ಪ್ರಚಲಿತ

ಮುಸ್ಲಿಂ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರ

ಉತ್ತರಪ್ರದೇಶದ ಬಸ್ತಿಯ ಮುಸ್ಲಿಂ ವ್ಯಕ್ತಿಯೊಬ್ಬರು ಹಿಂದೂ ಧರ್ಮಕ್ಕೆ ಮತಾಂತರವಾಗಿದ್ದಾರೆ.ತನ್ನ ಹಿಂದು ಪ್ರಿಯತಮೆಯನ್ನು ಮದುವೆಯಾಗಲು ವರನಾದ ಸದ್ದಾಂ ತನ್ನ ಹೆಸರನ್ನು ಶಿವಶಂಕರ್ ಸೋನಿ ಎಂದು ಬದಲಿಸಿಕೊಂಡು, 10 ವರ್ಷಗಳ ಪ್ರಿಯತಮೆ ಅನು ಸೋನಿಯನ್ನು ಹಿಂದೂ ಸಂಪ್ರದಾಯಗಳಂತೆ ವಿವಾಹವಾಗಿದ್ದಾನೆ. ಇದಕ್ಕೂ 3 ದಿನಗಳ ಮುನ್ನ ಮಹಿಳೆಯು ಸದ್ದಾಂ ಮತ್ತು ಆತನ ಕುಟುಂಬದ ವಿರುದ್ಧ ಮದುವೆ ನೆಪದಲ್ಲಿ ಅತ್ಯಾಚಾರ, ಗರ್ಭಪಾತಕ್ಕೆ ಒತ್ತಾಯ, ಕೊಲೆ ಬೆದರಿಕೆ ಪ್ರಕರಣ ದಾಖಲಿಸಿದ್ದಳು. ಆದಾಗ್ಯೂ ಈ ಜೋಡಿಯು ಪರಸ್ಪರ ಒಪ್ಪಿಗೆಯೊಂದಿಗೆ ಭಾನುವಾರ ವಿವಾಹವಾಗಿದ್ದು, ಮಹಿಳೆ ಕೇಸ್ ಹಿಂಪಡೆದಿದ್ದಾಳೆ […]

ಮುಸ್ಲಿಂ ವ್ಯಕ್ತಿ ಹಿಂದು ಧರ್ಮಕ್ಕೆ ಮತಾಂತರ Read More »

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ : ರಮಾನಾಥ ರೈ

ಶಾಲೆಗಳಿಗೆ ಸರಕಾರವೇ ಅನುದಾನ ನೀಡಲು ಸಾಧ್ಯವಾಗದ ಸಂದರ್ಭದಲ್ಲಿ ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿ ನೀಡಿದ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಹೇಳಿದ್ದಾರೆ.ಅವರು ಸುಳ್ಯದ ಮಹತ್ಮಾಗಾಂಧಿ ಮಲ್ನಾಡು ವಿದ್ಯಾಸಂಸ್ಥೆಗೆ ಸುಳ್ಯದ ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯು ತನ್ನ ಬೆಳ್ಳಿಹಬ್ಬದ ಸವಿನೆನಪಿಗಾಗಿ 28 ಲಕ್ಷ ರೂ. ವೆಚ್ಚದಲ್ಲಿ ಕೊಡುಗೆಯಾಗಿ ನೀಡಿದ 3 ತರಗತಿ ಕೊಠಡಿಗಳ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡಿದರು.ಶ್ರೀ ವೆಂಕಟರಮಣ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಅಧ್ಯಕ್ಷರಾದ

ಸುಳ್ಯದ ಶ್ರೀ ವೆಂಕಟರಮಣ ಸೊಸೈಟಿಯ ಕೊಡುಗೆ ಇತರ ಸಹಕಾರ ಸಂಘಗಳಿಗೆ ಮಾದರಿಯಾಗಿದೆ : ರಮಾನಾಥ ರೈ Read More »

ಜ.24 ಮತ್ತು 25ರಂದು ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ : ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ ಹೇಳಿಕೆ

