ಪ್ರಚಲಿತ

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ

ಸುಳ್ಯ: ಸುಳ್ಯ ತಾಲೂಕಿನ ವಿವಿಧ ಭಾಗಗಳಲ್ಲಿ ವಿದ್ಯುತ್‌ ನ. 9 ರಂದು ವಿದ್ಯುತ್ ಕಡಿತ ಮಾಡಲಾಗುವುದು ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಸುಳ್ಯ ಉಪವಿಭಾಗ ವ್ಯಾಪ್ತಿಯ 33/11 ಕೆ.ವಿ. ಸುಳ್ಯ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಡುವ ಎಲ್ಲಾ11 ಕೆ.ವಿ. ಫೀಡರುಗಳಲ್ಲಿ ತುರ್ತು ನಿಯತಕಾಲಿಕ ನಿರ್ವಹಣಾ ಕೆಲಸವನ್ನು ಹಮ್ಮಿಕೊಂಡಿರುವುದರಿಂದ 11ಕೆ.ವಿ ಸುಳ್ಯ-1 ಕೇರ್ಪಳ, ಸುಳ್ಯ-2 ಶ್ರೀರಾಂಪೇಟೆ, ಜಬಳೆ, ಡಿಪ್ಪೋ ತೊಡಿಕಾನ, ಕೊಲ್ಟಾರ್, ದೇವರಗುಂಡ, ಅಜ್ಜಾವರ, ಉಬರಡ್ಕ, ಕಲ್ಲುಗುಂಡಿ, ಮಂಡೆಕೋಲು ಫೀಡರುಗಳಲ್ಲಿ ಬೆಳಿಗ್ಗೆ 10ರಿಂದ ಸಾಯಂಕಾಲ 6ರ ತನಕ ವಿದ್ಯುತ್‌ […]

ನಾಳೆ ಪವರ್ ಕಟ್,ಎಲ್ಲೆಲ್ಲಿ ಪವರ್ ಕಟ್ ಇಲ್ಲಿದೆ ಮಾಹಿತಿ Read More »

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

ಕರ್ನಾಟಕ ನೇತಾಜಿ ಚಾರಿಟೇಬಲ್ ಟ್ರಸ್ಟ್ (ರಿ.) ಬೆಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ನೀಡುವ 68ನೆಯ ಕನ್ನಡ ರಾಜ್ಯೋತ್ಸವ ದಿನಾಚರಣೆಯ ಪ್ರಯುಕ್ತ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ನವೆಂಬರ್ 06 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರ ದಲ್ಲಿ ಪ್ರದಾನ ಮಾಡಲಾಯಿತು. ಈ ಸಂದರ್ಭ ಸುಳ್ಯ ತಾಲೂಕಿನಲ್ಲಿ ಪೆನ್ಸಿಲ್ ಆರ್ಟ್ ಮೂಲಕ ಅಲ್ಲದೆ ವಾಲ್ ಆರ್ಟ್, ಕ್ಯಾನ್ವಾಸ್ ಆರ್ಟ್ , ಆರ್ಕಲಿಕ್ ಆರ್ಟ್, ಬಾಟಲ್ ಆರ್ಟ್, ರಂಗೋಲಿ ಆರ್ಟ್ ಹಾಗೂ ವಿವಿಧ ಪ್ರಕಾರದ ಮುಖವಾಡ ತಯಾರಿಕೆಯ ಮೂಲಕ ಪ್ರಸಿದ್ಧ

ಕು.ಪೂಜಾ ಬೋರ್ಕಾರ್ ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ Read More »

ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ

ಸುಳ್ಯದ ಬೀರಮಂಗಲದಲ್ಲಿ ನಾಗರೋಥ್ಥಾನ ಯೋಜನೆಯಡಿ ನಿರ್ಮಾಣವಾಗಿರುವ ಉದ್ಯಾನವನಕ್ಕೆ ಪುತ್ತೂರು ಸಹಾಯಕ ಆಯುಕ್ತರು ಇಂದು ಭೇಟಿ ನೀಡಿದರು. ಮಹಾತ್ಮ ಗಾಂಧಿ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಸುಳ್ಯದ ಪ್ರವಾಸಿ ಮಂದಿರದಲ್ಲಿ ಎ. ಸಿ ಯವರನ್ನು ಭೇಟಿಯಾಗಿ ಉದ್ಯಾನವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆ ನಿರ್ಮಾಣದ ಬಗ್ಗೆ ಗಮನಕ್ಕೆ ತಂದ ಸಂದರ್ಭದಲ್ಲಿ ಉದ್ಯಾನವನಕ್ಕೆ ಭೇಟಿ ನೀಡಿ ಸ್ಥಳ ವೀಕ್ಷಣೆ ನಡೆಸಿ ಕೂಡಲೇ ಈ ಬಗ್ಗೆ ನಗರ ಪಂಚಾಯತ್ ಸಭೆಯಲ್ಲಿ ನಿರ್ಣಯ ಕೈಗೊಂಡು ಪ್ರತಿಮೆ ನಿರ್ಮಾಣ ಕೈಗೆತ್ತಿಕೊಳ್ಳುವಂತೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ನಗರ

