲೆ ಭಾಗಿಲಿನ ದಾರಂದ ಬಿದ್ದು ಪುಟ್ಟ ಬಾಲಕಿ ಸಾವನ್ನಪ್ಪಿರುವ ದಾರುಣ ಘಟನೆ ಬೆಳ್ತಂಗಡಿಯ ಪುತ್ತಿಲ ಗ್ರಾಮದ ಕುಂಡಡ್ಕ ಸಮೀಪದ ಕೇರ್ಯಾದ ಕೊನಲೆ ಎಂಬಲ್ಲಿ ನಡೆದಿದೆ.ಹಾರೀಸ್ ಮುಸ್ಲಿಯಾ‌ರ್ ಮತ್ತು ಅಸ್ಮಾ ದಂಪತಿ ಪುತ್ರಿ, ಕೇರ್ಯಾ ಸರಕಾರಿ ಶಾಲೆಯ 1 ನೇ ತರಗತಿಯ ಅಲ್ಪಿಯಾ (6) ಮೃತ ಬಾಲಕಿಯಾಗಿದ್ದಾಳೆ. ಮಗುವಿನ ತಂದೆ ಕುಂಡಡ್ಕದಲ್ಲಿ ನೂತನ ಮನೆಯನ್ನು ನಿರ್ಮಾಣ ಮಾಡುತ್ತಿದ್ದಾರೆ. ನಾಳೆ ಮನೆಯ ಮುಖ್ಯ ದ್ವಾರಕ್ಕೆ ದಾರಂದ ಜೋಡಿಸಲು ಮನೆಯ ಪಕ್ಕದಲ್ಲಿ ದಾರಂದವನ್ನು ಜೋಡಿಸಿದ್ದರು. ಈ ಸಂದರ್ಭದಲ್ಲಿ […]

ಬಾಗಿಲಿನ ದಾರಂದ ಬಿದ್ದು ಮಗು ಸಾವು Read More »

ಹೆಲಿಕ್ಯಾಪ್ಟ‌ರ್ ಪತನ: ಮೂವರು ಸಾವು

ಪುಣೆ : ಹೆಲಿಕ್ಯಾಪ್ಟ‌ರ್ ಪತನವಾಗಿ ಮೂವರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿರವ ಬವ್ಹಾನ್ ಬದ್ರುಕ್ ಗ್ರಾಮದಲ್ಲಿ ಇಂದು ಮುಂಜಾನೆ ನಡೆದಿದೆ. ಸ್ಥಳೀಯರು ಹಿಂಜೇವಾಡಿ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ. ರಕ್ಷಣಾ ಪಡೆಗಳು ಹಾಗೂ ಆಂಬುಲೆನ್ಸನ್ ಕೂಡಲೇ ಸ್ಥಳಕ್ಕೆ ಧಾವಿಸಿತಾದರೂ ಮೂವರು ಸಾವನ್ನಪ್ಪಿದ್ದರು. ಇದು ಖಾಸಗಿ ಹೆಲಿಕ್ಯಾಪ್ಟರ್ ಆಗಿದ್ದು, ಉದ್ಯಮಿಯೊಬ್ಬರಿಗೆ ಸೇರಿದ್ದು ಎನ್ನಲಾಗಿದೆ.

ಹೆಲಿಕ್ಯಾಪ್ಟ‌ರ್ ಪತನ: ಮೂವರು ಸಾವು Read More »

ಮುಖ್ಯ ಮಂತ್ರಿಯವರ ವಿರುದ್ದ ಪ್ರಕರಣ ದಾಖಲಿಸಲು ಕಾರಣರಾದ ಸ್ನೇಹಮಯಿ ಕೃಷ್ಣರಿಗೆ ಜಾಮೀನು ರಹಿತ ಬಂಧನ ವಾರಂಟ್

ಮೈಸೂರು: ಮುಡಾ ಹಗರಣ ನಡೆದಿದೆ ಎಂದು ದೂರು ನೀಡಿ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಸಂಕಷ್ಟ ತಂದೊಡ್ಡಿರುವ ಸ್ನೇಹಮಯಿ ಕೃಷ್ಣ ವಿರುದ್ದ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ರಹಿತ ಬಂಧನ ವಾರೆಂಟ್ ಹೊರಡಿಸಲಾಗಿದೆ ಎಂದು ತಿಳಿದು ಬಂದಿದೆ.ಹಳಯ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಕೋರ್ಟ್ ವಾರೆಂಟ್ ಜಾರಿ ಮಾಡಿದೆ. ಎನ್.ಕುಮಾರ್ ಎಂಬುವವರು 2015ರಲ್ಲಿ ರಲ್ಲಿ ಆರ್‌ಟಿಐ ಕಾರ್ಯಕರ್ತ ಹಾಗೂ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.ಅಕ್ಟೋಬ‌ರ್ 1ರಂದು ಮಂಗಳವಾರ ವಿಚಾರಣೆಗೆ ದಿನಾಂಕ

