ಕ್ರೈಂ

ಹೃದಯಾಘಾತಕ್ಕೆ 11 ವರ್ಷದ ಬಾಲಕ ಸಾವು

ಹಾಸನ : ಹೃದಯಾಘಾತದಿಂದ 11 ವರ್ಷದ ಬಾಲಕ ಮೃತಪಟ್ಟ ಘಟನೆ ಹಾಸನ ಜಿಲ್ಲೆ ಆಲೂರು ತಾಲೂಕಿನ ಚನ್ನಾಪುರ ಗ್ರಾಮದಿಂದ ವರದಿಯಾಗಿದೆ.ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಸಚಿನ್‌ಗೆ ನಿನ್ನೆ ಇದ್ದಕ್ಕಿದ್ದಂತೆ ಎದೆ ನೋವು ಕಾಣಿಸಿಕೊಂಡಿತ್ತು. ಎದೆ ನೋವಿನಿಂದ ಶಾಲೆಗೆ ಹೋಗದೆ ಮನೆಯಲ್ಲೇ ಇದ್ದ. ಮನೆಯಲ್ಲಿರುವಾಗ ಏಕಾಏಕಿ ಹೃದಯಾಘಾತವಾಗಿ ಕೊನೆಯುಸಿರೆಳೆದಿದ್ದಾನೆ.ಈ ಘಟನೆ ಗ್ರಾಮಸ್ಥರಲ್ಲಿ ಆತಂಕ ಹುಟ್ಟಿಸಿದೆ.

ಹೃದಯಾಘಾತಕ್ಕೆ 11 ವರ್ಷದ ಬಾಲಕ ಸಾವು Read More »

ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ

ಕಿನ್ನಿಗೋಳಿ : ಕೆಲ ವರ್ಷಗಳ ಹಿಂದೆ ಸುಳ್ಯ ನಗರ ನಗರ ಪಂಚಾಯತ್ ನಲ್ಲಿ ಮುಖ್ಯಾಧಿಕಾರಿಯಾಗಿದ್ದ ಪ್ರಸ್ತುತ ಕಿನ್ನಿಗೊಳಿ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಯಾಗಿರುವ ಎಂ.ಆರ್. ಸ್ವಾಮಿ ಹಾಗೂ ಜೂನಿಯರ್ ಇಂಜಿನಿಯರ್ ನಾಗರಾಜ್ ಸೇರಿದಂತೆ ಇಬ್ಬರು ಅಧಿಕಾರಿಗಳನ್ನು ಲೋಕಾಯುಕ್ತ ಪೊಲೀಸರು ಬಂದಿಸಿದ್ದಾರೆ ಎಂದು ತಿಳಿದು ಬಂದಿದೆ.ಕಿನ್ನಿಗೋಳಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ 5ನೇ ಹಣಕಾಸು ಯೋಜನೆಯಲ್ಲಿ ಗುತ್ತಿಗೆದಾರರ ಬಿಲ್ಲು ಮಂಜೂರಾತಿ ಬಗ್ಗೆ ಬಿಲ್ ಪಾಸ್ ಮಾಡಲು ಲಂಚ ನೀಡಬೇಕೆಂದು ಬೇಡಿಕೆಯಿಟ್ಟಿದ್ದರು ಎನ್ನಲಾಗಿದೆ.

ಲಂಚಕ್ಕೆ ಬೇಡಿಕೆಯಿಟ್ಟು ಲೋಕಾಯುಕ್ತ ಪೊಲೀಸ್ ಬಲೆಗೆ ಬಿದ್ದ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ Read More »

ಬಾಲಕಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ!

ಭೋಪಾಲ್ : ಭೋಪಾಲ್ ನಲ್ಲಿ ಭಯಾನಕ ಘಟನೆಯೊಂದು ವರದಿಯಾಗಿದೆ. ಖಾಸಗಿ ಶಾಲೆಯೊಂದರಲ್ಲಿ ಮೂರು ವರ್ಷದ ಬಾಲಕಿಯ ಮೇಲೆ ಶಿಕ್ಷಕನೊಬ್ಬಅತ್ಯಾಚಾರವೆಸಗಿದ್ದಾನೆ. ಘಟನೆ ಕುರಿತು ಬಾಲಕಿಯ ತಾಯಿ ಸೋಮವಾರ ಶಾಲಾ ಆಡಳಿತ ಮಂಡಳಿಗೆ ದೂರು ನೀಡಿದರೂ ನಿರ್ಲಕ್ಷ್ಯ ವಹಿಸಿದ್ದಾರೆ. ಸಂತ್ರಸ್ತೆಯ ತಾಯಿ ಶಿಕ್ಷಕನ ವಿರುದ್ಧ ಪೊಲೀಸ್ ದೂರು ದಾಖಲಿಸಿದ್ದಾರೆ. ಘಟನೆಯ ಕುರಿತು ತನಿಖೆ ನಡೆಸಲಾಗಿದ್ದು, ಶಿಕ್ಷಕನ ವಿರುದ್ಧ ಪೊಲೀಸರು ಪೋಕ್ಸೋ ಪ್ರಕರಣ ದಾಖಲಿಸಿಕೊಂಡು ಬಂಧಿಸಲಾಗಿದೆ. ಈ ಮಾಹಿತಿಯನ್ನು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ಬಾಲಕಿಯ ಮೇಲೆ ಶಿಕ್ಷಕನಿಂದ ಅತ್ಯಾಚಾರ! Read More »