ಸುಳ್ಯ: ಬೀರಮಂಗಲ ಉದ್ಯಾನವನಕ್ಕೆ ಎ. ಸಿ ಭೇಟಿಮಹಾತ್ಮ ಗಾಂಧಿ ಪ್ರತಿಮೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ನಗರ ಪಂಚಾಯತ್ ಗೆ ಸೂಚನೆ Read More »

ನ.10 ರಂದು ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸದಾನಂದ ಮಾವಜಿ ಮನವಿ

ಮಡಿಕೇರಿ ನ.07(ಕರ್ನಾಟಕ ವಾರ್ತೆ):-ಕರ್ನಾಟಕ ಅರೆಭಾμÉ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ವತಿಯಿಂದ ತಾಲ್ಲೂಕಿನ ಚೆಯ್ಯಂಡಾಣೆ ಗ್ರಾಮದ ನರಿಯಂದಡ ಅಯ್ಯಪ್ಪ ಯುವಕ ಸಂಘ ಇವರ ಸಹಕಾರದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ವು ನವೆಂಬರ್ 10 ರಂದು ಚೆಯ್ಯಂಡಾಣೆ ಸರ್ಕಾರಿ ಮಾದರಿ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಲಿದೆ ಎಂದು ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ತಿಳಿಸಿದ್ದಾರೆ.ನಗರದ ಅಕಾಡೆಮಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಈ ಕಾರ್ಯಕ್ರಮಕ್ಕೆ ಅರೆಭಾಷೆಕರು ಹೆಚ್ಚಿನ ಸಂಖ್ಯೆಯಲ್ಲಿ

ನ.10 ರಂದು ಚೆಯ್ಯಂಡಾಣೆ ಗ್ರಾಮದಲ್ಲಿ ‘ಅರೆಭಾಷೆ ಗಡಿನಾಡ ಉತ್ಸವ’ಅರೆಭಾಷಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಸದಾನಂದ ಮಾವಜಿ ಮನವಿ Read More »

ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವ – ಸಾಹಿತ್ಯ ಸಂಭ್ರಮ ಪ್ರಯುಕ್ತ ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಸುವಿಚಾರ ವೇದಿಕೆ ವತಿಯಿಂದ ರಾಜ್ಯದಲ್ಲಿ ಮಲೆನಾಡ ಗಾಂಧಿ ದಿ. ಗೋವಿಂದೇಗೌಡ ಸ್ಮರಣಾರ್ಥ ನೀಡುವ ಅತ್ತ್ಯುತ್ತಮ ಶಾಲೆ ಪುರಸ್ಕಾರ ಪಡೆದ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕೊಲ್ಚಾರು ಶಾಲೆಯ ಸಭಾಂಗಣದಲ್ಲಿ ಸುಳ್ಯದ ಖ್ಯಾತ ಗಾಯಕ, ಜ್ಯೋತಿಷಿ ಮತ್ತು ಸಾಹಿತಿಗಳಾದ ಎಚ್. ಭೀಮರಾವ್ ವಾಷ್ಠರ್ ಮತ್ತು ತಂಡದ ವತಿಯಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ ಜರುಗಿತು. ಗೀತ ಗಾಯನ ಕಾರ್ಯಕ್ರಮದಲ್ಲಿ ಕನ್ನಡ

ಕೋಲ್ಚಾರು ಶಾಲೆಯಲ್ಲಿ ಭೀಮರಾವ್ ವಾಷ್ಠರ್ ತಂಡದಿಂದ ವಿಶೇಷ ಗೀತ ಗಾಯನ ಕಾರ್ಯಕ್ರಮ Read More »

