ಪ್ರಚಲಿತ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಲೀಲಾ ದಾಮೋದರ್ ಅವರಿಗೆ ಸನ್ಮಾನ

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಸಮ್ಮೇಳನದ ಅಧ್ಯಕ್ಷರಾದ ಲೀಲಾ ದಾಮೋದರ ರವರನ್ನು ಪರಾಜೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವತಿಯಿಂದ ಸನ್ಮಾನಿಸಲಾಯಿತು. ಸಹಕಾರ ಸಂಘದ ಅಧ್ಯಕ್ಷರಾದ ನಾಗೇಶ್ ಕುಂದಲ್ಪಾಡಿ ರವರು ಸನ್ಮಾನಿಸಿ ಅಖಿಲ ಭಾರತ ಸಹಕಾರ ಸಪ್ತಾಹದ ಹಿನ್ನೆಲೆಯಲ್ಲಿ ಶುಭಾಶಯಗಳು ತಿಳಿಸಿದರು. ಸಮ್ಮೇಳಧ್ಯಕ್ಷರು ಸಹಕಾರ ಸಂಘದ ಸದಸ್ಯರಾಗಿರುವ ಹಿನ್ನೆಲೆಯಲ್ಲಿ ಸಹಕಾರ ಸಂಘದ ಬೆಳವಣಿಗೆ ಕೃಷಿಕರ ಪ್ರಮುಖ ಸಮಸ್ಯೆಗಳ ಬಗ್ಗೆ ಸಮಾಲೋಚಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷರಾದ ಅಶೋಕ ಪಿ ಎಂ, ನಿರ್ದೇಶಕರುಗಳಾದ ಹೊನ್ನಪ್ಪ […]

ಸುಳ್ಯ ತಾಲೂಕು 27ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಲೀಲಾ ದಾಮೋದರ್ ಅವರಿಗೆ ಸನ್ಮಾನ Read More »

ಪೆರಾಜೆ: ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು,ರಸ್ತೆ ವಾಹನ ಸಂಚಾರಕ್ಕೆ ಮುಕ್ತ

ಪೆರಾಜೆಯ ಕಲ್ಬರ್ಪೆ ಬಳಿ ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಗೆ ಮರ ಬಿದ್ದ ಹಿನ್ನೆಲೆಯಲ್ಲಿ ರಸ್ತೆ ತಡೆ ಉಂಟಾಗಿದ್ದು ಇದೀಗ ಮರವನ್ನು ತೆರವುಗೊಳಿಸಿದ ಹಿನ್ನಲೆಯಲ್ಲಿ ರಸ್ತೆ ವಾಹನಗಳ ಸಂಚಾರಕ್ಕೆ ಮುಕ್ತವಾಗಿದೆ.ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ಸ್ಥಳೀಯರು ಸೇರಿ ಮರವನ್ನು‌ ತೆರವುಗೊಳಿಸಿ ವಾಹನಗಳ ಸಂಚಾರಕ್ಕೆ ಅನುವು ಮಾಡಿಕೊಟ್ಟರು.ತಮಿಳುನಾಡು ಮೂಲದ ದೋಸ್ತ್ ವಾಹನವೊಂದು ಸಂಚಾರ ಮಾಡುತ್ತಿದ್ದ ಸಮಯದಲ್ಲಿಯೇ ಈ ಮರ ಬಿದ್ದಿದೆ. ಅದರಷ್ಟವಶಾತ್ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ.ಎರಡು ವಿದ್ಯುತ್ ಕಂಬಗಳು ಮರಿದು ಬಿದ್ದಿವೆ.ಕೆಲವು ಕಿ.ಮೀ ದೂರ ಒಂದುವರೆ ಗಂಟೆಗೂ

ಪೆರಾಜೆ: ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು,ರಸ್ತೆ ವಾಹನ ಸಂಚಾರಕ್ಕೆ ಮುಕ್ತ Read More »