ಪರಿವಾರಕಾನದಲ್ಲಿ ಕಾರುಗಳ ನಡುವೆ ಅಪಘಾತ

ಸುಳ್ಯ : ಆಲೆಟ್ಟಿ ಗ್ರಾಮದ ಮಾಣಿ ಮೈಸೂರು ರಾಷ್ಡ್ರೀಯ ಹೆದ್ದಾರಿಯ ಪರಿವಾರ ಬಳಿ ಕಾರುಗಳ ನಡುವೆ ಅಪಘಾತ ಸಂಭವಿಸಿ ಪ್ರಯಾಣಿಕರು ಅಪಾಯದಿಂದ ಪಾರಾದ ಘಟನೆ ವರದಿಯಾಗಿದೆ.ಸುಳ್ಯ ಕಡೆಗೆ ಬರುತ್ತಿದ್ದ ಆಲ್ಲೋ ಕಾರೊಂದು ಪರಿವಾರಕಾನದ ಬಳಿ ಎಡಭಾಗಕ್ಕೆ ತಿರುಗಿಸಲು ಯತ್ನಿಸಿದ್ದಾಗ ಸುಳ್ಯ ಕಡೆಗೆ ಬರುತ್ತಿದ್ದ ಇನ್ನೊಂದು ಕಾರು ಹಿಂಭಾಗದಿಂದ ಡಿಕ್ಕಿ ಹೊಡೆಯಿತು.ಡಿಕ್ಕಿಯ ರಭಸಕ್ಕೆ ಅಲ್ಟೊ ಕಾರ್ ಮುಂಭಾಗಕ್ಕೆ ಚಲಿಸಿ ಗುಂಡಿಗೆ ಬಿತ್ತು.ಪರಿಣಾಮವಾಗಿಕಾರಿನ ಮುಂಭಾಗ ಜಖಂಗೊಂಡಿದೆ ಈ ಕಾರು ಸಂಪಾಜೆ ಯ ಹೈಸ್ಕೂಲ್ ಮಾಸ್ತರ್ ಅಪ್ಪುಕುಂಞ ಚಲಾಯಿಸುತ್ತಿದ್ದ ವಾಹನವಾಗಿದ್ದು ಅವರು

ಪರಿವಾರಕಾನದಲ್ಲಿ ಕಾರುಗಳ ನಡುವೆ ಅಪಘಾತ Read More »

ಲೆಬೆನಾನಿನ ಬೈರುತುಲ್ ಉಪನಗರಗಳು,ಸಿರಿಯಾದ ಕೆಲಭಾಗಗಳಲ್ಲಿ ಪೇಜರ್ ಗಳ ಸ್ಪೋಟ : ಹತ್ತು ಮಂದಿ ಸಾವು

ಬೈರುತ್ : ಲೆಬನಾನಿನ ಬೈರುತ್‌ ನ ಉಪನಗರಗಳು, ಸಿರಿಯಾದ ಕೆಲವು ಭಾಗಗಳಲ್ಲಿ ಮಂಗಳವಾರ ಏಕಕಾಲಕ್ಕೆ ಪೇಜರ್‌ಗಳು ಸ್ಫೋಟಗೊಂಡು (Pager Blast) ಸುಮಾರು ಹತ್ತು ಹಿಬ್ಬುಲ್ಲಾ ಬಂಡುಕೋರ ಸಂಘಟನೆ ಸದಸ್ಯರು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.ಇದು ಇಸ್ರೇಲ್ ವಿಶ್ವದಲ್ಲೇ ಏಕಕಾಲಕ್ಕೆ ನಡೆಸಿದ ಅತ್ಯಾಧುನಿಕ ಭೀಕರ ದಾಳಿಇರಾನ್‌ನ ರಾಯಭಾರಿ ಸೇರಿದಂತೆ ಸುಮಾರು 4000 ಜನರು ಗಾಯಗೊಂಡಿದ್ದಾರೆ ಮತ್ತು 300ಕ್ಕೂ ಅಧಿಕ ಮಂದಿ ಕಣ್ಣು ಕಳೆದುಕೊಂಡಿದ್ದಾರೆ ಎಂದು ರಾಯಿಟರ್ಸ್ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಲೆಬೆನಾನಿನ ಬೈರುತುಲ್ ಉಪನಗರಗಳು,ಸಿರಿಯಾದ ಕೆಲಭಾಗಗಳಲ್ಲಿ ಪೇಜರ್ ಗಳ ಸ್ಪೋಟ : ಹತ್ತು ಮಂದಿ ಸಾವು Read More »

