ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ಭತ್ತ ಸಾಗುವಳಿಗೆ ಡಾ.ದೇವಿಪ್ರಸಾದ್ ಕಾನತ್ತೂರು ಅವರಿಂದ ಚಾಲನೆ
ಪಂಜ ಸೀಮೆಯ ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ಜೂ.5 ರಂದು ನಡೆಸಲಾಯಿತು.ಜೇಸಿಐ ಪಂಜ ಪಂಚಶ್ರೀಯ ಬೆಳ್ಳಿ ಹಬ್ಬದ ಸ್ಮರಣೆಗೋಸ್ಕರ ದಾನಿಗಳ ಸಹಾಯದಿಂದ ನಿರ್ಮಿತಗೊಂಡ ದೇವಳದ ಗದ್ದೆಯಲ್ಲಿ ನಾಲ್ಕನೇ ವರ್ಷದ ಭತ್ತದ ಸಾಗುವಳಿ ಮಾಡಲಾಯಿತು.ಶ್ರೀ ಸದಾಶಿವ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ.ದೇವಿಪ್ರಸಾದ್ ಕಾನತ್ತೂರ್ ಕಾರ್ಯಕ್ರಮವನ್ನು ಭತ್ತ ಸಾಗುವಳಿ ಮಾಡುವುದರ ಮೂಲಕ ಉದ್ಘಾಟಿಸಿದರು. ಪೈಂದೋಡಿ ಶ್ರೀ ಸುಬ್ರಾಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಕೇಶವ ಗೌಡ ಕುದ್ವ, […]