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಮಕ್ಕಳ ದಿನಾಚರಣೆ

ಸುಳ್ಯ ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ, ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಾಧಾಕೃಷ್ಣ ಬೊಳ್ಳೂರು ಮಾತನಾಡಿ ಪಂಡಿತ್ ನೆಹರೂರವರು ಭಾರತದ ಮೊದಲ ಪ್ರಧಾನಿಯಾಗಿ ಆಧುನಿಕ ಭಾರತದ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ನೆಹರೂರವರು ಸಾರ್ವಜನಿಕ ಉದ್ದಿಮೆಗಳನ್ನು ಸ್ಥಾಪಿಸುವ ಮೂಲಕ ಭವ್ಯ ಭಾರತಕ್ಕೆ ಮುನ್ನುಡಿ ಬರೆದವರು ಎಂದು ಹೇಳಿದರು.ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪಿ ಎಸ್ ಗಂಗಾಧರ್ ಮಾತನಾಡಿ ನೆಹರೂ ರವರ ದೂರದೃಷ್ಟಿಯ ಆಡಳಿತದಿಂದ ಇಂದು

ಸುಳ್ಯ: ಬ್ಲಾಕ್ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಪ್ರಧಾನಿ ಪಂಡಿತ್ ಜವಾಹರ್ ಲಾಲ್ ನೆಹರೂ ಜನ್ಮ ದಿನ ಮಕ್ಕಳ ದಿನಾಚರಣೆ Read More »

ಕೋವಿಶೀಲ್ಡ್ ಸೈಡೆಫೆಕ್ಟ್ ನಿಜ: ಕೋರಲ್ಲಿ ಆಸ್ಟ್ರಾಜೆನಿಕಾ ಒಪ್ಪಿಗೆ, ರಕ್ತ ಹೆಪ್ಪು ಗಟ್ಟುವಿಕೆ, ಇತರ ಸಮಸ್ಯೆಗಳಾಗುವ ಸಾಧ್ಯತೆ

ಲಂಡನ್: 2019-21ರ ಅವಧಿಯಲ್ಲಿ ಇಡೀ ಜಗತ್ತನ್ನು ಕಾಡಿದ ಕೋವಿಡ್ ಮಹಾಮಾರಿ ತಡೆಗೆ ತಾನು ಅಭಿವೃದ್ಧಿಪಡಿಸಿದ್ದ ಕೋವಿಡ್ ಲಸಿಕೆಯು ಅಪರೂಪದ ಅಡ್ಡಪರಿಣಾಮಗಳಿಗೆ ಕಾರಣವಾಗಬಹುದು ಎಂದು ಬ್ರಿಟನ್ ಮೂಲದ ಆಸ್ಟಾಜೆನಿಕಾ ಮೊದಲ ಬಾರಿಗೆ ಒಪ್ಪಿಕೊಂಡಿದೆ. ಕೋವಿಡ್ ಲಸಿಕೆಗಳ ಅಡ್ಡಪರಿ ಣಾಮದ ಕುರಿತು ನಾನಾ ವದಂತಿಗಳು ಇದ್ದ ವಾದರೂ, ಈ ಕುರಿತು ಕಂಪನಿ ಬಹಿರಂಗವಾಗಿ ಒಪ್ಪಿಕೊಂಡಿದೆ.ಇದೇ ಆಸ್ಟಾಜೆನಿಕಾ ಲಸಿಕೆಯನ್ನೇ ಭಾರತದ ಪುಣೆ ಮೂಲ ಸೀರಂ ಇನ್‌ಸ್ಟಿಟ್ಯೂಟ್ ಕೋವಿ ಶೀಲ್ಡ್ ಹೆಸರಲ್ಲಿ ಭಾರತದಲ್ಲಿ ಬಿಡುಗಡೆ ಮಾಡಿತ್ತು. ಭಾರತದಲ್ಲಿ ಹೆಚ್ಚು ಪ್ರಮಾಣದಲ್ಲಿ ನೀಡಿದ್ದ ಲಸಿಕೆ

ಕೋವಿಶೀಲ್ಡ್ ಸೈಡೆಫೆಕ್ಟ್ ನಿಜ: ಕೋರಲ್ಲಿ ಆಸ್ಟ್ರಾಜೆನಿಕಾ ಒಪ್ಪಿಗೆ, ರಕ್ತ ಹೆಪ್ಪು ಗಟ್ಟುವಿಕೆ, ಇತರ ಸಮಸ್ಯೆಗಳಾಗುವ ಸಾಧ್ಯತೆ Read More »