ಮುಖ್ಯ ಮಂತ್ರಿಯವರ ವಿರುದ್ದ ಪ್ರಕರಣ ದಾಖಲಿಸಲು ಕಾರಣರಾದ ಸ್ನೇಹಮಯಿ ಕೃಷ್ಣರಿಗೆ ಜಾಮೀನು ರಹಿತ ಬಂಧನ ವಾರಂಟ್ Read More »

ಕಾರು ಡಿಕ್ಕಿ ಹೊಡೆದು ಬಾಲಕ ದುರ್ಮರಣ

ಕೊಕ್ಕಡ : ಕೊಕ್ಕಡದಲ್ಲಿ ಕಾರು ಡಿಕ್ಕಿ ಹೊಡೆದು ಬಾಲಕ ಸಾವನ್ನಪ್ಪಿದ ಘಟನೆ ಮಂಗಳವಾರ ವರದಿಯಾಗಿದೆ.ಕೊಕ್ಕಡ ಸಮೀಪದ ಮಲ್ಲಿಗೆ ಮಜಲ್ ನಿವಾಸಿ ಅಬ್ದುಲ್ ಹಮೀದ್ ರವರ ಮಗ ನವಾಫ್ ಇಸ್ಮಾಯಿಲ್ (10 ವ.) ಮೃತಪಟ್ಟ ವಿದ್ಯಾರ್ಥಿ. ಆತೂರಿನ ಆಯಿಷಾ ಸ್ಕೂಲ್ ನ ನಾಲ್ಕನೇ ತರಗತಿಯ ವಿಧ್ಯಾರ್ಥಿ.ಹಮೀದ್ ಅವರ ಮನೆಗೆ ಬಂದಿದ್ದ ಸಂಬಂಧಿಕರು ಮನೆಯಂಗಳದಲ್ಲಿ ಕಾರನ್ನು ಹಿಂದಕ್ಕೆ ಚಲಾಯಿಸಿದಾಗ ಕಾರಿನ ಹಿಂಬದಿ ನಿಂತಿದ್ದ ನವಾಫ್ ಅವರು ಕಾರಿನಡಿಗೆ ಬಿದ್ದರು ಎನ್ನಲಾಗಿದೆ. ಅವರ ಮೇಲೆಯೇ ಕಾರು ಹರಿದ ಪರಿಣಾಮ ತಲೆ ಮತ್ತು

ಕಾರು ಡಿಕ್ಕಿ ಹೊಡೆದು ಬಾಲಕ ದುರ್ಮರಣ Read More »

ವಿದ್ಯಾರ್ಥಿನಿ ಆತ್ಮಹತ್ಯೆ

ಮುಲ್ಕಿ: ವಿದ್ಯಾರ್ಥಿನಿ ಆತ್ಮ ಹತ್ಯೆಗೆ ಶರಣಾಗಿರುವ ಘಟನೆ ಮುಲ್ಕಿ ಸಮೀಪದ ಅತಿಕಾರಿಬೆಟ್ಟು ರೈಲ್ವೆ ಗೇಟ್ ಬಳಿಯ ಕ್ವಾಟರ್ಸ್‌ನಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಕೊಂಕಣ ರೈಲ್ವೆ ಗೇಟ್ ಸಿಬ್ಬಂದಿ ಮಹೇಶ್ ನಾಯಕ್ ಎಂಬವರ ಪುತ್ರಿ ಉಜ್ವಲ (17) ಎಂದು ಗುರುತಿಸಲಾಗಿದೆ.ರೈಲ್ವೇ ಕ್ವಾಟರ್ಸ್‌ನ ಮನೆಯ ಎದುರು ಬದಿಯ ಕೋಣೆಯಲ್ಲಿ ಡೆತ್ ನೋಟ್ ಬರೆದಿಟ್ಟು ಪ್ಯಾನ್‌ ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.ಉಜ್ವಲ ಮುಲ್ಕಿ ಖಾಸಗಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯಾಗಿದ್ದು, ಕಾಲೇಜಿನಲ್ಲಿ ನಡೆದ ಮೀಟಿಂಗ್ ಮುಗಿದ ಬಳಿಕ ಮನೆ ಕಡೆ ಬಂದಿದ್ದು,

