ಪ್ರಚಲಿತ

ಮುಸ್ಲಿಂ ಯುವಕನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ 19 ಮಂದಿ ಹಿಂದು ಕಾರ್ಯಕರ್ತರ ಖುಲಾಸೆ

ಹಿಂದೂ ಯುವತಿಯೊಂದಿಗಿದ್ದ ಎಂದು ಮುಸ್ಲಿಂ ಯುವಕನನ್ನು ಕಾರಿನಿಂದ ಎಳದು ಹಾಕಿ ಹಲ್ಲೆಗೈದು ಅರೆ ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ವಿಡಿಯೋ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ 19ಮಂದಿ ಆರೋಪಿಗಳನ್ನು ಖುಲಾಸೆಗೊಳಿಸಿ ಮಂಗಳೂರಿನ 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.ಅತ್ತಾವರದ ಈಝೀ ಡೇ ಮಳಿಗೆಯಲ್ಲಿ ಕೆಲಸಕ್ಕಿದ್ದ ಯುವತಿಯೊಂದಿಗೆ ಮಳಿಗೆಯ ವ್ಯವಸ್ಥಾಪಕ ಶಾಕೀರ್ ಎಂಬಾತ ಕಾರಿನಲ್ಲಿ ಹೋಗುತ್ತಿದ್ದ. ಈತನ ಕಾರನ್ನು ಅತ್ತಾವರ ನಂದಿಗುಡ್ಡೆ ಬಳಿ ಅಡ್ಡಗಟ್ಟಿದ್ದ ಹಿಂದೂ ಸಂಘಟನೆಗಳಿಗೆ ಸೇರಿದ ಕಾರ್ಯಕರ್ತರು ಯುವತಿಯನ್ನು ಕಾರಿನಲ್ಲಿ ಕರೆದೊಯ್ಯುತ್ತಿದ್ದಾನೆಂದು ಆರೋಪಿಸಿ ಕಂಬಕ್ಕೆ […]

ಮುಸ್ಲಿಂ ಯುವಕನಿಗೆ ವಿದ್ಯುತ್ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ 19 ಮಂದಿ ಹಿಂದು ಕಾರ್ಯಕರ್ತರ ಖುಲಾಸೆ Read More »

ಕಾರು ಹಿಂದಕ್ಕೆ ಚಲಿಸಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು

ಮನೆಯಲ್ಲಿ ನಿಲ್ಲಿಸಿದ್ದ ಕಾರು ಹಿಂದಕ್ಕೆ ಚಲಿಸಿ ಅಂಗಳದಲ್ಲಿ ನಿಂತಿದ್ದ ವ್ಯಕ್ತಿಗೆ ಗುದ್ದಿದ ಪರಿಣಾಮ ಆಸ್ಪತ್ರೆಗೆ ಸಾಗಿಸುವ ವೇಳೆ ಅವರು ಮೃತಪಟ್ಟ ಘಟನೆ ಇಂದು ನಡೆದಿದೆ.ಕರಿಕ್ಕಳದ ಮುಚ್ಚಿಲದಲ್ಲಿರುವ ತಮ್ಮ ಮನೆಯ ಅಂಗಳದಲ್ಲಿ ನಿಂತಿದ್ದಾಗ ಕಾರು ಹಿಮ್ಮುಖ ಚಲಿಸಿ ನಿವೃತ್ತ ರೇಂಜ‌ರ್ ಜೋಸೇಫ್ ರವರಿಗೆ ಗುದ್ದಿ ಗಾಯಗೊಂಡಿದ್ದರು. ಮನೆಯಲ್ಲಿದ್ದ ಪತ್ನಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆ ದಾರಿ ಮಧ್ಯೆ ಮೃತಪಟ್ಟರೆಂದು ತಿಳಿದುಬಂದಿದೆ. ಅವರಿಗೆ 74 ವರ್ಷ ವಯಸ್ಸಾಗಿತ್ತು. ಅರಣ್ಯ ಇಲಾಖೆಯಲ್ಲಿ ಪಂಜ, ಮಂಗಳೂರು ಹಾಗೂ ಸಂಪಾಜೆ ಸೇವೆ ಸಲ್ಲಿಸಿದ್ದು ಸಂಪಾಜೆಯಲ್ಲಿ

