ಕ್ರೈಂ

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ

ಸುಳ್ಯ ಪಾಣತ್ತೂರು ಸಂಪರ್ಕ ಕಡಿತ ಸುಳ್ಯದಿಂದ ಕಲ್ಲಪ್ಪಳ್ಳಿ ಮೂಲಕ ಕೇರಳದ ಪಾಣತ್ತೂರು ಸಂಪರ್ಕಿಸುವ ಅಂತರ್ ರಾಜ್ಯ ರಸ್ತೆಯಲ್ಲಿ ಭಾರೀ ಪ್ರಮಾಣದಲ್ಲಿ ಮಣ್ಣು ಕುಸಿದು ರಸ್ತೆ ತಡೆ ಉಂಟಾಗಿರುವ ಘಟನೆ ವರದಿಯಾಗಿದೆ.ರಸ್ತೆಯ ಮೇಲ್ಭಾಗದ ಗುಡ್ಡದಲ್ಲಿ ಬಿರುಕುಗಳು ಕಾಣಿಸಿಕೊಂಡಿದ್ದು ಗುಡ್ಡ ಇನ್ನಷ್ಟು ಕುಸಿಯುವ ಆತಂಕ ಎದುರಾಗಿದೆ.ಸುಳ್ಯದಿಂದ ಸಂಪರ್ಕಿಸುವ ಈ ರಸ್ತೆಯಲ್ಲಿ ವಾಹನ ಸಂಚಾರ, ಪಾದಚಾರಿಗಳ ಸಂಚಾರ ಸಂಪೂರ್ಣ ನಿಷೇಧ ಮಾಡಲಾಗಿದ್ದು , ಪೊಲೀಸ್ ಬ್ಯಾರಿಕೇಡ್ ಅಳವಡಿಸಿ ರಸ್ತೆ ಬಂದ್ ಮಾಡಲಾಗಿದೆ. ಕಳೆದ ಕೆಲವು ದಿನಗಳ ಹಿಂದೆ ಬಾಟೋಳಿ ಭಾಗದಲ್ಲಿ ಬಾರಿ […]

ಬಾಟೋಳಿಯಲ್ಲಿ ಮತ್ತೆ ಗುಡ್ಡ ಕುಸಿತ Read More »

ವೇಶ್ಯಾವಟಿಕೆ ಅಡ್ಡೆಗೆ ಪೊಲೀಸ್ ದಾಳಿ

ಮಣಿಪಾಲದ ಮನೆಯೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ಅಡ್ಡೆಗೆ ಖಚಿತ ಮಾಹಿತಿ ಮೇರೆಗೆ ಮಣಿಪಾಲ ಪೊಲೀಸರು ದಾಳಿ ನಡೆಸಿ ಹಲವರನ್ನು ಬಂಧಿಸಿದ್ದಾರೆ.ಆರೋಪಿಗಳ ಪ್ಯೆಕಿ ಖಾಲಿದ್‌ ತಲೆಮರೆಸಿಕೊಂಡಿದ್ದು, ಸಲಾಮತ್‌, ಚಂದ್ರರನ್ನು ವಶಕ್ಕೆ ಪಡೆಯಲಾಗಿದೆ.ವಿದ್ಯಾರತ್ನ ನಗರದಲ್ಲಿರುವ ಭವಾನಿ ಎಂಬ ಹೆಸರಿನ ಮನೆಯಲ್ಲಿ ಅನೈತಿಕ ವೇಶ್ಯಾವಾಟಿಕೆ ನಡೆಸುತ್ತಿರುವುದಾಗಿ ಮಾಹಿತಿ ಸಿಕ್ಕಿರುವ ಹಿನ್ನಲೆಯಲ್ಲಿ ಶೋಧನಾ ವಾರೆಂಟ್‌ ಪಡೆದುಕೊಂಡು ಸಿಬಂದಿಗಳು ದಾಳಿ ನಡೆಸಿ ಅನೈತಿಕ ವೇಶ್ಯಾವಟಿಕೆಯಲ್ಲಿ ತೊಡಗಿದವರನ್ನು ವಶಕ್ಕೆ ಪಡೆಯಲಾಗಿದೆ. ಆರೋಪಿಗಳಲ್ಲಿದ್ದ 4 ಮೊಬೈಲ್‌ ಪೋನ್‌ಗಳು, 10000 ರೂ.ನಗದು, -ಕಾರು ಮತ್ತು 2 ದ್ವಿಚಕ್ರ ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ.ಮಣಿಪಾಲ