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದೇವಕಿ ಆಯ್ಕೆ

ಸುಳ್ಯ: ಅಜ್ಜಾವರ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ದೇವಕಿ ಕಾಟಿಪಳ್ಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಅಜ್ಜಾವರ ಗ್ರಾ.ಪಂ. ಅಧ್ಯಕ್ಷರಾಗಿದ್ದ ಬೇಬಿ ಅವರು ರಾಜಿನಾಮೆ ನೀಡಿದ ಹಿನ್ನಲೆಯಲ್ಲಿ ತೆರವಾದ ಸ್ಥಾನಕ್ಕೆ ನ.7 ರಂದು ನೂತನ ಅಧ್ಯಕ್ಷರ ಆಯ್ಕೆಗೆ ಚುನಾವಣೆ ನಡೆಯಿತು. ಅಜ್ಜಾವರ ಗ್ರಾ.ಪಂ. ನ ಅಧ್ಯಕ್ಷತೆ ಎಸ್ಸಿ ಮಹಿಳೆಗೆ ಮೀಸಲಾಗಿತ್ತು. ಕಳೆದ ಬಾರಿ ಅಧ್ಯಕ್ಷತೆ ಆಯ್ಕೆ ಸಂದರ್ಭ ಕಾಂಗ್ರೆಸ್‌ ಬೆಂಬಲಿತ ಸದಸ್ಯರಾದ ಬೇಬಿ ಮತ್ತು ದೇವಕಿ ಆಕಾಂಕ್ಷಿಗಳಾಗಿದ್ದರು. ಬಳಿಕ ಮಾತುಕತೆ ನಡೆದು ಒಂದೂಕಾಲು ವರ್ಷದಂತೆ ಇಬ್ಬರಿಗೂ ಅಧ್ಯಕ್ಷತೆ ಹಂಚಿಕೊಡಲು ಪಕ್ಷ

ಅಜ್ಜಾವರ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ದೇವಕಿ ಆಯ್ಕೆ Read More »

ಮುಸ್ಲಿಂ ಸಮುದಾಯದ ಸಭೆ ನಡೆಸಿದ ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ

ಶಿಗ್ಗಾವಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಹಿನ್ನೆಲೆಯಲ್ಲಿ ಸಂಸದ ಬಸವರಾಜ ಬೊಮ್ಮಾಯಿ, ಮಗ ಭರತ್ ಅವರ ಗೆಲುವಿಗಾಗಿ ವಿವಿಧ ಸಮುದಾಯಗಳ ಪ್ರಮುಖರನ್ನು ಭೇಟಿಯಾಗಿ ಮಗನನ್ನು ಬೆಂಬಲಿಸಬೇಕೆಂದು ಕೇಳಿಕೊಳ್ಳುತ್ತಿದ್ದಾರೆ.ಮುಸ್ಲಿಂ ಸಮುದಾಯದ ಕೆಲವು ಪ್ರಮುಖ ಮುಖಂಡರೊಂದಿಗೆ ಅವರು ಬಂಕಾಪುರ ಪಟ್ಟಣದಲ್ಲಿ ಸಭೆ ನಡೆಸಿದರು.ಬಂಕಾಪುರದ ಪ್ರಮುಖ ಮುಸ್ಲಿಂ ಮುಖಂಡರ ಮನೆಗೆ ಮಂಗಳವಾರ ರಾತ್ರಿ ಭೇಟಿ ನೀಡಿದ ಬೊಮ್ಮಾಯಿ, “ನಾನು ಯಾವಾಗಲೂ ನಿಮ್ಮೊಂದಿಗೆ ನಿಂತಿದ್ದೇನೆ. ನಿಮ್ಮ ವ್ಯಾಪಾರ, ಉದ್ಯಮವನ್ನು ಬೆಳೆಸುವ ಮೂಲಕ ಆರ್ಥಿಕವಾಗಿ ಬಲಿಷ್ಠರಾಗಿ ನೀವು ಬೆಳೆಯಬೇಕು ಎಂದು ಮುಸ್ಲಿಂ ಸಮುದಾಯದವರನ್ನು ಉದ್ದೇಶಿಸಿ ಮಾತನಾಡಿದರು.