ಸುಳ್ಯ ತಾಲೂಕಿನ ದೇವಚಳ್ಳ ಗ್ರಾಮದ ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನೂರು ವರ್ಷ ಪೂರೈಸಿದ್ದು ಖಾಸಗಿ ಶಾಲೆಗೂ ಮೀರಿಸಿದ ಅಭಿವೃದ್ದಿ ಕಾಮಾಗಾರಿಗಳು ನಡೆದಿದ್ದು ಈ ಕಾಮಗಾರಿಗಳ ಉದ್ಘಾಟನೆ ಮತ್ತ ಶತಮಾನೋತ್ಸವ ಕಾರ್ಯಕ್ರಮದ ಉದ್ಘಾಟನೆ ಹಿರಿಯ. ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಜ.24 ಮತ್ತು 25 ರಂದು ನಡೆಯಲಿದೆ ಎಂದು ಶಾಲಾ ಶತಮಾನೋತ್ಸವ ಸಮಿತಿ ಅಧ್ಯಕ್ಷ ಎವಿ ತೀರ್ಥರಾಮ ಹೇಳಿದ್ದಾರೆ ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.ಜ.24 ರಂದು ಶತಮಾನೋತ್ಸವ ಕಾರ್ಯಕ್ರಮದ ಅಂಗವಾಗಿ 9.30

ಜ.24 ಮತ್ತು 25ರಂದು ಎಲಿಮಲೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಕಾರ್ಯಕ್ರಮ : ಶತಮಾನೋತ್ಸವ ಸಮಿತಿ ಅಧ್ಯಕ್ಷ ಎ.ವಿ ತೀರ್ಥರಾಮ ಹೇಳಿಕೆ Read More »

ಪೆರುವಾಜೆ : ವೈಭವದಿಂದ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ,ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ

ಸುಳ್ಯ ತಾಲೂಕಿನ ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯದ ಬ್ರಹ್ಮರಥೋತ್ಸವವು ಜ.19 ರಂದು ರಾತ್ರಿ ವೈಭವದಿಂದ ನಡೆಯಿತು.ಕ್ಷೇತ್ರದ ತಂತ್ರಿ ನಾಗೇಶ್ ತಂತ್ರಿ ಅವರ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು. ರಾತ್ರಿ ಶ್ರೀ ದೇವರ ಬಲಿ ಹೊರಟು ಉತ್ಸವ ನಡೆದು ವಸಂತಕಟ್ಟೆ ಪೂಜೆ ನೆರವೇರಿತು.ವ್ಯಾಘ್ರಚಾಮುಂಡಿ ದೈವ(ಪಿಲಿಭೂತ)ದ ಭಂಡಾರ ಆಗಮಿಸಿತ್ತು. ಅಲ್ಲಿಂದ ದೈವದ ಭಂಡಾರ ಸಹಿತವಾಗಿ ದೇವರ ಬಲಿ ದೇವಾಲಯದ ರಥ ಬೀದಿಯ ಬಳಿಯಲ್ಲಿನ ಅಲಂಕೃತ ಬ್ರಹ್ಮರಥದ ಬಳಿ ಆಗಮಿಸಿತ್ತು. ಈ ವೇಳೆ ದೈವ-ದೇವರ

ಪೆರುವಾಜೆ : ವೈಭವದಿಂದ ನಡೆದ ಶ್ರೀ ಜಲದುರ್ಗಾದೇವಿಯ ಬ್ರಹ್ಮರಥೋತ್ಸವ,ರಥೋತ್ಸವದಲ್ಲಿ ಸಾವಿರಾರು ಮಂದಿ ಭಾಗಿ Read More »

ಪೈಕ: ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ

ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪೈಕ ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ದಲ್ಲಿ (ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ) ಜ. 19ರಂದು ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವವು ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ ನೇತೃತ್ವದಲ್ಲಿ ನಡೆಯಿತು.ಜ. 18 ಶನಿವಾರದಂದು ಸಂಜೆ ತಂತ್ರಿಗಳನ್ನು ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಮಣಿಯಾನ ಸುಬ್ಬಣ್ಣ ಗೌಡ, ಕ್ಷೇತ್ರದ

ಪೈಕ: ಶ್ರದ್ದಾ ಭಕ್ತಿಯಿಂದ ನಡೆದ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ Read More »

ತೊಡಿಕಾನ : ಚಾಕಟೆಡಿ ನೇಮೋತ್ಸವಕ್ಕೆ ಗೊನೆಮೂಹೂರ್ತ

ಸುಳ್ಯ ಸೀಮೆ ತೊಡಿಕಾನ ಶ್ರೀ ಮಲ್ಲಿಕಾರ್ಜುಜ ದೇವಾಲಯಕ್ಕೆ ಸಂಬಂಧಪಟ್ಟ ಚಾಕಟೆಡಿ ನೇಮೋತ್ಸವಕ್ಕೆ ಗೊನೆ ಮುಹೂರ್ತ ನಡೆಯಿತು.ಚಾಕಟೆಡಿ ನೇಮೋತ್ಸವ ಜ.27 ಮತ್ತು ಪಾಷಾಣಮೂರ್ತಿ ಅಮ್ಮನವರ ಕೋಲ ಜ.28ರಂದು ನಡೆಯಲಿದೆ.

