ಪ್ರಚಲಿತ

ಅರಂತೋಡು : ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಅಧಿಕಾರ ಸ್ವೀಕಾರ

ಅರಂತೋಡು ಗ್ರಾಮ ಪಂಚಾಯತಿನ ಆಡಳಿತ ಮಂಡಳಿಯ ಅವಧಿಯು ಫೆ.16ಕ್ಕೆ ಪೂರ್ಣಗೊಂಡ ಹಿನ್ನಲೆಯಲ್ಲಿ ಫೆ.17ಅರಂತೋಡು ಗ್ರಾಮ ಪಂಚಾಯತ್ ನ ಆಡಳಿತ ಅಧಿಕಾರಿಯಾಗಿ ತೋಟಗಾರಿಕಾ ಸಹಾಯ ನಿರ್ದೇಶಕ ಪ್ರಮೋದ್ ಸಿ. ಎಂ. ಅಧಿಕಾರವಹಿಸಿ ಕೊಂಡರು.ಈ ಸಂದರ್ಭದಲ್ಲಿ ನಿಕಟಪೂರ್ವ ಅಧ್ಯಕ್ಷರಾದ ಕೇಶವ ಎ, ಸದಸ್ಯರಾದ ವೆಂಕಟರಮಣ ಪೆತ್ತಾಜೆ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಅರಂತೋಡು : ಗ್ರಾಮ ಪಂಚಾಯತ್ ಆಡಳಿತ ಅಧಿಕಾರಿ ಅಧಿಕಾರ ಸ್ವೀಕಾರ Read More »

ಸುಳ್ಯ: ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅರೋಗ್ಯ ವೃದ್ಧಿಗೆ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ.

ಸುಳ್ಯ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದ್ಯಕ್ಷರೂ, ವಿಧಾನ ಪರಿಷತ್ ಶಾಸಕರಾದ ಶ್ರೀ ಮಂಜುನಾಥ ಭಂಡಾರಿ ಅವರಿಗೆ ಅರೋಗ್ಯ ಶೀಘ್ರ ಚೇತರಿಕೆಗಾಗಿ ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದಲ್ಲಿ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲಾಯಿತು ಸಾರ್ವಜನಿಕ ಬದುಕಿನಲ್ಲಿ ನಿಸ್ವಾರ್ಥ ಸೇವೆಯ ಮೂಲಕ ಜನಮನ ಗೆದ್ದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯಾಧ್ಯಕ್ಷರೂ, ವಿಧಾನ ಪರಿಷತ್ ಶಾಸಕರೂ ಹಾಗೂ ಶಿಕ್ಷಣ ಕ್ಷೇತ್ರಕ್ಕೆ ಮಹತ್ವದ ಕೊಡುಗೆ ನೀಡಿರುವ ಶ್ರೀ. ಮಂಜುನಾಥ ಭಂಡಾರಿ ಅವರು ಶೀಘ್ರವೇ ಸಂಪೂರ್ಣ ಚೇತರಿಸಿಕೊಂಡು, ಹಿಂದಿನಂತೆ

ಸುಳ್ಯ: ಕೆಪಿಸಿಸಿ ಕಾರ್ಯಧ್ಯಕ್ಷರು, ವಿಧಾನ ಪರಿಷತ್ ಶಾಸಕ ಮಂಜುನಾಥ್ ಭಂಡಾರಿಯವರ ಅರೋಗ್ಯ ವೃದ್ಧಿಗೆ ಸುಳ್ಯ ಕಾಂಗ್ರೆಸ್ ಮುಖಂಡರಿಂದ ಚೆನ್ನಕೇಶವ ದೇವಸ್ಥಾನದಲ್ಲಿ ಪ್ರಾರ್ಥನೆ. Read More »

ಮರ್ಕಂಜ : ತೋಟಕ್ಕೆ ಕಾಡಾನೆ ದಾಳಿ ಅಪಾರ ಪ್ರಮಾಣದ ಕೃಷಿ ನಾಶ

ಸುಳ್ಯ ತಾಲೂಕು ಮರ್ಕಂಜ ಗ್ರಾಮದ ಮಂಜುನಾಥ ರೈ ಅವರ ತೋಟಕ್ಕೆ ಫೆ.16ರಂದು ರಾತ್ರಿ ಕಾಡಾನೆ ದಾಳಿ ಮಾಡಿ ಅಪಾರ ಕೃಷಿ ನಷ್ಟ ಮಾಡಿದೆ. ಇದರಿಂದ ಅವರಿಗೆ ಅಪಾರ ನಷ್ಟ ಉಂಟಾಗಿದೆ.ಅರಣ್ಯ ಇಲಾಖೆಯ ಅಧಿಕಾರಿಗಳು ಸ್ಥಳ ತನಿಖೆ ಮಾಡಿ ಅವರಿಗೆ ಮುಂದಿನ ಕ್ರಮದ ಬಗ್ಗೆ ಮಾಹಿತಿ ನೀಡಬೇಕೆಂದು ಒತ್ತಾಯಿಸಲಾಗಿದೆ.