ವಿದ್ಯಾರ್ಥಿನಿ ಆತ್ಮಹತ್ಯೆ Read More »

ರಾಜ್ಯದ ಮುಖ್ಯ ಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಈಡಿ

ಬೆಂಗಳೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ (MUDA)ಹಗರಣ ನಡೆದಿದೆ ಎನ್ನಲಾಗಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯವು (ಈಡಿ) ಸೋಮವಾರ(ಸೆ.30) ಪ್ರಕರಣ ದಾಖಲಿಸಿದೆ.ಲೋಕಾಯುಕ್ತ ಎಫ್ ಐಆರ್ ನಲ್ಲಿ ಉಲ್ಲೇಖವಾದ ಹೆಸರುಗಳ ಮೇಲೆ ಇಡಿ ಇಸಿಐಅರ್ ದಖಾಲಾಗಿದೆ.ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಸಿದ್ದರಾಮಯ್ಯ ಬಾಮೈದ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.

ರಾಜ್ಯದ ಮುಖ್ಯ ಮಂತ್ರಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಈಡಿ Read More »

ಭೀಕರ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ತಂದೆ ಸಾವು

ಉಡುಪಿ : ಮಿನಿ ಲಾರಿ ಹಾಗೂ ದ್ವಿಚಕ್ರ ವಾಹನ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಕಾರ್ಕಳ-ಧರ್ಮಸ್ಥಳ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಸಂಭವಿಸಿದ ಘಟನೆ ವರದಿಯಾಗಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಮೃತರನ್ನು ಸುರೇಶ್ ಆಚಾರ್ಯ (36), ಸಮೀಕ್ಷಾ (7) ಸುಶ್ಮಿತಾ (5) ಮತ್ತು ಸುಶಾಂತ್ (2) ಗುರುತಿಸಲಾಗಿದೆ. ಮೀನಾಕ್ಷಿ ಆಚಾರ್ಯ (32)

ಭೀಕರ ಬೈಕ್ ಅಪಘಾತದಲ್ಲಿ ಒಂದೇ ಕುಟುಂಬದ ಮೂವರು ಮಕ್ಕಳು ಸೇರಿ ತಂದೆ ಸಾವು Read More »

ಹಿಂದುಗಳ ಹೆಸರಿನಲ್ಲಿ ದಾಖಲಾತಿ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಾಗಿದ್ದ ಪಾಕಿಸ್ಥಾನಿ ಕುಟುಂಬದ ಬಂಧನ

ಹಿಂದುಗಳ ಹೆಸರಿನಲ್ಲಿ ದಾಖಲಾತಿ ಮಾಡಿಸಿಕೊಂಡು ಬೆಂಗಳೂರಿನ ಜಿಗಣಿ ಸಮೀಪ ವಾಸವಾಗಿದ್ದ ಪಾಕಿಸ್ತಾನಿ ಕುಟುಂಬ ಸದಸ್ಯರು ಹಾಗೂ ಮೂವರು ವಿದೇಶಿ ಪ್ರಜೆಗಳನ್ನು ಬಂಧಿಸಿರುವ ಘಟನೆ ವರದಿಯಾಗಿದೆ.ಪಾಕಿಸ್ತಾನ ಪ್ರಜೆಯ ಪತ್ನಿ ಬಾಂಗ್ಲಾದೇಶದವರಾಗಿದ್ದು, ಇಬ್ಬರು ಮಕ್ಕಳ ಜತೆ ಜಿಗಣಿ ಸಮೀಪದ ಅಪಾರ್ಟ್‌ ಮೆಂಟ್‌ ವೊಂದರಲ್ಲಿ ವಾಸವಾಗಿದ್ದರು. ಈ ಬಗ್ಗೆ ಕೇಂದ್ರ ಗುಪ್ತಚರ ಇಲಾಖೆ ನೀಡಿದ ಮಾಹಿತಿ ಆಧಾರದ ಮೇಲೆ ಪೊಲೀಸರು ಭಾನುವಾರ ತಡರಾತ್ರಿ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ.ಗಲಭೆಯಿಂದಾಗಿ ಬಂಧಿತ ವ್ಯಕ್ತಿ ಪಾಕ್‌ ನಿಂದ ಬಾಂಗ್ಲಾದೇಶಕ್ಕೆ ವಲಸೆ ಹೋಗಿದ್ದ.