ಕಾರು ಹಿಂದಕ್ಕೆ ಚಲಿಸಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು Read More »

ಬೂಡು : ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ

ಸುಳ್ಯದ ಬೂಡು ಕಾಲೋನಿಯ ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಿತು.ಮಾ.15ರಂದು ಬೆಳಗ್ಗೆ ಸುಳ್ಯ ಚೆನ್ನಕೇಶವ ದೇವಸ್ಥಾನದ ಮುಂಭಾಗದಿಂದ ಹಸಿರುವಾಣಿ ಮೆರವಣಿಗೆ ನಡೆಯಿತು.ಬಳಿಕ ಭಜನೆ ನಡೆಯಿತು.ಸಂಜೆ ಕ್ಷೇತ್ರಕ್ಕೆ ತಂತ್ರಿಗಳ ಆಗಮನದ ಬಳಿಕ ವೈದಿಕ ಕಾರ್ಯಕ್ರಮ ಆರಂಭಗೊಳ್ಳುವುದು.ಸಂಜೆ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದೆ. ಧಾರ್ಮಿಕ ಚಿಂತಕರಾದ ರಾಜೇಶ್ ಶೆಟ್ಟಿ ಮೇನಾಲ ಧಾರ್ಮಿಕ ಉಪನ್ಯಾಸ ನೀಡಲಿದ್ದಾರೆ.ಹಲವು ಮಂದಿ ಗಣ್ಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.ರಾತ್ರಿ ಸಾಂಸ್ಕೃತಿಕ

ಬೂಡು : ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆ Read More »

ನಾಳೆಯಿಂದ ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ

ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ ಮಾ.15 ಮತ್ತು ಮಾ.16ರಂದು ನಡೆಯಲಿದ್ದು ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿ ಗೌರವಾಧ್ಯಕ್ಷ ಎನ್.ಎ.ರಾಮಚಂದ್ರ, ಅಧ್ಯಕ್ಷ ಬೂಡು ರಾಧಾಕೃಷ್ಣ ರೈ, ಪ್ರಧಾನ ಕಾರ್ಯದರ್ಶಿ ಸುನಿಲ್ ಕೇರ್ಪಳ ಸೇರಿದಂತೆ ಇತರ ನೇತ್ರತ್ವದಲ್ಲಿ ತಯಾರಿ ನಡೆದಿದೆ.ಸುಮಾರು ವರ್ಷಗಳಿಂದ ಬೂಡುವಿನಲ್ಲಿ ಈ ಭಾಗದ ಜನರು ದೈವಗಳ ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ. ಇದೀಗ ದೈವಸ್ಥಾನ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಅಣಿಯಾಗುತ್ತಿದೆ‌. ಮಾ.15ರಂದು ಬೆಳಗ್ಗೆ ಸಾಮೂಹಿಕ ಪ್ರಾರ್ಥನೆಯಾಗಿ ಉಗ್ರಾಣ

ನಾಳೆಯಿಂದ ಸುಳ್ಯದ ಬೂಡು ಶ್ರೀ ಸತ್ಯಪದಿನಾಜಿ, ಕುಪ್ಪೆ ಪಂಜುರ್ಲಿ ಮತ್ತು ಸಾನಿಧ್ಯ ಗುಳಿಗ ದೈವಗಳ ದೈವಸ್ಥಾನದ ಪ್ರತಿಷ್ಠೆ ಮತ್ತು ಬ್ರಹ್ಮಕಲಶೋತ್ಸವ Read More »

ಅರಂಬೂರು : ನಾಳೆಯಿಂದ ದೈವಂಕಟ್ಟು ಮಹೋತ್ಸವ,ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ದೈವಸ್ಥಾನಗಳು

