ಪ್ರಚಲಿತ

ವಿರಾಪೇಟೆ ಗೌಡ ಸಮಾಜಕ್ಕೆ ಮೂರು ಕೋಟಿ 50 ಲಕ್ಷ ಮೌಲ್ಯದ ಭೂಮಿ ದಾನವಾಗಿ ನೀಡಿದ ಕೆ‌.ವಿ.ಜಿ ಸುಪುತ್ರರಿಗೆ ಸನ್ಮಾನ

ವಿರಾಜಪೇಟೆ ಗೌಡ ಸಮಾಜಕ್ಕೆ ಮೂರು ಕೋಟಿ 50 ಲಕ್ಷದ ಭೂಮಿಯನ್ನು ದಾನವಾಗಿ ನೀಡಿರುವ ಪೂಜ್ಯ ಕುರುಂಜಿ ವೆಂಕಟ್ರಮಣ ಗೌಡರ ಸುಪುತ್ರರಿಬ್ಬರನ್ನು‌ ವಿರಾಜಪೇಟೆ ಗೌಡ ಸಮುದಾಯದ ವತಿಯಿಂದ ನ.16ರಂದು ವಿರಾಪೇಟೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು.ಡಾ.ಕೆ.ವಿ ಚಿದಾನಂದ ಹಾಗೂ ಡಾ.ಕೆ.ವಿ ರೇಣುಕಾ ಪ್ರಸಾದ್ ಅವರನ್ನು ಸನ್ಮಾನಿಸಿ ಗೌಡ ಸಂಘದವರು ಗೌರವಿಸಿದರು.ಈ ಸಂದರ್ಭದಲ್ಲಿ ಮಾಜಿ ಸ್ಪೀಕರ್ ಕೆ.ಜಿ ಬೋಪಯ್ಯ ಗೌಡ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ವಿರಾಪೇಟೆ ಗೌಡ ಸಮಾಜಕ್ಕೆ ಮೂರು ಕೋಟಿ 50 ಲಕ್ಷ ಮೌಲ್ಯದ ಭೂಮಿ ದಾನವಾಗಿ ನೀಡಿದ ಕೆ‌.ವಿ.ಜಿ ಸುಪುತ್ರರಿಗೆ ಸನ್ಮಾನ Read More »

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು, ಕೃಷಿ ಕಾಲೇಜು ಪ್ರಾರಂಭಿಸಲು ಚಿಂತನೆ : ಡಾ.ವೀರೇಂದ್ರ ಹೆಗ್ಗಡೆ

ಉಜಿರೆ: ಧರ್ಮಸ್ಥಳದ ವತಿಯಿಂದ ಉಜಿರೆಯಲ್ಲಿ ಈ ವರ್ಷ ನರ್ಸಿಂಗ್ ಕಾಲೇಜು ಪ್ರಾರಂಭಿಸಲಾಗುವುದು. ನೂರು ಎಕರೆ ಪ್ರದೇಶದಲ್ಲಿ ಕೃಷಿ ಕಾಲೇಜು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಪ್ರಕಟಿಸಿದರು. ಕೃಷಿ ಕಾಲೇಜಿಗಾಗಿ ನೂರು ಎಕರೆ ಪ್ರದೇಶ ದೊರಕಿದಲ್ಲಿ ತಕ್ಷಣ ಕಾಲೇಜು ಸ್ಫಾಪನೆಯ ಪ್ರಕ್ರಿಯೆ ಪ್ರಾರಂಭಿಸಲಾಗುವುದು ಎಂದು ಹೆಗ್ಗಡೆಯವರು ಹೇಳಿದರು.ಲಕ್ಷದೀಪೋತ್ಸವ ಪ್ರಾರಂಭದ ದಿನವಾದ ಶನಿವಾರ ಉಜಿರೆಯಿಂದ ಧರ್ಮಸ್ಥಳಕ್ಕೆ ಬಂದ ಸಾವಿರಾರು ಪಾದಯಾತ್ರಿಗಳನ್ನು ಅಮೃತವರ್ಷಿಣಿ ಸಭಾ ಭವನದಲ್ಲಿ ಉದ್ದೇಶಿಸಿ ಅವರು ಮಾತನಾಡಿದರು.ತನ್ನ ಬಗ್ಗೆ ಹಾಗೂ ಧರ್ಮಸ್ಥಳ ಕ್ಷೇತ್ರದ

ಉಜಿರೆಯಲ್ಲಿ ನರ್ಸಿಂಗ್ ಕಾಲೇಜು, ಕೃಷಿ ಕಾಲೇಜು ಪ್ರಾರಂಭಿಸಲು ಚಿಂತನೆ : ಡಾ.ವೀರೇಂದ್ರ ಹೆಗ್ಗಡೆ Read More »

