ನಮ್ಮ ಶ್ರದ್ಧಾ ಕೇಂದ್ರಗಳು ಜೀರ್ಣೋದ್ಧಾರಗೊಂಡಾಗ ಜೀವನದಲ್ಲಿ ಸುಖ ಶಾಂತಿ ನೆಲೆಸುತ್ತದೆ : ಭಾಗೀರಥಿ ಮುರುಳ್ಯ
ನಮ್ಮ ಶ್ರದ್ದಾ ಕೇಂದ್ರಗಳಾದ ಮಂದಿರಗಳು, ದೈವಸ್ಥಾನಗಳನ್ನು ಕಾಲ ಕಾಲಕ್ಕೆ ಜೀರ್ಣೋದ್ದಾರಗೊಳಿಸಿದಾಗ ನಮ್ಮ ಜೀವನದಲ್ಲಿ ಸುಖ ಶಾಂತಿಯಿಂದ ಇರಲು ಸಾಧ್ಯ” ಎಂದು ಶಾಸಕಿ ಭಾಗೀರಥಿ ಮುರುಳ್ಯ ಅಭಿಪ್ರಾಯಪಟ್ಟಿದ್ದಾರೆ.ಅವರು ಸುಳ್ಯ ಬೂಡುವಿನ ಸತ್ಯಪದಿನಾಜಿ, ಕುಪ್ಪೆ ಪಂಜುರ್ಜಿ ಮತ್ತು ಗುಳಿಗ ಸಾನಿಧ್ಯ ಪ್ರತಿಷ್ಠಾಪನೆ ಮತ್ತು ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಶಾಸಕರು ಈ ಭಾಗದ ಜನರ ಕೋರಿಕೆಯಂತೆ ಇಲ್ಲಿಗೆ ನೀರಿನ ವ್ಯವಸ್ಥೆಗಾಗಿ ಬೋರ್‌ವೆಲ್ ಕೊರೆಸಲು ಅನುದಾನ ನೀಡುವುದಾಗಿ ಭರವಸೆ ನೀಡಿದರು.ಕರ್ಲಪ್ಪಾಡಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ […]