ಅರಂಬೂರು : ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಅರಂಬೂರು ಶ್ರೀ ವಯನಾಟ್ ಕುಲವನ್ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವ ಮಾ.15ರಿಂದ 18ರ ತನಕ ನಡೆಯಲಿದ್ದು ಸಕಲ ಸಿದ್ಧತೆಗಳಿದ್ದು ಅಂತಿಮ ಹಂತದಲ್ಲಿದೆ.ಎಲ್ಲರ‌ ಸಹಕಾರದಲ್ಲಿ ಉತ್ಸವ ನಡೆಯಲಿದ್ದು, 4 ದಿನದ ಉತ್ಸವದಲ್ಲಿ ಸುಮಾರು ಎಂಬತ್ತು ಸಾವಿರದಿಂದ ಒಂದು ಲಕ್ಷಕ್ಕೂ ಮಿಕ್ಕಿ ಭಕ್ತರು ಭಾಗವಹಿಸುವ ನಿರೀಕ್ಷೆ ಇದೆ. ಪಾರ್ಕಿಂಗ್, ಊಟದ ವ್ಯವಸ್ಥೆ, ಜನರಿಗೆ ಕುಳಿತು ಕೊಳ್ಳುವ ವ್ಯವಸ್ಥೆ ಸೇರಿ ಸಕಲ‌ ವ್ಯವಸ್ಥೆಗಳು ನಡೆಯುತಿದ್ದು, ಭಕ್ತರ ಹಾಗೂ ಊರವರ ಸಹಕಾರದಲ್ಲಿ

ಅರಂಬೂರು : ನಾಳೆಯಿಂದ ದೈವಂಕಟ್ಟು ಮಹೋತ್ಸವ,ವಿದ್ಯುತ್ ದೀಪಗಳಿಂದ ಕಂಗೊಳಿಸುತ್ತಿವೆ ದೈವಸ್ಥಾನಗಳು Read More »

ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಶಾಲಾ ಮಕ್ಕಳಿಗೆ ಗಾಯ

ಕೆಎಸ್ ಆರ್ ಟಿಸಿ ಬಸ್ ಹಾಗೂ ಲಾರಿ ನಡುವೆ ಡಿಕ್ಕಿ ಸಂಭವಿಸಿ ಶಾಲಾ ಮಕ್ಕಳ ಸಹಿತ 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡ ಘಟನೆ ಉಪ್ಪಿನಂಗಡಿಯಲ್ಲಿ ಮಾ.13 ರಂದು ಬೆಳಿಗ್ಗೆ ನಡೆದಿದೆ.ಸುಬ್ರಹ್ಮಣ್ಯದಿಂದ ಮಂಗಳೂರುಗೆ ಹೋಗುತ್ತಿದ್ದ ಬಸ್‌ ಉಪ್ಪಿನಂಗಡಿಯಲ್ಲಿ ಬಸ್ ನಿಲ್ದಾಣಕ್ಕೆ ಹೋಗಲು ರಾಷ್ಟ್ರೀಯ ಹೆದ್ದಾರಿಯಿಂದ ಅಂಡರ್ ಪಾಸ್ ನಿಂದ ಮುಂದೆ ಹೋಗುತ್ತಿದ್ದಂತೆ ಮಂಗಳೂರು ಕಡೆಯಿಂದ ಬರುತ್ತಿದ್ದ ಲಾರಿ ಬಸ್ ನ ಹಿಂಬದಿಗೆ ಡಿಕ್ಕಿಯಾಗಿದೆ.ಘಟನೆಯಲ್ಲಿ ಶಾಲಾ ಮಕ್ಕಳ ಸಹಿತ ಬಸ್ ನ ಹಿಂಬದಿ ಸೀಟು ಹಾಗೂ ಬಾಗಿಲಲ್ಲಿ ನಿಂತುಕೊಂಡಿದ್ದ