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಚಾಲನೆ

ಉಜಿರೆ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಕಾರ್ಯಕ್ರಮಗಳು ಶನಿವಾರ ಶ್ರೀ ಮಂಜುನಾಥೇಶ್ವರ ಪ್ರೌಢಶಾಲಾ ವಠಾರದಲ್ಲಿ ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಶುಭಾರಂಭಗೊಂಡಿತು.ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡಯವರ ಉಪಸ್ಥಿತಿಯಲ್ಲಿ ಶಾಸಕ ಹರೀಶ್ ಪೂಂಜ ವಸ್ತುಪ್ರದರ್ಶನ ಉದ್ಘಾಟಿಸಿ ಶುಭ ಹಾರೈಸಿದರು.ಪುಸ್ತಕ ಮಳಿಗೆಗಳು, ಆರೋಗ್ಯ, ಶಿಕ್ಷಣ, ಕೃಷಿ, ವಾಣಿಜ್ಯ, ಜೀವವಿಮೆ, ಸರ್ಕಾರದ ವಿವಿಧ ಇಲಾಖಾ ಮಳಿಗೆಗಳು, ಅಂಚೆ ಇಲಾಖೆ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸಿರಿ ಗ್ರಾಮೋದ್ಯೋಗ ಸಂಸ್ಥೆ, ಗ್ರಾಮೀಣ ಕರಕುಶಲ ಕೈಗಾರಿಕೆಗಳು, ವಸ್ತç ಮಳಿಗೆಗಳು, ಆಯುರ್ವೇದ

ಧರ್ಮಸ್ಥಳ ಲಕ್ಷದೀಪೋತ್ಸವ : ರಾಜ್ಯಮಟ್ಟದ ವಸ್ತುಪ್ರದರ್ಶನ ಉದ್ಘಾಟನೆಯೊಂದಿಗೆ ಚಾಲನೆ Read More »

ಸಂಸ್ಕೃತಿ ಬೆಳೆಯಬೇಕಾದರೆ ಭಾಷೆ ಬೆಳೆಯಬೇಕು : . ಪುರುಷೋತ್ತಮ ಕೆ ವಿ ಕರಂಗಲ್ಲು

ಸಂಸ್ಕೃತಿ ಬೆಳೆಯಬೇಕಾದರೆ ಭಾಷೆ ಬೆಳೆಯಬೇಕು,ಭಾಷೆ ಬೆಳೆಯಬೇಕಾದರೆ ಸಂಸ್ಕೃತಿ ಬೆಳೆಯಬೇಕು ಎಂದುಸಾಹಿತಿ, ಸಂಶೋಧಕರಾದ ಡಾ. ಪುರುಷೋತ್ತಮ ಕೆ ವಿ ಕರಂಗಲ್ಲು ಹೇಳಿದರು.ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕ,ಸಾಹಿತ್ಯ ಸಮ್ಮೇಳ ಸಂಘಟನಾ ಸಮಿತಿ ಇದರ ಆಶ್ರಯದಲ್ಲಿ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದಲ್ಲಿ ನ.16ರಂದು ನಡೆದ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು.ಆಧುನಿಕ ಕಾಲಘಟ್ಟದಲ್ಲಿ ಕನ್ನಡ ತನ್ನ ಪರಿಶುದ್ಧತೆಯನ್ನು ಕಳೆದುಕೊಳ್ಳುತ್ತಿದೆ.ಕನ್ನಡ ಭಾಷೆಯನ್ನು ಬೆಳೆಸಲು ಶಿಕ್ಷಕರ ಪಾತ್ರ ಮಹತ್ವವಾದುದು.ಕನ್ನಡ ಬಗ್ಗೆ

ಸಂಸ್ಕೃತಿ ಬೆಳೆಯಬೇಕಾದರೆ ಭಾಷೆ ಬೆಳೆಯಬೇಕು : . ಪುರುಷೋತ್ತಮ ಕೆ ವಿ ಕರಂಗಲ್ಲು Read More »