ತೊಡಿಕಾನ : ಚಾಕಟೆಡಿ ನೇಮೋತ್ಸವಕ್ಕೆ ಗೊನೆಮೂಹೂರ್ತ Read More »

ಜ.20ಕ್ಕೆ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ

ಶ್ರೀ ವೆಂಕಟರಮಣ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ನಿ., ಸುಳ್ಯ ಇದು ಬೆಳ್ಳಿ ಹಬ್ಬ ಸಂಭ್ರಮದಲ್ಲಿದ್ದು ಸಂಸ್ಥೆಯ ಬೆಳ್ಳಿಹಬ್ಬ ಆಚರಣೆಯ ಸವಿನೆನಪಿಗಾಗಿ ಸಂಸ್ಥೆಯಸಹಸಂಸ್ಥೆ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ ಜ. 20 ಸೋಮವಾರಪೂರ್ವಾಹ್ನ ಗಂಟೆ 10.30ಕ್ಕೆ ಎಂ.ಜಿ.ಎಂ. ವಿದ್ಯಾಸಂಸ್ಥೆಗಳ ವಠಾರ, ಉಬರಡ್ಕದ ಕೊಡಿಯಾಲಬೈಲಿನಲ್ಲಿ ನಡೆಯಲಿದೆ ಎಂದು ಶ್ರೀ ವೆಂಕಟ್ರಮಣ ಕ್ರೆಡಿಟ್ ಅಪರೇಟಿವ್ ಸೊಸೈಟಿ ಅಧ್ಯಕ್ಷ ಪಿ.ಸಿ ಜಯರಾಮ್ ತಿಳಿಸಿದ್ದಾರೆ.ಅವರು ಸೊಸೈಟಿ ಸಭಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ನೂತನೂತನ ಕೊಠಡಿಯನ್ನು ಶಾಸಕಿ ಭಾಗೀರಥಿ ಮುರುಳ್ಯ

ಜ.20ಕ್ಕೆ ಮಹಾತ್ಮಾ ಗಾಂಧಿ ಮಲ್ನಾಡ್ ವಿದ್ಯಾಸಂಸ್ಥೆಗೆ ಶ್ರೀ ವೆಂಕಟ್ರಮಣ ಕ್ರೆಡಿಟ್ ಕೋ ಅಪರೇಟಿವ್ ಸೊಸೈಟಿ ಕೊಡುಗೆ ನೀಡಿದ ಶಾಲಾ ಕೊಠಡಿಗಳ ಉದ್ಘಾಟನಾ ಸಮಾರಂಭ Read More »

ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳು ಮುಚ್ಚಲಿವೆಯಾ ?

ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳನ್ನು ಮುಚ್ಚಲು ರಾಜ್ಯ ಸರ್ಕಾರ ಮುಂದಾಗಿದೆ. ಅದಕ್ಕಾಗಿ ಸಮಿತಿ ರಚನೆ ಮಾಡಿ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು ಭಾರೀ ಕಳವಳಕ್ಕೆ ಕಾರಣವಾಗಿದೆ. 14 ಜನರಿರುವ ಸಮಿತಿ ಇದಾಗಿದೆ. ಪ್ರತಿ ತಾಲೂಕಿನ ಶಾಸಕರು ಸಮಿತಿಯ ಅಧ್ಯಕ್ಷರಾಗಿ ಇರುತ್ತಾರೆ. ಈ ಹಿಂದೆ ಬಿಜೆಪಿ ಸರ್ಕಾರ ಕಡಿಮೆ ಮಕ್ಕಳಿರುವ 2-3 ಶಾಲೆಗಳನ್ನು ಸಂಯೋಜಿಸಿ ನಡೆಸಲು ನಿರ್ಧಾರ ಕೈಗೊಂಡಿತ್ತು. ಈ ನಿರ್ಧಾರಕ್ಕೆ ಅಂದು ವಿಪಕ್ಷದಲ್ಲಿದ್ದ ಕಾಂಗ್ರೆಸ್ ಭಾರೀ ವಿರೂಧ ವ್ಯಕ್ತಪಡಿಸಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಅದೇ ನಿರ್ಧಾರ ತೆಗೆದುಕೊಂಡಿದೆ

