ಮಡಿಕೇರಿ ದಸರಾ ಸಮಿತಿಯಿಂದ ಬಹುಭಾಷಾ ಕವಿಗೋಷ್ಠಿ ಭಾಷಾಂತರ ಕೆಲಸ ಮತ್ತಷ್ಟು ಹೆಚ್ಚು ಆಗಲಿ: ಜಿಲ್ಲಾಧಿಕಾರಿ ವೆಂಕಟ್ ರಾಜಾ
ಮಡಿಕೇರಿ :-ರಾಷ್ಟ್ರದಲ್ಲಿ ಎಂಟು ಜ್ಞಾನಪೀಠ ಪ್ರಶಸ್ತಿ ಪಡೆದುಕೊಂಡಿರುವ ಕನ್ನಡ ಭಾಷೆ ಅತ್ಯಂತ ಶ್ರೀಮಂತಿಕೆ ಹೊಂದಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ.ಮಡಿಕೇರಿ ನಗರ ದಸರಾ ಸಮಿತಿ ವತಿಯಿಂದ ನಗರದ ಗಾಂಧಿ ಮೈದಾನದ ಕಲಾಸಂಭ್ರಮ ವೇದಿಕೆಯಲ್ಲಿ ಬುಧವಾರ ನಡೆದ ಬಹುಭಾಷಾ ಕವಿಗೋಷ್ಠಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಕನ್ನಡ ಸೇರಿದಂತೆ ಇತರೆ ಭಾಷೆಗಳಿಗೂ ಅವಕಾಶ ಕಲ್ಪಿಸಿರುವುದು ಉತ್ತಮ ಬೆಳವಣಿಗೆ, ಜೊತೆಗೆ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೂ ಕವಿಗೋಷ್ಠಿಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಬೇಕು ಎಂದು ಸಲಹೆ ಮಾಡಿದರು.ಕತೆ, ಕವನ, […]