ಹಿಂದುಗಳ ಹೆಸರಿನಲ್ಲಿ ದಾಖಲಾತಿ ಮಾಡಿಕೊಂಡು ಬೆಂಗಳೂರಿನಲ್ಲಿ ವಾಸವಾಗಿದ್ದ ಪಾಕಿಸ್ಥಾನಿ ಕುಟುಂಬದ ಬಂಧನ Read More »

ಕಡವೆ ಬೈಕ್ ಸವಾರನ ಮೇಲೆ ಜಿಗಿದು ಬೈಕ್ ಸವಾರ ಗಂಭೀರ

ಪಂಜ : ಪಂಜದ ಕೂತ್ಕುಂಜ ಗ್ರಾಮದ ಜಳಕದಹೊಳೆ ಎಂಬಲ್ಲಿ ಕಡವೆ ಬೈಕ್ ಮೇಲೆ ಜಿಗಿದು ಬೈಕ್‌ ಸವಾರ ಗಾಯ ಗೊಂಡ ಘಟನೆ ಭಾನುವಾರ ರಾತ್ರಿ ವರದಿಯಾಗಿದೆ.ಕೂತ್ಕುಂಜ ಗ್ರಾಮದ ಬೇರ್ಯ ತಿರುಮಲೇಶ್ವರ ಗಾಯ ಗೊಂಡವರು ಎಂದು ತಿಳಿದು ಬಂದಿದೆ.ಅವರು ಮನೆಯಿಂದ ಪಂಜ ಪೇಟೆಗೆ ಹೋಗುತ್ತಿದ್ದಾಗ ಗುತ್ತಿಗಾರು -ಪಂಜ ರಸ್ತೆಯ ಜಳಕದಹೊಳೆ ಎಂಬಲ್ಲಿ ಘಟನೆ ನಡೆದಿದೆ. ಅವರ ಕೈ,ಕಾಲು, ಭುಜದ ಭಾಗಕ್ಕೆ ತೀವ್ರ ಗಾಯವಾಗಿದ್ದು ಕಢಬದ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಥಳಕ್ಕೆ ಪಂಜ ಅರಣ್ಯ ಇಲಾಖೆಯವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಕಡವೆ ಬೈಕ್ ಸವಾರನ ಮೇಲೆ ಜಿಗಿದು ಬೈಕ್ ಸವಾರ ಗಂಭೀರ Read More »

ವಿದ್ಯುತ್ ಲೈನ್ ದುರಸ್ತಿ ವೇಳೆ ಕಾರ್ಮಿಕ ಬಿದ್ದು ಗಂಭೀರ

ಪಂಜ : ಸುಳ್ಯ ತಾಲೂಕಿನ ಪಂಜದ ಕರಿಕ್ಕಳ ಸಮೀಪ ವಿದ್ಯುತ್ ಲೈನ್ ಹಳೆ ತಂತಿ ಬದಲಾವಣೆ ವೇಳೆ ವಿದ್ಯುತ್ ಕಂಬ ಮುರಿದು ಬಿದ್ದು ಕಾರ್ಮಿಕ ಗಂಭೀರ ಗಾಯಗೊಂಡ ಘಟನೆ ಶನಿವಾರ ಮುಂಜಾನೆ ವರದಿಯಾಗಿದೆ.ಬೆಳ್ಳಾರೆ ಸಿದ್ದಿ ಇಲೆಕ್ಟಿಕಲ್ ನ ಸಿಬ್ಬಂದಿಗಳು ಕರಿಕ್ಕಳ ಸಮೀಪ ವೈರ್‌ ಬದಲಾವಣೆ ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆ ಕಂಬ ಮುರಿದು ಬಿದ್ದು ಕಂಬದಲ್ಲಿದ್ದ ಕಿಟ್ಟು ಎಂಬವರ ಸೊಂಟಕ್ಕೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ವಿದ್ಯುತ್ ಲೈನ್ ದುರಸ್ತಿ ವೇಳೆ ಕಾರ್ಮಿಕ ಬಿದ್ದು ಗಂಭೀರ Read More »

error: Content is protected !!
Scroll to Top