ಕೆ.ಎಸ್.ಆರ್.ಟಿ.ಸಿ ಬಸ್ಸಿಗೆ ಲಾರಿ ಡಿಕ್ಕಿ ಹೊಡೆದು ಶಾಲಾ ಮಕ್ಕಳಿಗೆ ಗಾಯ Read More »

ಮಂಡೆಕೋಲು : ಹೈನುಗಾರಿಕೆ ಮಾಹಿತಿ ಶಿಬಿರ ಉದ್ಘಾಟನೆ

ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ವತಿಯಿಂದ ಹೈನುಗಾರಿಕೆ ಮಾಹಿತಿ ಶಿಬಿರ ಮಾ 10ರಂದು ಸಂಘದ ಧವಳಧಾರೆ ಸಭಾಂಗಣದಲ್ಲಿ ನಡೆಯಿತು. ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸದಾನಂದ ಮಾವಜಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನುಸುಳ್ಯ ರೈತ ಉತ್ಪಾದಕ ಕಂಪನಿಯ ನಿರ್ದೇಶಕಿ ಮಧುರ ಎಂ.ಆ‌ರ್. ಉದ್ಘಾಟಿಸಿದರು. ಮಂಡೆಕೋಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸುರೇಶ್ ಕಣೆಮರಡ್ಕ, ಮಂಡೆಕೋಲು ಹಾಲು ಉತ್ಪಾದಕರ ಸಹಕಾರ ಸಂಘದ ಉಪಾಧ್ಯಕ್ಷ ವೆಂಕಪ್ಪ ನಾಯ್ಕ. ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ಸಂಪನ್ಮೂಲ

ಮಂಡೆಕೋಲು : ಹೈನುಗಾರಿಕೆ ಮಾಹಿತಿ ಶಿಬಿರ ಉದ್ಘಾಟನೆ Read More »

ಕೊಡಗಿನಲ್ಲಿ ಲಘು ಭೂಕಂಪನ ಸಂಭವಿಸಿರುವುದು ನಿಜ! ಭೂಕಂಪನದ ತೀವ್ರತೆ ಎಷ್ಟಿತ್ತು ? ನೋಡಿ

ಕೊಡಗು ಜಿಲ್ಲೆಯ ವಿವಿಧ ಭಾಗಗಳಲ್ಲಿ ಲಘು ಭೂಕಂಪನವಾಗಿರುವುದು ಹೌದೆಂದು ಸಂಬಂಧಪಟ್ಟ ಇಲಾಖೆ ತಿಳಿಸಿದೆ‌. ಮದೆ ಗ್ರಾಮ ಪಂಚಾಯಿತಿ ವ್ಯಾಪ್ತಿ ಹಾಗೂ ಜೋಡುಪಾಲ ಸುತ್ತಮುತ್ತಲ ಪ್ರದೇಶದ,ಮಡಿಕೇರಿ‌ ನಗರದ ಎರಡು ಕಡೆಗಳಲ್ಲಿ ಬುಧವಾರ ಭೂಮಿ ಕಂಪಿಸಿತ್ತು.2ನೇ ಮೊಣ್ಣಂಗೇರಿ, ಬೆಟ್ಟತ್ತೂರು ಸೇರಿದಂತೆ ಸೇರಿದಂತೆ ಕೆಲವು ಭಾಗಗಳಲ್ಲಿ ಬೆಳಿಗ್ಗೆ 10.50 ರ ಸುಮಾರಿನಲ್ಲಿಭೂಮಿ ಕಂಪಿಸಿದೆ. ಮದೆ ಗ್ರಾಮಪಂಚಾಯಿತಿಯಲ್ಲಿ ಭೂಮಿಯಿಂದ 5 ಕಿ.ಮೀ ಆಳದಲ್ಲಿ 1.6 ತೀವ್ರತೆಯ ಭೂಕಂಪ ದಾಖಲಾಗಿದೆ ಎಂದು ತಿಳಿಸಲಾಗಿದೆ.ಇದರ ಕೇಂದ್ರ ಬಿಂದು ಮಡಿಕೇರಿ ನಗರದಿಂದ 4 ಕಿ.ಮೀ, ದೂರದಲ್ಲಿತ್ತು ಎಂದು

