ಪ್ರಚಲಿತ

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕರಿಸಲಿದ್ದಾರೆ.ಹಿರಿಯ ಸಹಾಯಕ ಆಯುಕ್ತರಾಗಿದ್ದ ಜುಬಿನ್ ಮೊಹಪಾತ್ರ ಅವರು ವರ್ಗಾವಣೆಗೊಂಡ ಬಳಿಕ ಶ್ರವಣ್ ಕುಮಾರ್ ಪ್ರೊಬೆಷನರಿ ಸಹಾಯಕ ಆಯುಕ್ತರಾಗಿದ್ದರು.ಇದೀಗ ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರಾಗಿರುವ ಕೆಎಎಸ್ ಕಿರಿಯ ಶ್ರೇಣಿಯ ಅಧಿಕಾರಿ ಸ್ಟೆಲ್ಲಾ ವರ್ಗೀಸ್ ಅವರನ್ನು ಪುತ್ತೂರು ಉಪವಿಭಾಗದ ಸಹಾಯಕ ಆಯುಕ್ತರಾಗಿ ನಿಯುಕ್ತಿ ಮಾಡಲಾಗಿದೆ.

ಪುತ್ತೂರು ಉಪವಿಭಾಗದ ನೂತನ ಸಹಾಯಕ ಆಯುಕ್ತರಾಗಿ ಸ್ಟೆಲ್ಲಾ ವರ್ಗೀಸ್ ಸದ್ಯದಲ್ಲೇ ಅಧಿಕಾರ ಸ್ವೀಕಾರ Read More »

ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಾಲ್ಕೂರು ಗ್ರಾಮದ ಹಾಲೆಮಜಲಿನ ಆಸಕ್ತ ಮಹಿಳೆಯವರಾದ ಯಮುನಾ ಅಮೆರವರಿಗೆ ಮನೆ ರಚನೆಗಾಗಿ ರೂ. 30,000/- ಅನುದಾನ ಮಂಜೂರು ಆಗಿದ್ದು, ಇದರ ಮಂಜೂರಾತಿ ಪತ್ರವನ್ನು ಸುಳ್ಯ ತಾಲೂಕಿನ ಶ್ರೀ ಕ್ಷೇ ಧ ಗ್ರಾ ಯೋಜನೆಯ ಯೋಜನಾಧಿಕಾರಿಯವರಾದ ಮಾಧವ ಗೌಡರವರು ವಿತರಣೆ ಮಾಡಿದರುಈ ಸಂದರ್ಭದಲ್ಲಿ ಹಾಲೆಮಜಲು ಒಕ್ಕೂಟದ ಅಧ್ಯಕ್ಷರಾದ ಲೋಹಿತ್ ಚೆಮ್ನೂರು, ವಲಯದ ಮೇಲ್ವಿಚಾರಕರಾದ ಬಾಲಕೃಷ್ಣ ಗೌಡ, ಸೇವಾಪ್ರತಿನಿಧಿ ಹರಿಶ್ಚಂದ್ರ ಕೆ, ಒಕ್ಕೂಟ ಪದಾಧಿಕಾರಿಗಳು, ಸಂಘಗಳ ಸದಸ್ಯರು ಉಪಸ್ಥಿತರಿದ್ದರು.

ನಾಲ್ಕೂರು : ಮನೆ ರಚನೆಗಾಗಿ ಅನುದಾನದ ಮಂಜೂರಾತಿ ಪತ್ರ ವಿತರಣೆ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ದಿನಾಂಕ 13-02-2025 ರಂದು ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ನ್ಯಾಚ್ಯುರಿಟ ಹೆಲ್ತ್ ಸೊಲ್ಯೂಷನ್ಸ್ ಪ್ರೈವೇಟ್ ಲಿಮಿಟೆಡ್ ಕುಶಾಲನಗರ ಇದರ ಸಿ.ಇ.ಒ ಆದ ಶ್ರೀಮತಿ. ವೈಶಾಖ ಇವರು ಸಂಪನ್ಮೂಲ ವ್ಯಕ್ತಿಯಾಗಿ ಕಾಲೇಜಿನ ವಿದ್ಯಾರ್ಥಿನಿಯರಿಗೆ ಹಾಗೂ ಸಂಸ್ಥೆಯ ಮಹಿಳಾ ಸಿಬ್ಬಂದಿ ಗಳಿಗೆ ಮಾಹಿತಿ ಕಾರ್ಯಾಗಾರ ವನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿಕಾಲೇಜಿನ ಪ್ರಾಂಶುಪಾಲರಾದ ಪ್ರೊ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ – ಮಹಿಳೆಯರಿಗೆ ಜೈವಿಕ ವಿಘಟನೆಯ ಸ್ಯಾನಿಟರಿ ಪ್ಯಾಡ್ ಬಳಕೆಯ ಕುರಿತು ಜಾಗೃತಿ ಕಾರ್ಯಕ್ರಮ Read More »