ಕಡಿಮೆ ಮಕ್ಕಳಿರುವ ಸರ್ಕಾರಿ ಶಾಲೆಗಳು ಮುಚ್ಚಲಿವೆಯಾ ? Read More »

ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ

ಶ್ರೀ ಶಂಖಚೂಡ ಕ್ಷೇತ್ರ ಪುರಾಳಬದಿ ಮಣಿಯಾನ ಕ್ಷೇತ್ರ ಕಂಚು ಕಲ್ಲಿಗೆ ತೆಂಗಿನಕಾಯಿ ಒಡೆಯುವ ಸ್ಥಳ ಎಂದೇ ಜನಜನಿತ ಈ ಕ್ಷೇತ್ರದಲ್ಲಿ ಜ.19 ರ ದಿವಾ ಘಂಟೆ 9-10ರಿಂದ 9-56ರರೊಳಗಿನ ಕುಂಭ ಲಗ್ನ ಸುಮುಹೂರ್ತದಲ್ಲಿ ಶ್ರೀ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ ನಡೆಯಲಿದೆ.ಬ್ರಹ್ಮಶ್ರೀ ವೇದಮೂರ್ತಿ ಶ್ರೀ ನೀಲೇಶ್ವರ ಪದ್ಮನಾಭ ತಂತ್ರಿಗಳು ಆಶ್ವತ್ ಇವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ.ಜ. 18 ರ ಸಂಜೆ ತಂತ್ರಿಗಳ ಆಗಮನ ವಾಗಲಿದೆ. ಅಂದು

ನಾಳೆ ಮಣಿಯಾನ ಶಂಖಚೂಡ ದೇವರು ಮತ್ತು ಪರಿವಾರ ಸಾನಿಧ್ಯಗಳಿಗೆ ನೂತನವಾಗಿ ನಿರ್ಮಿಸಿರುವ ಕಟ್ಟೆಗಳಲ್ಲಿ ನವೀಕರಣ ಪುನ‌ರ್ ಪ್ರತಿಷ್ಠಾ ಕಲಶೋತ್ಸವ Read More »

ಜ.31 ರಿಂದ ಫೆ.2 ರವರೆಗೆ ಪೇರಡ್ಕ ಉರೂಸ್ ,ಫೆ.2 ರಂದು ಸರ್ವಧರ್ಮ ಸಮ್ಮೇಳನ

ಇತಿಹಾಸ ಪ್ರಸಿದ್ದ ಸಂಪಾಜೆ ಗ್ರಾಮದ ಗೂನಡ್ಕ ಪೇರಡ್ಕದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಪೇರಡ್ಕದ ವಲಿಯುಲ್ಲಾಹಿ ದರ್ಗಾಶರೀಫ್ ಪೇರಡ್ಕದಲ್ಲಿ ಜ.31 ರಿಂದ ಫೆ.2 ರ ವರೆಗೆ ಉರೂಸ್ ಸಮಾರಂಭ ಹಾಗೂ ಫೆ.2 ರಂದು ಸರ್ವಧರ್ಮ ಸಮ್ಮೇಳನ ನಡೆಯಲಿದೆ ಎಂದು ಮಸೀದಿ ಅಧ್ಯಕ್ಷ ಟಿ.ಎಂ. ಶಹೀದ್ ಹಾಗೂ MRDA ಅಧ್ಯಕ್ಷ ಜಿ.ಕೆ ಹಮೀದ್ ತಿಳಿಸಿದ್ದಾರೆ.ಅವರು ಸುಳ್ಯದ ಪ್ರೆಸ್ ಕ್ಲಬ್ ನಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಜ.31 ರಂದು ಶುಕ್ರವಾರ ಜುಮ್ಮಾ ನಮಾಜಿನ ಬಳಿಕ ಧ್ವಜಾರೋಹಣ, ಮುಖಾಂ ಅಲಂಕಾರ ಮತ್ತು ಕೂಟು ಪ್ರಾರ್ಥನೆ

ಜ.31 ರಿಂದ ಫೆ.2 ರವರೆಗೆ ಪೇರಡ್ಕ ಉರೂಸ್ ,ಫೆ.2 ರಂದು ಸರ್ವಧರ್ಮ ಸಮ್ಮೇಳನ Read More »

error: Content is protected !!
Scroll to Top