ವೇಶ್ಯಾವಟಿಕೆ ಅಡ್ಡೆಗೆ ಪೊಲೀಸ್ ದಾಳಿ Read More »

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ

ವಿಟ್ಲ : ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿ ಪರಾರಿಯಾದ ಆರೋಪಿಯ ವಿರುದ್ಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಫೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.ಅಪ್ರಾಪ್ತ ಬಾಲಕಿ ನೀಡಿದ ದೂರಿನ ಮೇರೆಗೆ ಅಬ್ದುಲ್ ಸಮೀರ್ ಎಂಬಾತನ ವಿರುದ್ಧ ಫೋಕ್ಸೋ ಮತ್ತು ಅತ್ಯಾಚಾರ ಪ್ರಕರಣ ದಾಖಲಾಗಿದೆ.ಅಪ್ರಾಪ್ತ ಬಾಲಕಿ ಆರೋಪಿ ಅಬ್ದುಲ್‌ ಸಮೀರ್‌ನು ಮೊಬೈಲ್‌ನಲ್ಲಿ ಮಾತನಾಡಿಕೊಂಡು ಪ್ರೀತಿಸುತ್ತಿದ್ದು ಬಳಿಕ ಬಾಲಕಿಯನ್ನು ಮದುವೆಯಾಗುತ್ತೇನೆಂದು ನಂಬಿಸಿ ಬಾಲಕಿನ ಮನೆಯ ಸಮೀಪದ ನಿರ್ಮಾಣ ಹಂತದ ಮನೆಯೊಂದ್ರ ಬಳಿ 2019ನೇ ಇಸವಿಯ ನವಂಬರ್‌ ಹಾಗೂ ಡಿಸೆಂಬರ್‌ ತಿಂಗಳಲ್ಲಿ

ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ Read More »

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್‌ಐಎ ಭೇಟಿ

ಸುಳ್ಯ ತಾಲೂಕಿನ‌ ಬೆಳ್ಳಾರೆ ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿರುವ ಆರೋಪಿಗಳ ಪೈಕಿ ಓರ್ವನಾಗಿರುವ ಉಪ್ಪಿನಂಗಡಿ 34ನೇ ನೆಕ್ಕಿಲಾಡಿಯ ಅಗ್ನಾಡಿ ಮನೆ ನಿವಾಸಿ ಕೆ.ಎ. ಮಸೂದ್‌ನ ಮನೆಗೆ ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಅಧಿಕಾರಿಗಳು ರವಿವಾರ ಭೇಟಿ ನೀಡಿ, ಅಗಸ್ಟ್‌ 18ರ ಒಳಗಾಗಿ ಒಳಗಾಗಿ ನ್ಯಾಯಾಲಯಕ್ಕೆ ಹಾಜರಾಗಬೇಕೆಂಬ ನ್ಯಾಯಾಲಯದ ಎರಡನೇ ಬಾರಿಯ ಆದೇಶ ಪ್ರತಿಯನ್ನು ಮನೆಯ ಮುಂಬಾಗಿಲಿಗೆ ಅಂಟಿಸಿದರು.ಈ ಸಂಬಂಧ ಧ್ವನಿ ವರ್ಧಕದ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಅಗಸ್ಟ್‌ ನಿಗದಿತ ಗಡುವಿನೊಳಗೆ ನ್ಯಾಯಾಲಯಕ್ಕೆ ಶರಣಾಗತ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ: ಆರೋಪಿ ಮನೆಗೆ ಎನ್‌ಐಎ ಭೇಟಿ Read More »

ಬೈಕ್ ಮೇಲೆ ಯುವಕ-ಯುವತಿಯ ರೊಮ್ಯಾನ್ಸ್

ಯುವಕನೊಬ್ಬ ಬೈಕ್ ಚಲಾಯಿಸುತ್ತಿದ್ದ ವೇಳೆ ತನ್ನ ಪ್ರೇಯಸಿಯನ್ನು‌ ಪೆಟ್ರೋಲ್ ಟ್ಯಾಂಕ್ ಮೇಲೆ ಹಿಮ್ಮುಖವಾಗಿ ಕುಳಿತು ಆತನಿಗೆ ಮುತ್ತಿಟ್ಟಿದ್ದಾಳೆ.ದೆಹಲಿಯ ಮಂಗೋಲ್‌ಪುರಿ ಹೊರ ವರ್ತುಲ ರಸ್ತೆಯ ಮೇಲ್ವೇತುವೆಯಲ್ಲಿ ಈ ರೊಮ್ಯಾನ್ಸ್ ನಡೆದಿದೆ.ಈ ರೋಮ್ಯಾನ್ಸ್ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.