ಮೀನು ಪ್ರಿಯರಿಗೊಂದು ಗುಡ್ ನ್ಯೂಸ್,ನ.18ರಂದು ಪರಿವಾರಕಾನದಲ್ಲಿ ಸೀಫುಡ್ ಮೀನು ಮಾರುಕಟ್ಟೆ ಶುಭಾರಂಭ

ಮೀನು ಪ್ರಿಯರಿಗೆ ಒಂದು ಗುಡ್ ನ್ಯೂಸ್ ಇಲ್ಲಿದೆ.ನವಂಬರ್ 18ರಂದು ಸುಳ್ಯದ ಪರಿವಾರಕಾನ ಉಡುಪಿ ಗಾರ್ಡನ್ ಹೊಟೇಲ್ ಬಳಿ ಹಮೀದ್ ಮತ್ತು ಶಾಕಿಫ್ ಅವರ ಮಾಲಕತ್ವದಲ್ಲಿ ಸೀಫುಡ್ ಸಮುದ್ರ ಮೀನು ಮಾರ್ಕೆಟ್ ಶುಭಾರಂಭಗೊಳ್ಳಲಿದೆ.ಸುಮಾರು 25 ವರ್ಷಗಳಿಂದ ಮೀನು ಮಾರಾಟದಲ್ಲಿ ಹೆಸರುವಾಸಿಯಾದ ಮಾಲಕರು ಗ್ರಾಹಕರ ವಿಶ್ವಾಸಕ್ಕೆ ಪಾತ್ರರಾಗಿದ್ದು ಸುಳ್ಯದ ಪರಿವಾರಕಾನದಲ್ಲಿ ಹೊಸ ಮಾರ್ಕೆಟ್ ಪ್ರಾರಂಭಿಸುತ್ತಿದ್ದಾರೆ. ಗ್ರಾಹಕರ ಸಹಕಾರ ಎಂದಿನಂತೆ ಇರಲಿ. ನಾಡಿನ ಸಮಸ್ತ ಜನತೆಯನ್ನು ಈ ಮಳಿಗೆಗೆ ಸ್ವಾಗತಿಸುತ್ತಿದ್ದೇವೆ.ನಮ್ಮಲ್ಲಿ ಉತ್ತಮವಾದ ಎಲ್ಲ ಬಗೆಯ ಮೀನುಗಳು ಅತೀ ಕಡಿಮೆ ಬೆಲೆಯಲ್ಲಿ ಸಿಗುತ್ತದೆ

ಮೀನು ಪ್ರಿಯರಿಗೊಂದು ಗುಡ್ ನ್ಯೂಸ್,ನ.18ರಂದು ಪರಿವಾರಕಾನದಲ್ಲಿ ಸೀಫುಡ್ ಮೀನು ಮಾರುಕಟ್ಟೆ ಶುಭಾರಂಭ Read More »

ತುಳಸಿ ವಿವಾಹ ಯಾಕೆ ಅಷ್ಟೊಂದು ವಿಶೇಷ? ತುಳಸಿಗೂ ವಿಷ್ಣುವಿಗೂ ಸಂಬಂಧ ಹೇಗೆ?

