ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ಕನ್ನಡಿಗರ ಮೇಲಿದೆ
ಸುಳ್ಯ : ಕನ್ನಡ ಸಾಹಿತ್ಯ ಸಂಸ್ಕ್ರತಿ ಮತ್ತು ಪರಂಪರೆಯನ್ನು ಉಳಿಸಿ ಬೆಳೆಸಿ ಮುಂದಿನ ಜನಾಂಗಕ್ಕೆ ಕೊಂಡೊಯ್ಯುವ ಮಹತ್ತರ ಜವಬ್ದಾರಿ ನಮ್ಮೆಲ್ಲಾ ಕನ್ನಡಿಗರ ಮೇಲಿದೆ ಎಂದು ಜನಪದ ಸಂಶೋಧಕ, ಸಾಹಿತಿ ಡಾ. ಸುಂದರ ಕೇನಾಜೆ ನುಡಿದರು. ಇವರು ಸುಳ್ಯ ತಾಲುಕು ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ಹೋಬಳಿ ಘಟಕ ಹಾಗು ಸಂಧ್ಯಾರಶ್ಮಿ ಸಾಹಿತ್ಯ ಸಂಘಗಳು ಜಂಟಿಯಾಗಿ ನಡೆಸಿದ ಕನ್ನಡ ರಾಜ್ಯೋತ್ಸವ ಸಾಹಿತ್ಯ ಸಂಭ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡುತ್ತಿದ್ದರು. ಸುಳ್ಯದ ಸಂಧ್ಯಾರಶ್ಮಿ ಸಭಾಭವನದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕನ್ನಡ ಭಾಷೆ ರಾಜಾಶ್ರಯ […]