ಲಾರಿ ಚಾಲಕನಿಗೆ ಮೂರ್ಚೆ ರೋಗ ಡಿವೈಡರ್ ಮೇಲೆ ಹತ್ತಿದ ಲಾರಿ

ಲಾರಿ ಚಾಲಕನಿಗೆ ಮೂರ್ಛೆ ರೋಗ ಇದ್ದ ಪರಿಣಾಮ ಲಾರಿಯೊಂದು ಡಿವೈಡರ್ ಮೇಲೆ ಹತ್ತಿ ಸುಮಾರು 100 ಮೀ.ನಷ್ಟು ಚಲಿಸಿ ನಿಂತಿದ್ದು, ಸೀಟಿನಲ್ಲಿ ಬಿದ್ದಿದ್ದ ಚಾಲಕನನ್ನು ಸ್ಥಳೀಯರು ತುಂಬೆ ಆಸ್ಪತ್ರೆಗೆ ದಾಖಲಿಸಿದ್ದಾರೆ.ಇಂದು (ಫೆ.12, ಬುಧವಾರ) ಬೆಳಗ್ಗೆ 7.45ರ ಸುಮಾರಿಗೆ ನಡೆದಿದ್ದು, ಡಿವೈಡರ್ ಮೇಲೆ ಅಳವಡಿಸಿದ್ದ ರಸ್ತೆ ಸೂಚನಾ ಫಲಕಕ್ಕೆ ಹಾನಿಯಾಗಿರುವುದು ಬಿಟ್ಟರೆ ಉಳಿದಂತೆ ಯಾವುದೇ ಹಾನಿ లుంటాగిల్లಲಾರಿಯು ಬೆಂಗಳೂರಿನಿಂದ ಮಂಗಳೂರಿಗೆ ಚಲಿಸುತ್ತಿತ್ತು ಎನ್ನಲಾಗಿದೆ. ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ

ಲಾರಿ ಚಾಲಕನಿಗೆ ಮೂರ್ಚೆ ರೋಗ ಡಿವೈಡರ್ ಮೇಲೆ ಹತ್ತಿದ ಲಾರಿ Read More »

ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ಅಂತರ್ ಜಿಲ್ಲಾ ರಸ್ತೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭರವಸೆ

ತೊಡಿಕಾನ : ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಅತೀ ಅಗತ್ಯವಿದ್ದು ಈ ರಸ್ತೆ ಅಭಿವೃದ್ಧಿ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎಸ್.ಎಸ್ ಪೊನ್ನಣ್ಣ ಭರವಸೆ ನೀಡಿದ್ದಾರೆ.ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಆಗಮಿಸಿ ದೇವಳದ ಅಕ್ಷಯ ಮಂದಿರದಲ್ಲಿ ಮಂಗಳವಾರ ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅಭಿವೃದ್ಧಿ ಹೋರಾಟ ಸಮಿತಿ ಇದರ ನೇತ್ರತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಅವರು ಮಾತನಾಡಿದರು.ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆ ಅತೀ

ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ಅಂತರ್ ಜಿಲ್ಲಾ ರಸ್ತೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುವೆ : ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ.ಎಸ್ ಪೊನ್ನಣ್ಣ ಭರವಸೆ Read More »

ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆ

ಆರೋಹ ಫಿಲಂಸ್ ಬ್ಯಾನರ್ ಅಡಿಯಲ್ಲಿ ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ಚಿತ್ರ ತಂಡ ತಿಳಿಸಿದೆ.ಅವರು ಸುಳ್ಯ ಪ್ರೆಸ್‌ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಚಿತ್ರದ ನಿರ್ಮಾಪಕ ಶೈಲೇಶ್ ಅಂಬೆಕಲ್ಲು ‘ಕೌಟುಂಬಿಕ ಹಿನ್ನಲೆಯಲ್ಲಿ ವಿಭಿನ್ನ ಕಥೆಯನ್ನು ಹೊಂದಿರುವ ಕುಟುಂಬ ಸಮೇತ ಎಲ್ಲರೂ ನೋಡಬಹುದಾದ ಮೌಲ್ಯಯುತವಾದ ಸಾಮಾಜಿಕ ಸಂದೇಶ ನೀಡುವ ಸಿನಿಮಾ ಇದಾಗಿದೆ ಎಂದು ಹೇಳಿದರು.ಚಿತ್ರದ

ಶೈಲೇಶ್ ಅಂಬೆಕಲ್ಲು ಹಾಗೂ ಲಕ್ಷ್ಮಣ ಬಿ.ಕೆ ನಿರ್ಮಿಸಿ ಮಯೂರ್ ಅಂಬೆಕಲ್ಲು ಹಾಗೂ ತೇಜಸ್ ಕಿರಣ್ ಜಂಟಿಯಾಗಿ ನಿರ್ದೇಶಿಸಿರುವ ‘ಭಾವ ತೀರ ಯಾನ’ ಸಿನಿಮಾ ಫೆ. 21ರಂದು ರಾಜ್ಯಾದ್ಯಂತ ಬಿಡುಗಡೆ Read More »