ಲಿವರ್ ದಾನ ಮಾಡಿದ ಮಹಿಳೆ ದಿಡೀರ್ ಸಾವು

ಮಂಗಳೂರು : ತನ್ನ ಸಂಬಂಧಿಕರೊಬ್ಬರಿಗೆ (Already)ಲಿವರ್ ದಾನ ಮಾಡಿದ್ದ ನಗರದ ಉಪನ್ಯಾಸಕಿ ಅರ್ಚನಾ ಕಾಮತ್‌ (33) ಅವರು ಮೃತಪಟ್ಟ ಘಟನೆ ವರದಿಯಾಗಿದೆ.ತನ್ನ ಪತಿಯ ಸಂಬಂಧಿ ಮಹಿಳೆಯೋರ್ವರಿಗೆ ಲಿವರ್‌ ಕಸಿ ಮಾಡಬೇಕಾಗಿತ್ತು. ಹಲವರನ್ನು ತಪಾಸಣೆಗೆ ಒಳಪಡಿಸಿದ್ದರೂ ಹೊಂದಾಣಿಕೆಯಾಗಿರಲಿಲ್ಲ. ಅರ್ಚನಾ ಅವರ ರಕ್ತದ ಗುಂಪು ಹೊಂದಾಣಿಕೆಯಾಗಿತ್ತು ಹಾಗೂ ಅವರು ಲಿವರ್‌ ದಾನಕ್ಕೆ ಒಪ್ಪಿದ್ದರು. ಅದರಂತೆ 12 ದಿನಗಳ ಹಿಂದೆ ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ಅರ್ಚನಾ ಅವರ ಲಿವರ್‌ನ ಸ್ವಲ್ಪ ಭಾಗವನ್ನು ಮಹಿಳೆಗೆ ಕಸಿ ಮಾಡಲಾಗಿತ್ತು. ಆರೋಗ್ಯದಿಂದಿದ್ದ ಅರ್ಚನಾ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು.ಬಳಿಕ ದಿಡೀರ್

ಲಿವರ್ ದಾನ ಮಾಡಿದ ಮಹಿಳೆ ದಿಡೀರ್ ಸಾವು Read More »

ಜಟ್ಟಿಪಳ್ಳ ರಸ್ತೆಯಲ್ಲಿ ಸ್ಕೂಟಿಗಳ ನಡುವೆ ಅಪಘಾತ

ಸುಳ್ಯ ಜಟ್ಟಿಪಳ್ಳ ರಸ್ತೆ ದೀಕ್ಷಾ ಬಟ್ಟೆ ಅಂಗಡಿ ಮುಂಭಾಗ ಎರಡು ಸ್ಕೂಟಿ ವಾಹನ ಪರಸ್ಪರ ಡಿಕ್ಕಿ ಯಾಗಿ ಸವಾರರಿಗೆ ಸಣ್ಣ ಪುಟ್ಟ ಗಾಯ ವಾದ ಘಟನೆ ಇದೀಗ ಸಂಭವಿಸಿದೆ.ಜಟ್ಟಿಪಳ್ಳ ಕಡೆಯಿಂದ ಸುಳ್ಯಕ್ಕೆ ಬರುತ್ತಿದ್ದ ಸ್ಕೂಟಿ ಮತ್ತು ಸುಳ್ಯ ದಿಂದ ಜಟ್ಟಿಪಳ್ಳ ಕಡೆಗೆ ಹೋಗುತ್ತಿದ್ದ ಸ್ಕೂಟಿ ಮುಖಾ ಮುಖಿ ಡಿಕ್ಕಿ ಸಂಭವಿಸಿದೆ.ಘಟನೆ ಯಿಂದ ಹೆಚ್ಚಿನ ಅಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಜಟ್ಟಿಪಳ್ಳ ರಸ್ತೆಯಲ್ಲಿ ಸ್ಕೂಟಿಗಳ ನಡುವೆ ಅಪಘಾತ Read More »

