ಸುಳ್ಯ ಸರಕಾರ ಪದವಿ ಪೂರ್ವ ಕಾಲೇಜು ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ,ಅಮೃತ ಮಹೋತ್ಸವ ಲೋಗೋ ಮತ್ತು ಮನವಿ ಪತ್ರ ಬಿಡುಗಡೆ
ಸುಳ್ಯ ಸರ್ಕಾರಿ ಪದವಿಪೂರ್ವ ಕಾಲೇಜು ಅಮೃತ ಮಹೋತ್ಸವ-2025 ಈ ಕಾರ್ಯಕ್ರಮದ ಅಂಗವಾಗಿ ಸಂಸ್ಥೆಯಲ್ಲಿ ನೂತನ ಅಕ್ಷರ ದಾಸೋಹ ಕೊಠಡಿಗೆ ಭೂಮಿ ಪೂಜೆ ಕಾರ್ಯಕ್ರಮ ಆ.18 ರಂದು ನಡೆಯಿತು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಇದರ ಅಧ್ಯಕ್ಷರಾದ ಡಾ. ಕೆ.ವಿ ಚಿದಾನಂದ ರವರು ನೂತನ ಕಟ್ಟಡಕ್ಕೆ ಶಿಲಾನ್ಯಾಸವನ್ನು ನೆರವೇರಿಸಿದರು.ಬಳಿಕ ಮಾತನಾಡಿದ ಅವರು “ಈ ಶಾಲೆಯಲ್ಲಿ ಸಾವಿರಾರು ಮಂದಿ ವಿದ್ಯಾರ್ಥಿಗಳು ಶಿಕ್ಷಣವನ್ನು ಪಡೆದು ತಮ್ಮ ಜೀವನವನ್ನು ರೂಪಿಸಿಕೊಂಡಿದ್ದಾರೆ. ನೂರಾರು ಮಂದಿ ಹಳೆ ವಿದ್ಯಾರ್ಥಿಗಳು ಇಂದು ಜಿಲ್ಲಾ ಮಟ್ಟದಿಂದ ಹಿಡಿದು ರಾಷ್ಟ್ರಮಟ್ಟದವರೆಗೆ ವಿವಿಧ […]