ಬೈಕ್ ಮೇಲೆ ಯುವಕ-ಯುವತಿಯ ರೊಮ್ಯಾನ್ಸ್ Read More »

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು

ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಇಂದು (ಜುಲೈ 18) ಮುಂಜಾನೆ ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಟ್ರ್ಯಾಕ್ಟರ್ ಗೆ ಕಾರು ಡಿಕ್ಕಿಯಾದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿದ್ದಾರೆ. ಮುದಾಸೀರ್, ಮುಜಾಯಿದ್, ಅಹ್ಮದ್ ಪಾಷಾ ಮೃತರು. ಇವರು ಪಿರಿಯಾಪಟ್ಟಣದಿಂದ ಹುಣಸೂರಿಗೆ ತೆರಳುತ್ತಿದ್ದಾಗ ಕಂಪ್ಲಾಪುರ ಬಳಿ ಮುಂಜಾನೆ 4:30ರ ಸುಮಾರಿಗೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಮೂವರಿಗೆ ತೀವ್ರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪಿರಿಯಾಪಟ್ಟಣ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಭೀಕರ ಅಪಘಾತ : ಮೂವರು ಸ್ಥಳದಲ್ಲೇ ಸಾವು Read More »

ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು

ಸುಳ್ಯ ತಾಲೂಕಿನ‌ ಕನಕಮಜಲು‌ ಗ್ರಾಮದ ಸುಣ್ಣಮೂಲೆ ಎಂಬಲ್ಲಿ ಕಳೆದ ರಾತ್ರಿ ಮನೆಯಲ್ಲಿ ಮನೆಯವರು ಇಲ್ಲದ ಸಂದರ್ಭದಲ್ಲಿ ಬಾಗಿಲು ಮುರಿದು ಚಿನ್ನಾಭರಣ ಕಳವುಗೈದಿರುವ ಘಟನೆ ಸುಣ್ಣಮೂಲೆಯ ಬುಡ್ಲೆಗುತ್ತುವಿನಲ್ಲಿ ನಡೆದಿದೆ.ಯುರೇಶ್ ಬುಡ್ಲೆಗುತ್ತು ಅವರ ಸಂಬಂಧಿಯೊಬ್ಬರು ಜು.16ರಂದು ಅಪರಾಹ್ನ ನಿಧನರಾಗಿದ್ದು, ಯುರೇಶರ ಕುಟುಂಬ ಮನೆಯ ಬಾಗಿಲು ಹಾಕಿ ಅಲ್ಲೇ ಸ್ವಲ್ಪ ದೂರದಲ್ಲಿರುವ ಮನೆಗೆ ಅಂತ್ಯಕ್ರಿಯೆ ಕಾರ್ಯಕ್ರಮಕ್ಕೆ ತೆರಳಿದ್ದರು.ಆ ಸಂದರ್ಭದಲ್ಲಿ ಮನೆಯ ಹಿಂಬದಿ ಬಾಗಿಲು ಮುರಿದ ಕಳ್ಳರು ಮನೆಯೊಳಗೆ ಜಾಲಾಡಿ, ಅಂದಾಜು ಮೂವತ್ತು ಪವನ್ ಗೂ ಅಧಿಕ ಚಿನ್ನಾಭರಣಗಳನ್ನು ಕಳವುಗೈದಿದ್ದಾರೆ ಎಂದು ತಿಳಿದುಬಂದಿದೆ.ಸುಳ್ಯ

ಮನೆ ಬಾಗಿಲು ಮುರಿದು ಅಪಾರ ಚಿನ್ನಾಭರಣ ಕಳವು Read More »