ಸ್ಕೂಟರ್ ಅಪಘಾತದಲ್ಲಿ ಯುವ ಹಿಂದು ಮುಖಂಡ ಸಾವು

ಪುತ್ತೂರು : ಸ್ಕೂಟರ್ ಅಪಘಾತದಲ್ಲಿ ಗಂಭೀರ ಗಾಯಗೊಂಡು, ಪುತ್ತೂರಿನಿಂದ ಮಂಗಳೂರು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ವರದಿಯಾಗಿದೆ.ಕೆಯ್ಯರು ಗ್ರಾಮದ ಎರಕ್ಕಳ ಬೆಳ್ಯಯಪ್ಪ ಗೌಡರವರ ಪುತ್ರ, ವಿಶ್ವ ಹಿಂದೂ ಪರಿಷದ್ ಬಜರಂಗದಳದ ವೀರಾಂಜನೇಯ ಘಟಕ ತಿಂಗಳಾಡಿಯ ಸಹ ಗೋ ರಕ್ಷಕ ಪ್ರಮುಖ್ ಕೀರ್ತನ್ ಗೌಡ (22) ಮೃತಪಟ್ಟವರು.ಸೆ. 10ರಂದು ಮಧ್ಯರಾತ್ರಿ ಕೆದಂಬಾಡಿ ಗ್ರಾಮದ ತ್ಯಾಗರಾಜನಗರದಲ್ಲಿ ಸ್ಕೂಟರ್ ಅಪಘಾತ ಸಂಭವಿಸಿದ್ದು, ಗಂಭೀರ ಗಾಯಗೊಂಡ ಕೀರ್ತನ್ ರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಚಿಕಿತ್ಸೆಗಾಗಿ ಮಂಗಳೂರು

ಸ್ಕೂಟರ್ ಅಪಘಾತದಲ್ಲಿ ಯುವ ಹಿಂದು ಮುಖಂಡ ಸಾವು Read More »

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು

ಬೈಕ್ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಬೀರಮಂಗಲ ನಿವಾಸಿ ಉಪನ್ಯಾಸಕ ಡಾ.ಅಚ್ಚುತ ಪೂಜಾರಿಯವರ ಪತ್ನಿ ಉಪನ್ಯಾಸಕಿ ಸುನಂದ ಅಚ್ಚುತ ಪೂಜಾರಿಯವರು ಬುಧವಾರ ರಾತ್ರಿ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾದರು.ಕಳೆದ ಶುಕ್ರವಾರ ತಮ್ಮ ಕುಟುಂಬದ ತರವಾಡು ಮನೆ, ಈಶ್ವರಮಂಗಲದ ಮೇನಾಲಕ್ಕೆ ನಿಕಟ ಸಂಬಂಧಿಕರೊಬ್ಬರ ಬೈಕಲ್ಲಿ ಹೋಗುತ್ತಿರುವಾಗ ಮಳೆ ಬಂದ ಕಾರಣಕ್ಕಾಗಿ ಕೊಡೆ ಬಿಡಿಸಿದರೆಂದೂ, ಗಾಳಿಗೆ ಕೊಡೆ ಎಳೆಯಲ್ಪಟ್ಟು ಇವರು ಬೈಕಿಂದ ಜಾರಿ ರಸ್ತೆಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿದ್ದರು.ಅಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರೆಂದೂ ತಿಳಿದುಬಂದಿದೆ.

ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಉಪನ್ಯಾಸಕಿ ಸಾವು Read More »

ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು

ರಾಯಚೂರಿನ ವಿದ್ಯಾವಾಹಿನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ತಾಲೂಕಿನ ಅತ್ತನೂರು ಗ್ರಾಮದ ವಿದ್ಯಾರ್ಥಿ ತರುಣಕುಮಾರ ತಂದೆ ಮಲ್ಲೇಶ (14) ಶಾಲೆಯಲ್ಲಿ ಲೋ ಬಿಪಿ ಉಂಟಾಗಿ ಮೃತಪಟ್ಟಿರುವ ದುರ್ಘಟನೆ ವರದಿಯಾಗಿದೆ.ಶಾಲೆಯಲ್ಲಿ ವಿದ್ಯಾರ್ಥಿ ಕುಸಿದು ಬಿದ್ದಿದ್ದು, ಕೂಡಲೇ ವಿದ್ಯಾರ್ಥಿಯನ್ನು ಶಾಲಾ ಆಡಳಿತ ಮಂಡಳಿ ಪಟ್ಟಣದಲ್ಲಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿದ್ದಾನೆ. ಪೋಷಕರಿಗೆ ಇಬ್ಬರು ಮಕ್ಕಳಿದ್ದು ಮೃತ ಬಾಲಕ ಹಿರಿಯ ಪುತ್ರನೆಂದು ಹೇಳಲಾಗುತ್ತಿದೆ.

ಕಡಿಮೆ ರಕ್ತದ ಒತ್ತಡ ಉಂಟಾಗಿ ಕುಸಿದು 8ನೇ ತರಗತಿ ವಿದ್ಯಾರ್ಥಿ ಸಾವು Read More »

error: Content is protected !!
Scroll to Top