ನಾಳೆ ಅಂಗವಾಡಿಗಳಿಗೆ ರಜೆ ಘೋಷಣೆ
ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಜೂ.12ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಗುರುವಾರ ಜಿಲ್ಲೆಯಾದ್ಯಂತ ಗಾಳಿ ಮಳೆಯಾಗುವ ಸಂಭವವಿದ್ದು ಅದರಂತೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ ಇದರ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಒಂದು ದಿನದ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಮಕ್ಕಳು ನೀರಿನ ಜಾಗಗಳಿಗೆ ತೆರಳದಂತೆ ಪೋಷಕರು ಎಚ್ಚರಿಕೆ ವಹಿಸಬೇಕು ಎಂದು ಸೂಚನೆಯಲ್ಲಿ ತಿಳಿಸಿದ್ದಾರೆ
ನಾಳೆ ಅಂಗವಾಡಿಗಳಿಗೆ ರಜೆ ಘೋಷಣೆ Read More »