ಇಂದು ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ

ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ನ ಪಂಜ ಹೋಬಳಿ ಘಟಕದ ಆಶ್ರಯದಲ್ಲಿ ಪಂಜ ಹೋಬಳಿ ಕನ್ನಡ ಸಾಹಿತ್ಯ ಸಮ್ಮೇಳನ ಇಂದು (ನ.16 )ರಂದು ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಾಲಯದ ವಠಾರದಲ್ಲಿ ನಡೆಯಲಿದೆ.ಹಿರಿಯ ಸಾಹಿತಿ, ಸಂಶೋಧಕರಾದ ಎ.ಕೆ.ಹಿಮಕರ ಸಮ್ಮೇಳನದ ಅಧ್ಯಕ್ಷತೆ ವಹಿಸಲಿದ್ದಾರೆ.ಬೆಳಿಗ್ಗೆ 9:00ಗೆ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದ ವ್ಯ. ಸಮಿತಿಯ ಮಾಜಿ ಅಧ್ಯಕ್ಷ ಬಿ.ಕೆ. ಬೆಳ್ಯಪ್ಪ ಗೌಡರು ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.ಗುತ್ತಿಗಾರು ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮಿತ್ರ ಮೂಕಮಲೆ ಪುಸ್ತಕ ಪ್ರದರ್ಶನ ಉದ್ಘಾಟನೆ ಮಾಡಲಿದ್ದಾರೆ .ಸುಳ್ಯ

ಇಂದು ವಳಂಬೆಯಲ್ಲಿ ಪಂಜ ಹೋಬಳಿ ಮಟ್ಟದ ಸಾಹಿತ್ಯ ಸಮ್ಮೇಳನ Read More »

ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ

ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿ ಯವರ ಕಚೇರಿ ಸುಳ್ಯ ಕ್ಷೇತ್ರ ಸಂಪನ್ಮೂಲ ಕೇಂದ್ರ ಸುಳ್ಯ ಸಮೂಹ ಸಂಪನ್ಮೂಲ ಕೇಂದ್ರ ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಅರಂತೋಡು ಇದರ ಸಹಯೋಗದೊಂದಿಗೆ ಅರಂತೋಡು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನ.15ರಂದು ಅರಂತೋಡು ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.ಪ್ರತಿಭಾ ಕಾರಂಜಿ ಸಭಾ ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಅರಂತೋಡು ಗ್ರಾಮ ಪಂಚಾಯತ್ ಅಧ್ಯಕ್ಷ ಕೇಶವ ಅಡ್ತಲೆ ವಹಿಸಿದರು.ಕಾರ್ಯಕ್ರಮದಉದ್ಘಾಟನೆ ಯನ್ನು ಕರ್ನಾಟಕ ಸರಕಾರ ಕಾರ್ಮಿಕ

ಅರಂತೋಡು : ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ Read More »

ಸಾಲುಮರದ ತಿಮ್ಮಕ್ಕರಿಗೆ ಅಂತಿಮ ನಮನ ಸಲ್ಲಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ

ಬೆಂಗಳೂರು:ಅಗಲಿದ ಶತಾಯುಷಿ ಸಾಲುಮರದ ತಿಮ್ಮಕ್ಕ ಅವರಿಗೆ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಸದಾನಂದ ಮಾವಜಿ ಅವರು ಬೆಂಗಳೂರಿನಲ್ಲಿ .ನ 15ರಂದು ಅಂತಿಮ ನಮನ ಸಲ್ಲಿಸಿದರು.ಈ ಸಂದರ್ಭದಲ್ಲಿ ಅಕಾಡೆಮಿ ಸದಸ್ಯರಾದ ಪೊಣ್ಣಂಚನ್ ಮೋಹನ್ ಉಪಸ್ಥಿತರಿದ್ದರು.

ಸಾಲುಮರದ ತಿಮ್ಮಕ್ಕರಿಗೆ ಅಂತಿಮ ನಮನ ಸಲ್ಲಿಸಿದ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ Read More »

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕಡಮಕಲ್ ಭೇಟಿ

ದಶಕಗಳ ಬೇಡಿಕೆಯಾದ, ಮಡಿಕೇರಿ – ಗಾಳಿಬೀಡು – ಕಡಮಕಲ್ – ಕುಕ್ಕೇಸುಬ್ರಹ್ಮಣ್ಯ ರಸ್ತೆಯ ಬಗ್ಗೆ ಮತ್ತು ಕಡಮಕಲ್ ನಿವಾಸಿಗಳ ಸಮಸ್ಯೆಗಳಿಗೆ ಸ್ಪಂದಿಸುವ ಹಿನ್ನೆಲೆಯಲ್ಲಿಸಮಾಲೋಚನಾ ಸಭೆಯನ್ನು ಮಡಿಕೇರಿ ಶಾಸಕ ಮಂತರ್ ಗೌಡನ. 14ರಂದು ಸಂಜೆ ಕಡಮಕಲ್ ನಲ್ಲಿ ನಡೆಸಿದರು. ನೂರಾರು ಸಂಖ್ಯೆಯಲ್ಲಿ ಸೇರಿದ ಸ್ಥಳೀಯರು ಮತ್ತುಗುತ್ತಿಗಾರು, ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು ಗ್ರಾಮದ ನಾಯಕರು, ಗ್ರಾಮಸ್ಥರು ಮಡಿಕೇರಿ,ಗಾಳಿಬೀಡು, ಕಡಮಕಲ್ ಕುಕ್ಕೇ ಸುಬ್ರಹ್ಮಣ್ಯ ರಸ್ತೆಯ ಅಗತ್ಯತೆ ಮತ್ತು ಕಾನೂನು ತೋಡಕುಗಳನ್ನು ನಿವಾರಿಸಿ ದಶಕಗಳ ಬೇಡಿಕೆಯನ್ನು ಈಡೇರಿಸುವಂತೆ ಮನವಿ ಸಲ್ಲಿಸಿದರು. ಈ

ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಕಡಮಕಲ್ ಭೇಟಿ Read More »

ಅರಂತೋಡು : ವಾಹನ ಚಾಲಕ ಮಾಲಕ ಸಂಘದ ನೂತನ‌ ಪದಾಧಿಕಾರಿಗಳ ಆಯ್ಕೆ

ಅರಂತೋಡು ವಾಹನ ಮಾಲಕ ಚಾಲಕ ಸಂಘದ ಮಹಾಸಭೆಯು ಆರಂತೋಡು ಗ್ರಾಮ ಪಂಚಾಯತ್‌ನ ಸಭಾಂಗಣದಲ್ಲಿ ಸಂಘದ ಅಧ್ಯಕ್ಷರಾದ ಜನಾರ್ಧನ ಇರ್ಣೆಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ೩ವರ್ಷದ ಅವಧಿಗೆ ಅಧ್ಯಕ್ಷರಾಗಿ ಪ್ರಸನ್ನ ಕಲ್ಲಗದ್ದೆ, ಕಾರ್ಯದರ್ಶಿಯಾಗಿ ಗೋವರ್ಧನ ಇರ್ಣೆ, ಖಜಾಂಜಿಯಾಗಿ ಗೋವರ್ಧನ ಬೊಳ್ಳೂರು ಇವರನ್ನು ಆಯ್ಕೆ ಮಾಡಲಾಯಿತು. ಸಭೆಯಲ್ಲಿ ಸಂಘದ ಸದಸ್ಯರು ಉಪಸ್ಥಿತರಿದ್ದರು.

ಅರಂತೋಡು : ವಾಹನ ಚಾಲಕ ಮಾಲಕ ಸಂಘದ ನೂತನ‌ ಪದಾಧಿಕಾರಿಗಳ ಆಯ್ಕೆ Read More »

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದಎನ್.ಡಿ.ಎ ಒಕ್ಕೂಟ ಬಹುಮತ ಪಡೆದಿರುವುದು ಖುಷಿಯ ವಿಚಾರ : ಭಾಗೀರಥಿ ಮುರುಳ್ಯ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಎನ್.ಡಿ.ಎ ಒಕ್ಕೂಟದ ಅಲೆಗೆ ಕೊಚ್ಚಿಹೊಗಿದ್ದು , ಬಿಜೆಪಿ ನೇತೃತ್ವದ ಎನ್.ಡಿ.ಎ ಪ್ರಚಂಡ ಬಹುಮತವನ್ನು ಪಡೆದು ಅಧಿಕಾರಕ್ಕೇರುತ್ತಿರುವುದು ಖುಷಿಯ ವಿಚಾರ ಎಂದು ಸುಳ್ಯ ವಿಧಾನ ಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ತಿಳಿಸಿದ್ದಾರೆ.ಮಾದ್ಯಮ ಹೇಳಿಕೆಯಲ್ಲಿ ತಿಳಿಸಿದ ಅವರು ಭ್ರಷ್ಟಾಚಾರ ರಹಿತ ,ದೇಶದ ಭದ್ರತೆ, ಸಮಗ್ರ ಅಭಿವೃದ್ಧಿಗಳಿಂದ ಜನಮನ್ನಣೆ ಗಳಿಸಿರುವ ಬಿಜೆಪಿ ದೇಶದ ಮೂಲೆ ಮೂಲೆಯಲ್ಲಿ ಭದ್ರವಾಗಿ ನೆಲೆಯೂರುತ್ತಿದೆ.ರಾಹುಲ್ ಗಾಂಧಿ ನೇತೃತ್ವದ ಕಾಂಗ್ರೆಸ್ ಮತ್ತು ಅದರ ಮಿತ್ರ ಪಕ್ಷಗಳ ಸುಳ್ಳು ಭರವಸೆಗಳನ್ನು ಬಿಹಾರದ

ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದಎನ್.ಡಿ.ಎ ಒಕ್ಕೂಟ ಬಹುಮತ ಪಡೆದಿರುವುದು ಖುಷಿಯ ವಿಚಾರ : ಭಾಗೀರಥಿ ಮುರುಳ್ಯ Read More »

error: Content is protected !!
Scroll to Top