ಅಡ್ತಲೆ ಪ್ರದೇಶದಲ್ಲಿ ಕಾಡಾನೆಗಳಿಂದ ನಿರಂತರವಾಗಿ ಆಗುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆಯ ವತಿಯಿಂದ ಸಾರ್ವಜನಿಕ ಸಮಾಲೋಚನಾ ಸಭೆ
ಅಡ್ತಲೆ ಪ್ರದೇಶದಲ್ಲಿ ಕಾಡಾನೆಗಳಿಂದ ನಿರಂತರವಾಗಿ ಆಗುತ್ತಿರುವ ಸಮಸ್ಯೆಗಳ ಶಾಶ್ವತ ಪರಿಹಾರಕ್ಕೆ ಒತ್ತಾಯಿಸಿ ನಾಗರಿಕ ಹಿತರಕ್ಷಣಾ ವೇದಿಕೆ ಅಡ್ತಲೆ ವತಿಯಿಂದ ನೊಂದ ಕೃಷಿಕರ ಹಾಗೂ ಸಾರ್ವಜನಿಕರ ಸಮಾಲೋಚನಾ ಸಭೆ ಇಂದು (ಫೆ. 8) ವೇದಿಕೆಯ ಅಧ್ಯಕ್ಷರಾದ ಹರಿಪ್ರಸಾದ್ ಅಡ್ತಲೆ ಇವರ ಅಧ್ಯಕ್ಷತೆಯಲ್ಲಿ ಅಡ್ತಲೆ ವಠಾರದಲ್ಲಿ ನಡೆಯಿತು. ಆನೆ ದಾಳಿಯಿಂದ ನೊಂದ ಹಲವಾರು ಕೃಷಿಕರು ತಮ್ಮ ಬೆಳೆ ನಾಶವಾದ ಕುರಿತು ಹಾಗೂ ಅರಂತೋಡು-ಅಡ್ತಲೆ ರಸ್ತೆಯಲ್ಲಿ ಸಂಚರಿಸುವಾಗ ಆನೆಗಳಿಂದಾದ ಭಯದ ವಾತಾವರಣವನ್ನು ಸಭೆಯಲ್ಲಿ ತಿಳಿಸಿ ಶಾಶ್ವತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು. […]










