ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಆದೇಶ
ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಪಿ.ಕೆ ಅಭಿಲಾಷ್ ಅವರನ್ನು ನೇಮಕಗೊಳಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಫೆ.19ರಂದು ಆದೇಶಿಸಿದ್ದಾರೆ.ಕಾಂಗ್ರೆಸ್ ಪಕ್ಷದ ಸಕ್ರಿಯ ಕಾರ್ಯಕರ್ತರಾಗಿರುವ ಪಿ.ಕೆ ಅಭಿಲಾಷ್ ಅವರು ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಯಶಸ್ವಿಯಾಗಿ ನಿಭಾಯಿಸಿದ್ದರು. ನೂಜಿಬಾಳ್ತಿಲ ಕಾಂಗ್ರೆಸ್ ಬೂತ್ ಸಮಿತಿ ಅಧ್ಯಕ್ಷರಾಗಿ, ನೂಜಿಬಾಳ್ತಿಲ ಗ್ರಾಮ ಸಮಿತಿ ಅಧ್ಯಕ್ಷರಾಗಿ, ಉಸ್ತುವಾರಿಯಾಗಿ, ಕಡಬ ಬ್ಲಾಕ್ ಯುವ ಕಾಂಗ್ರೆಸ್ ಚುನಾಯಿತ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ವಿವಿಧ ಚುಣಾವಣೆ ಸಂದರ್ಭಗಳಲ್ಲಿ ಬಿಳಿನೆಲೆ ಗ್ರಾಮದ ಉಸ್ತುವಾರಿಯಾಗಿ ಕಾರ್ಯ ನಿರ್ವಹಿಸಿರುವ ಪಿ.ಕೆ ಅಭಿಲಾಷ್ ಅವರು ಸಾಮಾಜಿಕ, […]