ಮುಸ್ಲಿಂ ಸಮುದಾಯದ ಸಭೆ ನಡೆಸಿದ ಮಾಜಿ ಸಿ.ಎಂ ಬಸವರಾಜ ಬೊಮ್ಮಾಯಿ Read More »

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ನಡೆಯಲಿರುವ ಒಂದು ವಾರದ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮವು ನ.6ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ- ರೆಂಜಾಳದ ಶ್ರೀ. ವಿನಾಯಕ ಸಭಾಭವನದಲ್ಲಿ ನಡೆಯಿತು.ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಯವರು ನೆರವೇರಿಸಿದರು. ಶಿಬಿರದ ಉದ್ಘಾಟನೆಯನ್ನು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ

ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಸುಳ್ಯ -ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಿಶೇಷ ಶಿಬಿರ ಉದ್ಘಾಟನೆ Read More »

ಮುಡಾ ಹಗರಣ ವಿಚಾರಣೆ ಬಳಿಕ ಸಿದ್ದರಮಾಯ್ಯ ಹೇಳಿದ್ದೇನು ಗೊತ್ತಾ?

ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ 2 ಗಂಟೆ ವಿಚಾರಣೆ ಎದುರಿಸಿದ್ದರು. ಈ ವೇಳೆ ನಗುಮುಖದಿಂದಲೇ ಕಚೇರಿಯಿಂದ ಹೊರ ಬಂದ ಸಿಎಂ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮತ್ತೆ ವಿಚಾರಣೆಗೆ ಬರಲು ಲೋಕಾಯುಕ್ತ ಅಧಿಕಾರಿಗಳು ಹೇಳಿಲ್ಲ. ಕಾನೂನು ಪ್ರಕಾರವೇ ನಿವೇಶನ ಪಡೆದಿದ್ದೇನೆ. ಬಿಜೆಪಿ, ಜೆಡಿಎಸ್‌ ನನ್ನ ವಿರುದ್ಧ ಸುಳ್ಳು ಆರೋಪ ಮಾಡಿವೆ. ಲೋಕಾಯುಕ್ತ ಅಧಿಕಾರಿಗಳು ಕೇಳಿದ ಎಲ್ಲಾ ಪ್ರಶ್ನೆಗೆ ಉತ್ತರಿಸಿದ್ದೇನೆ ಎಂದು ತಿಳಿಸಿದರು.

ಮುಡಾ ಹಗರಣ ವಿಚಾರಣೆ ಬಳಿಕ ಸಿದ್ದರಮಾಯ್ಯ ಹೇಳಿದ್ದೇನು ಗೊತ್ತಾ? Read More »

ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ

ದ.ಕ. ಜಿಲ್ಲೆಯಲ್ಲಿರುವ ಎಲ್ಲ ಖಾಸಗಿ ಆಸ್ಪತ್ರೆಗಳನ್ನು ಆಯುಷ್ಮಾನ್ ಭಾರತ್ ಯೋಜನೆಯಡಿ ಸೇರಿಸಬೇಕು ಎಂದು ಸಂಸದ ಕ್ಯಾ. ಬ್ರಿಜೇಶ್ ಚೌಟ ಜಿಲ್ಲಾಡ ಳಿತಕ್ಕೆ ಸೂಚಿಸಿದ್ದಾರೆ.ಜಿಲ್ಲಾಧಿಕಾರಿ ಕಚೇರಿಯಲ್ಲಿ ಆಯುಷ್ಮಾನ್ ಭಾರತ್ ಪ್ರಧಾನಮಂತ್ರಿ ಜನಾರೋಗ್ಯ ಯೋಜನೆ ಮತ್ತು ಮುಖ್ಯ ಮಂತ್ರಿ ಆರೋಗ್ಯ ಕರ್ನಾಟಕ ಯೋಜನೆ ಯ ಪರಿಣಾಮಕಾರಿ ಅನುಷ್ಠಾನದ ಕುರಿತು ಏರ್ಪಡಿಸಿದ್ದ ಆರೋಗ್ಯ ಇಲಾಖೆ ಅಧಿಕಾರಿಗಳು ಹಾಗೂ ಖಾಸಗಿ ಆಸ್ಪತ್ರೆಗಳ ಪ್ರತಿನಿಧಿಗಳ ಸಭೆಯಲ್ಲಿ ಸೋಮವಾರ ಅವರು ಮಾತನಾಡಿ ದರು.ತುರ್ತು ಸಂದರ್ಭದಲ್ಲಿ ರೋಗಿ ಮತ್ತು ಕುಟುಂಬದವರಿಗೆ ಆಯುಷ್ಮಾನ್ ಭಾರತ್‌ ನಡಿ ನೋಂದಣಿಯಾದ ಆಸ್ಪತ್ರೆ

ಆಯುಷ್ಮಾನ್‌ ಭಾರತ್‌ಗೆ ಎಲ್ಲಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ Read More »

error: Content is protected !!
Scroll to Top