ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆ ಸಾವು
ಪುತ್ತೂರು:ರಸ್ತೆ ಕಾಂಕ್ರಿಟೀಕರಣ ಕಾಮಗಾರಿಯ ವೇಳೆ ಕಾಂಕ್ರೀಟ್ ಮಿಕ್ಸಿಂಗ್ ವಾಹನದಡಿಗೆ ಬಿದ್ದು ರಾಯಚೂರು ಮೂಲದ ಕಾರ್ಮಿಕ ಮಹಿಳೆಯೋರ್ವರು ಮೃತಪಟ್ಟ ಘಟನೆ ಬೆಟ್ಟಂಪಾಡಿ ಗ್ರಾಮದ ಬಿಲ್ವಗಿರಿ ಸಮೀಪ ನಡೆದಿದೆ.ರಾಯಚೂರು ಜಿಲ್ಲೆಯ ಮಸ್ಕಿ ತಾಲೂಕಿನ ಬೊಮ್ನಾಳ ಗ್ರಾಮದ ಬಸವರಾಜರವರ ಪತ್ನಿ ಗೌರಮ್ಮ(28ವ.)ಮೃತಪಟ್ಟವರು. ಬೆಟ್ಟಂಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜದಿಂದ ಬಿಲ್ವಗಿರಿ ಮೂಲಕ ಸಂಪರ್ಕ ಕಲ್ಪಿಸುವ ರಸ್ತೆಗೆ ಶಾಸಕರ ರೂ.1 ಕೋಟಿ ಅನುದಾನದಲ್ಲಿ ಕಾಂಕ್ರಿಟೀಕರಣ ಕಾಮಗಾರಿಯು ಕೆಲ ದಿನಗಳಿಂದ ನಡೆಯುತ್ತಿದ್ದು ರಾಯಚೂರು ಮೂಲದ ಒಂದೇ ಕುಟುಂಬದ ಹಲವು ಮಂದಿ ಕಾರ್ಮಿಕರು ಕೆಲಸ ನಿರ್ವಹಿಸುತ್ತಿದ್ದಾರೆ








