ಕಾಡಾನೆಗಳ ಸಮಸ್ಯೆಯ ಬಗ್ಗೆ ಶಾಶ್ವತ ತಡೆ ಮಾಡಲು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ : ಶಾಸಕಿ ಭಾಗೀರಥಿ
ಅರಂತೋಡು: ಆನೆಗಳು ಸೇರಿದಂದೆ ಇತರ ಕಾಡು ಪ್ರಾಣಿಗಳ ಹಾವಳಿಯಿಂದ ಹಾನಿಗೊಳಗಾಗಿರುವ ಆರಂತೋಡು-ತೋಡಿಕಾನ ಗ್ರಾಮದ ಕೃಷಿಕರು ಹಾಗೂ ಶಾಸಕರು ಮತ್ತು ಅರಣ್ಯಾಧಿಕಾರಿಗಳೊಂದಿಗೆ ಸಂವಾದ ಕಾರ್ಯಕ್ರಮ ಅರಂತೋಡು ಸಹಕಾರಿ ಸಂಘದ ಸಭಾಂಗಣದಲ್ಲಿ ನಡೆಯಿತು. ಕಾಡು ಪ್ರಾಣಿಗಳ ಹಾವಳಿಯಿಂದ ಆಗಿರುವ ಹಾನಿಯ ಕುರಿತು ಕೃಷಿಕರು ಶಾಸಕರಿಗೆವಿವರಿಸಿದರು. ರೈತರ ಸಮಸ್ಯೆಯನ್ನು ಆಲಿಸಿದ ಶಾಸಕಿ ಭಾಗೀರಥಿ ಮುರುಳ್ಯ ಕಾಡು ಪ್ರಾಣಿಗಳ ಪ್ರಾಣಿಗಳ ಹಾವಳಿ ತೀವ್ರಗೊಂಡಿದ್ದು ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ವಿವಿಧ ಭಾಗಗಳಲ್ಲಿ ವ್ಯಾಪಕ ಹಾನಿ ಮಾಡಿವೆ.ಇದಕ್ಕೆ ಶಾಶ್ವತ ತಡೆ ಮಾಡಲು ಸರಕಾರ […]








