ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ
ಬೆಳಗಾವಿಯ ಖಾಸಗಿ ಕಾಲೇಜಿನ ಉಪನ್ಯಾಸಕ ನಾಗೇಶ್ವರ್, ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಎರಡು ವರ್ಷಗಳಿಂದ ನಿರಂತರವಾಗಿ ಅತ್ಯಾಚಾರ ಎಸಗಿ, ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಎನ್ನಲಾಗಿದೆ. ವಿದ್ಯಾರ್ಥಿನಿಗೆ ಕೊಲೆ ಬೆದರಿಕೆ ಹಾಕಿದ್ದಲ್ಲದೆ, ತನ್ನೊಂದಿಗೆ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿರಲು ಒತ್ತಾಯಿಸಿದ್ದ. ದೌರ್ಜನ್ಯದಿಂದ ನೊಂದ ವಿದ್ಯಾರ್ಥಿನಿ ವಿಷಯವನ್ನು ಪೋಷಕರಿಗೆ ತಿಳಿಸಿದ್ದಾಳೆ. ಪೋಷಕರು ನೀಡಿದ ದೂರಿನ ಮೇರೆಗೆ ಬೆಳಗಾವಿ ಕ್ಯಾಂಪ್ ಠಾಣೆಯಲ್ಲಿ ಪೋಕೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಉಪನ್ಯಾಸಕನನ್ನು ಬಂಧಿಸಲಾಗಿದೆ.
ಉಪನ್ಯಾಸಕನಿಂದ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ Read More »