ಕಾರ್ತಿಕ ಮಾಸದ ಹಬ್ಬಗಳಲ್ಲಿ ತುಳಸೀ ವಿವಾಹ ಅಥವಾ ತುಳಸೀ ಪೂಜೆ ವಿಶೇಷ. ಪ್ರತಿ ಭಾರತೀಯರೂ ಈ ಹಬ್ಬವನ್ನು ವಿಶೇಷವಾಗಿ ಆಚರಿಸುತ್ತಾರೆ. ಇದು ರಾತ್ರಿ ಆಚರಿಸುವ ಹಬ್ಬ. ಏಕಾದಶೀ ತಿಥಿಯಂದು ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಮಾಡುತ್ತಾರೆ. ಇದನ್ನು ಉತ್ಥಾನ ದ್ವಾದಶೀ ಎಂದೂ ಕರೆಯುವುದುಂಟು. ಶಯನೈಕಾದಶಿಯಂದು ಮಲಗಿದ ವಿಷ್ಣು ಇಂದು ಏಳುತ್ತಾನೆ.‌ ಹಾಗಾಗಿ ಇದನ್ನು ಪ್ರಬೋಧಿನೀ ಏಕಾದಾಶೀ ಎಂದೂ ಕರೆಯುತ್ತಾರೆ. ಜಲಂಧರ ಎನ್ನುವ ರಾಕ್ಷಸನನ್ನು ವಿವಾಹವಾದವಳು ವೃಂದಾ. ಆಕೆಯೇ ತುಳಸೀ.‌ ಜಲಂಧರನಿಂದ ಲೋಕಕ್ಕೆ ಕಂಟಕವೊದಗಿ ಬಂದಿತು. ಆ ಕಾರಣಕ್ಕೆ

ತುಳಸಿ ವಿವಾಹ ಯಾಕೆ ಅಷ್ಟೊಂದು ವಿಶೇಷ? ತುಳಸಿಗೂ ವಿಷ್ಣುವಿಗೂ ಸಂಬಂಧ ಹೇಗೆ? Read More »

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಭಾಗೀರಥಿ ಮುರುಳ್ಯ

ಸುಳ್ಯ: ಪ್ರತಿಭಾ ಕಾರಂಜಿ ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಉತ್ತಮ ವೇದಿಕೆ.ವಿದ್ಯಾರ್ಥಿಗಳು ಪ್ರತಿಭೆಯನ್ನು ತೋರ್ಪಡಿಸುವ ಮೂಲಕ ವೇದಿಯನ್ನು ಸದುಪಯೋಗಪಡಿಸಿ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದ್ದಾರೆ. ದ.ಕ.ಜಿಲ್ಲಾ ಪಂಚಾಯತ್, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಸಮನ್ವಯಾಧಿಕಾರಿಗಳ ಕಚೇರಿ ಸುಳ್ಯ ಹಾಗೂ ವಿವೇಕಾನಂದ ವಿದ್ಯಾಸಂಸ್ಥೆಗಳು ವಿನೂಬನಗರ ಇದರ ಸಹಭಾಗಿತ್ವದಲ್ಲಿ ವಿನೂಬನಗರ ವಿದ್ಯಾಸಂಸ್ಥೆಯಲ್ಲಿ ಎರಡು ದಿನಗಳ ಕಾಲ ನಡೆಯುವ ತಾಲೂಕು ಮಟ್ಟದಪ್ರತಿಭಾ ಕಾರಂಜಿ ಕಾರ್ಯಕ್ರಮವನ್ನು ನ.13ರಂದು ಉದ್ಘಾಟಿಸಿ ಅವರು ಮಾತನಾಡಿದರು.ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ

ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಗಳ ಅನಾವರಣಕ್ಕೆ ಪ್ರತಿಭಾ ಕಾರಂಜಿ ಸೂಕ್ತ ವೇದಿಕೆ : ಭಾಗೀರಥಿ ಮುರುಳ್ಯ Read More »

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ದಿನಾಂಕ 12-11-2024ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ವಿನಾಯಕ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಕಾಡೆಮಿ ಆಫ್ ಲಿಬರಲ್ ಎಜುಕೇಷನ್ (ರಿ.) ಸುಳ್ಯ ಇದರ ಅಧ್ಯಕ್ಷರಾದ ಡಾ. ಕೆ ವಿ ಚಿದಾನಂದರವರು ವಹಿಸಿ ಶಿಬಿರಾರ್ಥಿಗಳಿಗೆ ಗ್ರಾಮೀಣ ಜೀವನ ಶೈಲಿ, ಸಮಯ ಪ್ರಜ್ಞೆ ಹಾಗೂ ಸೇವಾ

ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆದ ವಾರ್ಷಿಕ ವಿಶೇಷ ಶಿಬಿರ ಸಮಾರೋಪ Read More »