ಮರ್ಕಂಜ : ತೋಟಕ್ಕೆ ಕಾಡಾನೆ ದಾಳಿ ಅಪಾರ ಪ್ರಮಾಣದ ಕೃಷಿ ನಾಶ Read More »

ಪೆರ್ನಾಜೆ : ನಿರಂತರ ಕಾಡಾನೆ ದಾಳಿ!

ಫೆ.17ರ ಮುಂಜಾನೆ ಜಾಲ್ಸೂರು ಸಮೀಪದ ಪೆರ್ನಾಜೆಗೆ ಕಾಡಾನೆ ಇಲ್ಲಿಯ ಕುಮಾರ್ ಪೆರ್ನಾಜೆ ಯವರ ತೋಟಕ್ಕೆ ನಗ್ಗಿ 10ಕ್ಕೂ ಮಿಕ್ಕಿ ಬಾಳೆ ಗಿಡ 3 ಅಡಿಕೆ ಗಿಡಗಳು ದ್ವಂಸ ಮಾಡಿವೆ.ಗುಡ್ಡಡ್ಕ ಆನೆಗುಂಡಿ ಕಡೆ ಬಂದಿರುವ ಆನೆ ರಸ್ತೆಯಲ್ಲಿ ಹಿಂತಿರುಗಿದೆ. ಮತ್ತೆ ಪೆರ್ನಾಜೆಗೆ ಸತತ ನಾಲ್ಕು ದಿನಗಳಿಂದ ಬರುತ್ತಿರುವ ಆನೆ. ಸೋಲಾರ್ ಬೇಲಿಯೂ ಅಳವಡಿಸಿದ್ದರು ನಿಷ್ಪ್ರಯೋಜಕವಾಗಿದೆ ಇದನ್ನು ಹಿಡಿದು ದಟ್ಟ ಅರಣ್ಯದಲ್ಲಿ ಬಿಡುವುದು ಮಾತ್ರ ಪರಿಹಾರ ಇಲ್ಲವಾದಲ್ಲಿ ಮತ್ತೆ ಮತ್ತೆ ರೈತರ ತೋಟಕ್ಕೆ ಆನೆ ದಾಳಿ ಮಾಡುತ್ತ ಇರುತ್ತವೆ. ಅಲ್ಲದೆ

ಪೆರ್ನಾಜೆ : ನಿರಂತರ ಕಾಡಾನೆ ದಾಳಿ! Read More »

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ‌ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಸಮಾರಂಭ

ಸುಳ್ಯ ಬ್ಲಾಕ್ ಕಾಂಗ್ರೆಸ್‌ನ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಕಾರ್ಯಕ್ರಮ ಫೆ.16ರಂದು ಸುಳ್ಯದ ಲಯನ್ಸ್‌ ಸೇವಾಸದನದಲ್ಲಿ ನಡೆಯಿತು.ಬ್ಲಾಕ್ ಕಾಂಗ್ರೆಸ್ ನಿರ್ಗಮನಾಧ್ಯಕ್ಷ ಪಿ.ಸಿ.ಜಯರಾಮರನ್ನು ಸನ್ಮಾನಿಸಿ ಗೌರವಿಸಲಾಯಿತು. ಗ್ಯಾರಂಟಿ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷ ಭರತ್ ಮುಂಡೋಡಿರಾಜ್ಯ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಟಿ.ಎಂ.ಶಹೀದ್, ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಸದಾನಂದ ಮಾವಜಿ, ಕಾಂಗ್ರೆಸ್ ವಿಧಾನ ಸಭಾ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿ ಜಿ.ಕೃಷ್ಣಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಸುಳ್ಯ ಬ್ಲಾಕ್ ಉಸ್ತುವಾರಿ ಎಂ.ಎಸ್.ಮಹಮ್ಮದ್,ಗ್ರಾಮಾಂತರ

ಸುಳ್ಯ ಬ್ಲಾಕ್ ಕಾಂಗ್ರೆಸ್ ನೂತನ‌ ಅಧ್ಯಕ್ಷ ರಾಧಾಕೃಷ್ಣ ಬೊಳ್ಳೂರು ಪದಗ್ರಹಣ ಸಮಾರಂಭ Read More »

ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ಮಹಾಶಿವರಾತ್ರಿ ಆಚರಣೆ

ಅಜ್ಜಾವರ ಚೈತನ್ಯ ಸೇವಾಶ್ರಮದಲ್ಲಿ ಶಿವರಾತ್ರಿ ಪ್ರಯಕ್ತ ಶಿವಪೂಜೆ ಭಜನಾ ಸತ್ಸಂಗ ಹಾಗೂ ಆಶ್ರಮದ ಸ್ವಾಮೀಜಿ ಶ್ರೀ ಯೋಗೇಶ್ವರಾನಂದ ಸರಸ್ವತಿಯವರ 234ನೇಕೃತಿಮಾಲೆ ಕಾಯಕದಿಂದಲೇ ಕೈಲಾಸ ಬಿಡುಗಡೆ ಸಮಾರಂಭ ನಡೆಯಿತು.ಶ್ರೀ ಶ್ರೀ ಯೋಗೇಶ್ವರಾನಂದ ಸರಸ್ವತಿ ಸ್ವಾಮೀಜಿಯವರು ಅಧ್ಯಕ್ಷತೆ ವಹಿಸಿದ್ದರು.ಕರ್ಲಪ್ಪಾಡಿ ಶಾಸ್ತಾವೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಧನಂಜಯ ಅಡ್ಪಂಗಾಯ ಕೃತಿ ಬಿಡುಗಡೆಗೊಳಿಸಿದರು.ಹಿರಿಯ ವೈದ್ಯರಾದ ಡಾ.ಸಾಯಿಗೀತಾ,ಮಂಗಳೂರು ಎ.ಜೆ ಇಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಡಾ.ಅನಿಲ್ ಬಿ.ವಿ. ಹಿರಿಯರಾದ ಮುದ್ದಪ್ಪ ಗೌಡ ಕರ್ಲಪ್ಪಾಡಿ,ಅಡೂರು ಮಹಾಲಿಂಗೇಶ್ವರ ಭಜನಾ ಮಂಡಳಿ ಅಧ್ಯಕ್ಷ ವೇಣುಗೊಪಾಲ,ಮುಖ್ಯ ಅತಿಥಿಗಳಾಗಿ ಭಾಗವಹಿಸಿದರು‌.ಶಿಕ್ಷಕಿ ಆಶ್ರಮದ

ಅಜ್ಜಾವರ : ಚೈತನ್ಯ ಸೇವಾಶ್ರಮದಲ್ಲಿ ಮಹಾಶಿವರಾತ್ರಿ ಆಚರಣೆ Read More »

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವರ ಉತ್ಸವ ಬಲಿ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಇಂದು (ಫೆ. 15) ಪೂರ್ವ ಸಂಪ್ರದಾಯದಂತೆ ಬ್ರಹ್ಮಶ್ರೀ ಆರೋತ್ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿಮಹಾಶಿವರಾತ್ರಿ ಉತ್ಸವ ನಡೆಯುತ್ತಿದೆ.ಸಂಜೆ ಸೀಮೆಯ ಭಜನಾ ತಂಡಗಳಿಂದ ಭಜನೆ ಹಾಗೂ ಕುಣಿತ ಭಜನೆ, ರಾಶಿಪೂಜೆ (10 ರುದ್ರಾಭಿಷೇಕ) ರಂಗಪೂಜೆ ನಡೆಯಿತು.ಇದೀಗ ಉತ್ಸವ ಬಲಿ ನಡೆಯುತ್ತಿದೆ.ಫೆ. 16 ರಂದು ಗಣಪತಿ ಹೋಮ, ದರ್ಶನಬಲಿ, ಬಟ್ಟಲು ಕಾಣಿಕೆ ನಡೆಯಲಿರುವುದು ಮತ್ತು ತುಲಾಭಾರ ಸೇವೆ ನಡೆಯುಲಿದೆ.