ಕೊಡಗಿನಲ್ಲಿ ಲಘು ಭೂಕಂಪನ ಸಂಭವಿಸಿರುವುದು ನಿಜ! ಭೂಕಂಪನದ ತೀವ್ರತೆ ಎಷ್ಟಿತ್ತು ? ನೋಡಿ Read More »

ಪೆರಾಜೆ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ

ಪೆರಾಜೆ ಶ್ರೀ ಶಾಸ್ತಾವು ದೇವರ ಕಾಲಾವಧಿ ಜಾತ್ರೋತ್ಸವಕ್ಕೆ ಮುಹೂರ್ತದ ಗೊನೆಯನ್ನು ಪುದುವಟ್ಟು ಕಾಪುಸ್ಥಾನ ಮೂಲೆಮಜಲು ನಿಂದ ಕಡಿಯುವುದರ ಮಖಾಂತರ ಶ್ರೀ ದೇವರ ಜಾತ್ರೋತ್ಸವಕ್ಕೆ ಚಾಲನೆ ನೀಡಲಾಯಿತು.ಈ ಸಂದರ್ಭದಲ್ಲಿ ದೇವಳದ ಆಡಳಿತ ಸಮಿತಿಯವರು ಊರವರು ಉಪಸ್ಥಿತರಿದ್ದರು.

ಪೆರಾಜೆ : ಕಾಲಾವಧಿ ಜಾತ್ರೋತ್ಸವಕ್ಕೆ ಗೊನೆಮೂಹೂರ್ತ Read More »

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ

ಬಾಲಿವುಡ್ ನಟಿ ಕತ್ರಿನಾ ಕೈಫ್ ಮಾ.11 ರಂದು ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಿ ಎರಡು ದಿನಗಳ ಸರ್ಪಸಂಸ್ಕಾರ ಸೇವೆಯಲ್ಲಿ ಪಾಲ್ಗೊಗೊಳ್ಳುವರು.ದಕ್ಷಿಣ ಭಾರತದ ಸುಪ್ರಸಿದ್ಧ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಅನೇಕ ಬಾಲಿವುಡ್, ಹಾಲಿವುಡ್ ನಟ ನಟಿಯರು ಆಗಮಿಸುತ್ತಿದ್ದು, ಸಂತಾನ ಭಾಗ್ಯವಿಲ್ಲದವರು, ಚರ್ಮರೋಗ ವ್ಯಾಧಿ, ಆರೋಗ್ಯ ವೃದ್ಧಿಗಾಗಿ ಸೇವೆಯನ್ನು ಸಲ್ಲಿಸುವಂಥದ್ದು ಸರ್ವೇಸಾಮಾನ್ಯವಾಗಿದೆ.ಅದೇ ರೀತಿ ಕತ್ರಿನಾ ಕೈಫ್ ಅವರು ಕೂಡ ಕುಕ್ಕೆ ಸುಬ್ರಹ್ಮಣ್ಯನ ಸೇವೆಯನ್ನು ಸಲ್ಲಿಸುವುದಕ್ಕೋಸ್ಕರ ಎರಡು ದಿನಗಳ ಸರ್ಪ ಸಂಸ್ಕಾರ ಸೇವೆಯಲ್ಲಿ ಪಾಲ್ಗೊಳ್ಳಲಿರುವರು ಎಂದು ಹೇಳಲಾಗಿದೆ.ಮಾ.11 ರಂದು ಆರಂಭವಾದ ಸರ್ಪ

ಬಾಲಿವುಡ್ ನಟಿ ಕತ್ರಿನಾ ಕೈಫ್ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ Read More »

error: Content is protected !!
Scroll to Top