ನಾಳೆ(ಫೆ.11) ತೊಡಿಕಾನ ದೇವಳಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ

ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನಕ್ಕೆ ಫೆ. 11 ರಂದು ಅಪರಾಹ್ನ 2.00ಕ್ಕೆ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೊನ್ನಣ್ಣ ರವರು ಮತ್ತು ಸುಳ್ಯ ಶಾಸಕರಾದ ಕು. ಭಾಗೀರಥಿ ಮುರುಳ್ಯ ಭೇಟಿ ನೀಡಲಿದ್ದು, ಅರಂತೋಡು ತೊಡಿಕಾನ ಪಟ್ಟಿ ಭಾಗಮಂಡಲ ರಸ್ತೆಯ ಅಭಿವೃದ್ಧಿಯ ಕುರಿತು‌ ಸಾರ್ವಜನಿಕರ ಮನವಿ ಮೇರೆಗೆ ಸಭೆ ನಡೆಸಲಿದ್ದಾರೆ.

ನಾಳೆ(ಫೆ.11) ತೊಡಿಕಾನ ದೇವಳಕ್ಕೆ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರ ಪೊನ್ನಣ್ಣ ಮತ್ತು ಶಾಸಕಿ ಭಾಗೀರಥಿ ಮುರುಳ್ಯ ಭೇಟಿ Read More »

ರಮೇಶ್ ಕುದ್ಪ್ಪಾಜೆಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ

ಹಗಲಿರುಳೆನ್ನದೇ ಕರ್ತವ್ಯ ನಿರ್ವಹಿಸಿಕೊಂಡು,ಅಡಿಕೆ / ತೆಂಗಿನ ಮರವನ್ನು ಏರುವ, ಪ್ರಾಮಾಣಿಕ ಸೇವೆಯನ್ನು ನೀಡುತ್ತಾ ಬರುತ್ತಿರುವ ಜಯನಗರದ ಮನೆ ಮನದಲ್ಲಿ ಪ್ರೀತಿಗಳಿಸಿರುವ ರಮೇಶ್ ಕುದ್ಪ್ಪಾಜೆ ಅವರನ್ನು ಸ್ವಾಮಿ ಕೊರಗಜ್ಜ ದೈವಸ್ಥಾನ ಕೊರಂಬಡ್ಕದಲ್ಲಿ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವ ವನ್ನು ಜೇಸಿಐ ಸುಳ್ಯ ಪಯಸ್ವಿನಿ ವತಿಯಿಂದ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿಜೇಸಿಐ ಸುಳ್ಯ ಪಯಸ್ವಿನಿ ಅಧ್ಯಕ್ಷ ಜೇಸಿ ಸುರೇಶ್ ಕಾಮತ್, ಕನ್ನಡ ಸಾಹಿತ್ಯ ಪರಿಷತ್ ಸುಳ್ಯ ತಾಲೂಕು ಘಟಕ ಕಾರ್ಯಕಾರಿಣಿ ಸಮಿತಿ ಸದಸ್ಯರು ಹಾಗೂ ಸ್ವಾಮಿ ಕೊರಗಜ್ಜ ದೈವಸ್ಥಾನ ಸಮಿತಿ

ರಮೇಶ್ ಕುದ್ಪ್ಪಾಜೆಯವರಿಗೆ ಸೆಲ್ಯೂಟ್ ದಿ ಸೈಲೆಂಟ್ ಸ್ಟಾರ್ ಗೌರವಾರ್ಪಣೆ Read More »

ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ

ಉಪಾಸನ ಫೌಂಡೇಶನ್ ನ ಉಪಾಸಕರ ನೇತೃತ್ವದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ಮೊದಲ ಬಾರಿಗೆ ಫೌಂಡೇಶನ್ ಮುಖ್ಯಸ್ಥ ಸದ್ಗುರುಶ್ರೀ ರಾಮರವರ ಮಾರ್ಗದರ್ಶನದಲ್ಲಿ ಸುಳ್ಯದ ಗೌಡ ಸಮುದಾಯ ಭವನದಲ್ಲಿ ಮನೋಶಕ್ತಿ ಕಾರ್ಯಗಾರ ಫೆ. 9ರಂದು ನಡೆಯಿತು.ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಪ್ರಾಂಶುಪಾಲ ಡಾ. ಡಿ. ವಿ. ಲೀಲಾಧರ್ ರವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.ಬಳಿಕ ಮಾತನಾಡಿದ ಅವರು ನಮ್ಮ ಹೃದಯ ಮತ್ತು ಮನಸ್ಸು ಶಾಂತವಾಗಿರಲು ಇಂತಹ ಕಾರ್ಯಕ್ರಮ ಸಹಕಾರಿಯಾಗಬಲ್ಲದು” ಶುಭ ಹಾರೈಸಿದರು.ಉಪಾಸನ ಫೌಂಡೇಶನ್ ನ ಮುಖ್ಯಸ್ಥ ಸದ್ಗುರುಶ್ರೀ

ಕೊಡಿಯಾಲಬೈಲು ; ಮನೋಶಕ್ತಿ ಕಾರ್ಯಗಾರ ಉದ್ಘಾಟನೆ Read More »

error: Content is protected !!
Scroll to Top