ಯುವಕನಿಂದ ಮಹಿಳೆಗೆ ಪೋನ್ ಮಾಡಿ ಕಿರುಕುಳ : ಅಟ್ಟಾಡಿಸಿಕೊಂಡು ಹೊಡೆದ ಊರವರು

ಚಿಕ್ಕಮಗಳೂರಿನ ಕಟ್ಟೆಮನೆ ಗ್ರಾಮದಲ್ಲಿ ಡಿಶ್ ರಿಪೇರಿ ಮಾಡುವವನು ಮಹಿಳೆಯರಿಗೆ ತನ್ನ ಮೊಬೈಲ್ ನಂಬರ್ ಕೊಡುವ ವೇಳೆ ಏನಾದರೂ ಸಮಸ್ಯೆ ಇದ್ದರೆ ಕರೆ ಮಾಡಿ ಎಂದು ಹೇಳುತ್ತಿದ್ದ. ಆಮೇಲೆ ಮಹಿಳೆಯರಿಗೆ ಕಾಲ್ ಮಾಡಿ ಪೀಡಿಸುತ್ತಿದ್ದ. ಪದೇ ಪದೇ ತನಗೆ ಕರೆ ಮಾಡುವಂತೆ ಹೇಳಿ ಮಹಿಳೆಯರಿಗೆ ಪೀಡಿಸುತ್ತಿದ್ದವನಿಗೆ ಇಂದು ಊರಿನವರು ಅಟ್ಟಾಡಿಸಿಕೊಂಡು ಹೊಡೆದ ಘಟನೆ ನಡೆದಿದೆ.

ಯುವಕನಿಂದ ಮಹಿಳೆಗೆ ಪೋನ್ ಮಾಡಿ ಕಿರುಕುಳ : ಅಟ್ಟಾಡಿಸಿಕೊಂಡು ಹೊಡೆದ ಊರವರು Read More »

ಭೂ ವಿವಾದ: ಭೀಕರವಾಗಿ ಚೂರಿಯಿಂದ ಇರಿದು ಕೊಂದ ಸಹೋದರ

ಮಡಿಕೇರಿ ತಾಲೂಕು ಚೆಂಬು ಗ್ರಾಮದ ಕುದ್ರೆಪಾಯದಲ್ಲಿ ತಮ್ಮನಿಂದ ಅಣ್ಣ ಕೊಲೆಯಾದ ಶುಕ್ರವಾರ ವರದಿಯಾಗಿದೆ.ಸತ್ತಾರ್, ರಫೀಕ್, ಉಸ್ಮಾನ್ ಮೊದಲಾದ ಅಣ್ಣತಮ್ಮಂದಿರ ಕೃಷಿ ಭೂಮಿ ಕುದ್ರೆಪಾಯದಲ್ಲಿದ್ದು ಜಾಗದ ತಕರಾರಿನಿಂದಾಗಿ ವಿವಾದವೆದ್ದಿದ್ದು, ಸಹೋದರರು ಸೇರಿ ಉಸ್ಮಾನ್ ಎಂಬವರನ್ನು ಇಂದು ಚೂರಿಯಿಂದ ಇರಿದು ಕೊಂದಿರುವುದಾಗಿ ಮಾಹಿತಿ ಲಭಿಸಿದೆ.ಸಂಪಾಜೆ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು ಹೆಚ್ಚಿನ ಮಾಹಿತಿ ತಿಳಿದು ಬರಬೇಕಾಗಿದೆ.

ಭೂ ವಿವಾದ: ಭೀಕರವಾಗಿ ಚೂರಿಯಿಂದ ಇರಿದು ಕೊಂದ ಸಹೋದರ Read More »

ತಾಯಿ ಎದುರೇ ಮಗಳನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪಾಪಿ

ಹರಿಯಾಣದ ಗುರುಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ.19 ವರ್ಷದ ಯುವತಿಯನ್ನು ರಾಜ್‌ಕುಮಾರ್ (23) ಎಂಬ ಯುವಕ ಆಕೆಯ ತಾಯಿಯ ಎದುರೇ ಚಾಕುವಿನಿಂದ ಇರಿದು ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.ಆಕೆ ಜೊತೆ ನಿಶ್ಚಿತಾರ್ಥವಾಗಿ ಮದುವೆ ನಿಲ್ಲಿಸಿದ್ದರಿಂದ ಕೋಪಗೊಂಡಿದ್ದ ಆತ ಹುಡುಗಿ ಮನೆ ಬಳಿ ಬಂದಿದ್ದ. ಈ ವೇಳೆ ಗಲಾಟೆ ಮಾಡಿ ತಾಯಿ ಎದುರಲ್ಲೇ ಆಕೆಗೆ ಚಾಕು ಇರಿದಿದ್ದಾನೆ. ಯುವತಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.ಇತ್ತ ಆರೋಪಿಗಳನ್ನು ಹಿಡಿದು ಪೊಲೀಸರಿಗೆ ನೀಡಲಾಗಿದೆ.

ತಾಯಿ ಎದುರೇ ಮಗಳನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಪಾಪಿ Read More »

error: Content is protected !!
Scroll to Top