ಸುಳ್ಯ ಸೀಮೆ ತೊಡಿಕಾನ ಮಲ್ಲಿಕಾರ್ಜುನ ದೇವಳದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ದೇವರ ಉತ್ಸವ ಬಲಿ Read More »

ಭಾರತ-ಪಾಕ್ ಟಿ20 ವಿಶ್ವಕಪ್: ಭಾರತಕ್ಕೆ ಭರ್ಜರಿ ಗೆಲುವು,ಪಾಕಿಸ್ಥಾನ ಆಲ್ ಔಟ್

2026ರ ಟಿ20 ವಿಶ್ವಕಪ್‌ನ ಗುಂಪು ಹಂತದ ಮಹತ್ವದ ಪಂದ್ಯದಲ್ಲಿ ಭಾರತ ತಂಡವು ಪಾಕಿಸ್ತಾನ ತಂಡವನ್ನು 20 ರನ್‌ಗಳಿಂದ ಸೋಲಿಸಿದೆ. ಕೊಲಂಬೊದ ಆ‌ರ್.ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಭಾರತ 176 ರನ್‌ಗಳ ಗುರಿ ನೀಡಿತ್ತು. ನಂತರ ಬ್ಯಾಟಿಂಗ್‌ ಮಾಡಿದ ಪಾಕಿಸ್ತಾನ 18ನೇ ಓವರ್‌ಗಳಲ್ಲಿ 114 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ಭಾರತ 61 ರನ್ ಗಳ ಅಂತರದಿಂದ ಭರ್ಜರಿ ಜಯ ಗಳಿಸಿತು.

ಭಾರತ-ಪಾಕ್ ಟಿ20 ವಿಶ್ವಕಪ್: ಭಾರತಕ್ಕೆ ಭರ್ಜರಿ ಗೆಲುವು,ಪಾಕಿಸ್ಥಾನ ಆಲ್ ಔಟ್ Read More »

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆ ಮೂರ್ನಾಡಿನಲ್ಲಿ ಶುಭಾರಂಭ

ಸುಳ್ಯ ಮೂಲದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆಯನ್ನು ಮೂರ್ನಾಡಿನಲ್ಲಿ ಪ್ರಾರಂಭಿಸಲಾಯಿತು. ಈ ಶಾಖೆಯ ಉದ್ಘಾಟನೆಯನ್ನು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.ಸದ್ರಿ ಬ್ಯಾಂಕಿನ 24ನೇ ಶಾಖೆ ಇದಾಗಿದ್ದು, ಮೂರ್ನಾಡು ಭಾಗದಲ್ಲಿ ಇದು ಮತ್ತಷ್ಟು ಯಶಸ್ಸು ಕಾಣಲಿ ಎಂದು ಉದ್ಘಾಟನೆ ಬಳಿಕ ಮಾನ್ಯ ಶಾಸಕರು ಶುಭ ಕೋರಿದರು. ಮುಂದುವರೆದು ಮಾತನಾಡುತ್ತಾ, ಗ್ರಾಮೀಣ ಭಾಗದ ಜನರಿಗೆ ಅದರಲ್ಲೂ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ನಿಯಮಿತ ಇದರ ನೂತನ ಶಾಖೆ ಮೂರ್ನಾಡಿನಲ್ಲಿ ಶುಭಾರಂಭ Read More »

ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ

ಪಂಜ ಸೀಮೆ ದೇವಾಲಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದಲ್ಲಿಮಹಾಶಿವರಾತ್ರಿ ಪ್ರಯುಕ್ತ ಫೆ. 15 ರಂದು ಮುಂಜಾನೆ ಭಜನಾ ಕಾರ್ಯಕ್ರಮ ಅರಂಭಗೊಂಡಿತು.ಅಲ್ಲದೆ ವಿವಿಧ ವೈದಿಕ ಕಾರ್ಯಕ್ರಮಗಳು ನಡೆಯುತ್ತಿವೆ.ಭಜನಾ ಸಂಕೀರ್ತನೆ ಕಾರ್ಯಕ್ರಮವನ್ನು ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂರ್ ರವರು ದೀಪ ಪ್ರಜ್ವಲನ ಮಾಡುವ ಮೂಲಕ ಚಾಲನೆ ನೀಡಿದರು.ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಣ್ಣ ನಾಯ್ಕ ಗರಡಿ ಉಪಸ್ಥಿತರಿದ್ದರು.ಪಂಚಶ್ರೀ ಭಜನಾ ಮಂಡಳಿ ಪಂಬೆತ್ತಾಡಿ,ಶ್ರೀ ಶಾರದಾಂಬಾ ಭಜನಾ ಮಂಡಳಿ ಪಂಜ, ಶ್ರೀ ಪಂಚಲಿಂಗೇಶ್ವರ ಮಕ್ಕಳ ಭಜನಾ

ಪಂಜ ಸೀಮೆ ಪಂಜ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಳದಲ್ಲಿ ಭಜನಾ ಸತ್ಸಂಗ ಕಾರ್ಯಕ್ರಮಕ್ಕೆ ಚಾಲನೆ Read More »

error: Content is protected !!
Scroll to Top