ಕಸಾಪ ಸಾಹಿತ್ಯ ಸಂಭ್ರಮ ಸಮಾರೋಪ ಮತ್ತು ಸನ್ಮಾನ ಸಮಾರಂಭ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ನಡೆದ ಕನ್ನಡ ರಾಜ್ಯೊತ್ಸವ- ಸಾಹಿತ್ಯ ಸಂಭ್ರಮ ಕಾರ್ಯಕ್ರಮದ ಸಮಾರೋಪ ಸಮಾರಂಭ ಮತ್ತು ಸನ್ಮಾನ ಸಮಾರಂಭ ನ.12 ರಂದು ಸುಳ್ಯದ ಹಳೆಗೇಟಿನ ಶಿವಕೃಪಾ ನಿಲಯದಲ್ಲಿ ನಡೆಯಿತು.ಸಭೆಯ ಅಧ್ಯಕ್ಷತೆಯನ್ನು ಕಸಾಪ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಮುಖ್ಯ ಅತಿಥಿಯಾಗಿದ್ದ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಂಶುಪಾಲರಾದ ಪ್ರಕಾಶ್ ಮೂಡಿತ್ತಾಯ ಮಾತನಾಡಿದರು.ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಸಾಧಕರನ್ನು ಸನ್ಮಾನಿಸಿದರು. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ

ಕಸಾಪ ಸಾಹಿತ್ಯ ಸಂಭ್ರಮ ಸಮಾರೋಪ ಮತ್ತು ಸನ್ಮಾನ ಸಮಾರಂಭ Read More »

ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲದಾಸ್ ರವರಿಗೆ ಸಾರ್ವಜನಿಕ ಸನ್ಮಾಕ್ಕೆ ನಿರ್ಧಾರ

ದ.ಕ.ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಸುಳ್ಯ ಶಾರದಾಂಬ ಸೇವಾ ಸಮಿತಿಯ ಗೌರವಾಧ್ಯಕ್ಷರಾದ ಸಂಘಟಕ ಗೋಕುಲದಾಸ್ ರವರಿಗೆ ಸಾರ್ವಜನಕ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳುವ ಸಲುವಾಗಿ ಗೋಕುಲದಾಸ್ ಅಭಿಮಾನಿಗಳ ಸಭೆ ನ.12 ರಂದು ಯುವಜನ ಸಂಯುಕ್ತ ಮಂಡಳಿಯ ಸಭಾಭವನದಲ್ಲಿ ನಡೆಯಿತು.ಎನ್.ಜಯಪ್ರಕಾಶ್ ರೈ ಅಧ್ಯಕ್ಷತೆ ವಹಿಸಿದ್ದರು. ಪಿ.ಸಿ.ಜಯರಾಮ್, ದಿನೇಶ್ ಮಡಪ್ಪಾಡಿ, ರಾಧಾಕೃಷ್ಣ ಬೊಳ್ಳೂರು, ಪಿ.ಎಸ್.ಗಂಗಾಧರ್, ಕೆ.ಎಂ.ಮುಸ್ತಫಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಭವಾನಿಶಂಕರ ಕಲ್ಮಡ್ಕ ಪ್ರಸ್ತಾವಿಕವಾಗಿ ಮಾತನಾಡಿದರುಸಭೆಯಲ್ಲಿ ಮಾತನಾಡಿದ ಪ್ರಮುಖರು ಗೋಕುಲದಾಸ್‌ ಅವರಿಗೆ ಅರ್ಹವಾಗಿಯೇ ರಾಜ್ಯೋತ್ಸವ ಪ್ರಶಸ್ತಿ ಬಂದಿದೆ.ಅವರಿಗೆ ಸಾರ್ವಜನಿಕ ಸನ್ಮಾನ ಮಾಡಬೇಕಾಗಿರುವುದು ನಮ್ಮಲ್ಲರ

ಜಿಲ್ಲಾ ರಾಜೋತ್ಸವ ಪ್ರಶಸ್ತಿ ಪುರಸ್ಕೃತರಾದ ಗೋಕುಲದಾಸ್ ರವರಿಗೆ ಸಾರ್ವಜನಿಕ ಸನ್ಮಾಕ್ಕೆ ನಿರ್ಧಾರ Read More »

error: Content is protected !!
Scroll to Top