Uncategorized

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು

ಸುರತ್ಕಲ್ ಸಮೀಪ ಮಂಗಳವಾರ ತಡರಾತ್ರಿ ಸಮುದ್ರ ತೀರದಲ್ಲಿ ಭಾರಿ ಸುಂಟರಗಾಳಿಗೆ ಕುಲಾಯಿ ಪ್ರದೇಶದಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.ಕೈಗಾರಿಕಾ ಪ್ರದೇಶದಲ್ಲಿ ಕೆಲಸಕ್ಕೆ ಹೋಗುತ್ತಿದ್ದ ಸಂತೋಷ್ ಎಂಬವರು ವಿದ್ಯುತ್ ತಂತಿ ತುಂಡಾಗಿ ಬಿದ್ದಿರುವುದನ್ನು ತಿಳಿಯದೆ ಅದನ್ನ ತುಳಿದ ಪರಿಣಾಮ ಸ್ಥಳದಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ವಿದ್ಯುತ್ ತಂತಿ ಸ್ಪರ್ಶಿಸಿ ವ್ಯಕ್ತಿ ಸಾವು Read More »

ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್

ಸುಳ್ಯ ತಾಲೂಕಿನ ಅತೀ ಹಳೆಯದಾದ ಪರ್ಮಿಟ್ ಹೊಂದಿದ್ದ ಸುಳ್ಯ – ಮಂಡೆಕೋಲು ಮಾರ್ಗದಲ್ಲಿ ಚಲಿಸುತ್ತಿದ್ದ ಬಸ್ಸುಗಳು ಧಿಡೀರ್ ಆಗಿ ಸೋಮವಾರ ಮುಂಜಾನೆ ಸಾರಿಗೆ ಇಲಾಖೆ ಇನ್ಸ್ ಪೆಕ್ಟರ್ ಇಸ್ಮಾನ್ ನೇತೃತ್ವದಲ್ಲಿ ಸೀಝ್ ಮಾಡಲಾಗಿದೆ ಎಂದು ಪುತ್ತೂರು ಆರ್ ಟಿ ಓ ಅಧಿಕಾರಿಗಳು ತಿಳಿಸಿದ್ದಾರೆ.ಈ ಹಿಂದಿನಿಂದಲೂ ಅಜ್ಜಾವರ ಮಂಡೆಕೋಲು – ಅಡೂರು ಗೆ ತೆರಳುತ್ತಿದ್ದ ಕೆಎ-20-ಸಿ-1809 ಖಾಸಗಿ ಬಸ್ಸ್ ಅನಿಲ್ ಛಾತ್ರ ಎಂಬುವವರ ಹೆಸರಿನಲ್ಲಿದ್ದು ಈ ಬಸ್ಸು ಒಂದು ಲಕ್ಷದ ಹನ್ನೆರಡು ಸಾವಿರ ಟ್ಯಾಕ್ಸ್ ಉಳಿಸಿಕೊಂಡಿದೆ. ಅಲ್ಲದೇ ಕೆಎ-19-ಸಿ-0329

ಸುಳ್ಯದಲ್ಲಿ ಖಾಸಗಿ ಬಸ್ಸುಗಳು ಸೀಝ್ Read More »

ಪೆರಾಜೆ‌ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಕ್ಕೆ ದಾಳಿ: ಅಪಾರ ಪ್ರಮಾಣದ ಕೃಷಿ ನಾಶ

ಪೆರಾಜೆ ಗ್ರಾಮದ ನಿಡ್ಯಮಲೆ – ಹಾಲೆಕಾಡು ಪ್ರದೇಶದಲ್ಲಿ ಕೃಷಿ ತೋಟಕ್ಕೆ ಹಿಂಡು ಆನೆಗಳು ದಾಳಿ ಮಾಡಿ ಅಪಾರ ಪ್ರಮಾಣದ ಕೃಷಿ ನಾಶಪಡಿಸಿದ ಘಟನೆ ವರದಿಯಾಗಿದೆ.ಕಳೆದ ಎರಡು ದಿನಗಳಿಂದ ಈ ಭಾಗದ ಕೃಷಿಕರಾದ ಬೆಳ್ಳಿಪ್ಪಾಡಿ ತಿಮ್ಮಪ್ಪ, ಕುಡಿಯರ ಸುಂದರ, ಚಾಮಕಜೆ ಲಿಂಗಯ್ಯ, ಚಾಮಕಜೆ ದುಗ್ಗಪ್ಪ, ಚಾಮಕಜೆ ನಾರಾಯಣ, ಹೊದ್ದೆಟ್ಟಿ ಗೋಪಾಲಕೃಷ್ಣ, ಕುತ್ಯಾಳ‌ ಜನಾರ್ದನ ಎಂಬವರ ತೋಟಕ್ಕೆ ಕಾಡಾನೆಗಳ ಹಿಂಡು ಬಂದು ಕೃಷಿ ನಾಶ ಪಡಿಸಿವೆ.ಪಕ್ಕದಲ್ಲೇ ಇರುವ ಕೋಳಿಕ್ಕಮಲೆ ಬೆಟ್ಟದ ಕೆಳ ಭಾಗದ ಕಾಡಿನಿಂದ ಕಾಡಾನೆಗಳು ಆನೆಗಳು ರಾತ್ರಿ ವೇಳೆ

ಪೆರಾಜೆ‌ ಗ್ರಾಮದಲ್ಲಿ ಕಾಡಾನೆಗಳ ಹಿಂಡು ತೋಟಕ್ಕೆ ದಾಳಿ: ಅಪಾರ ಪ್ರಮಾಣದ ಕೃಷಿ ನಾಶ Read More »

ಜೇನು ಕೃಷಿಯೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಂಡ ಯುವತಿ

ಕಡಬ : ತಂದೆ ತಾಯಿ ದುಡಿದ ಹಣದಲ್ಲಿ ಮಕ್ಕಳು ಶಿಕ್ಷಣ ಪಡೆಯುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಸ್ವಾವಲಂಬನೆಯ ಕನಸಿನೊಂದಿಗೆ ನರ್ಸಿಂಗ್ ಶಿಕ್ಷಣದ ಜತೆಗೆ ಜೇನು ಕೃಷಿಯಲ್ಲಿ ತೊಡಗಿಕೊಂಡು ಇತರ ವಿದ್ಯಾರ್ಥಿಗಳಿಗೆ ಮಾದರಿಯಾಗಿದ್ದಾರೆ.ಕಡಬ ತಾಲೂಕಿನ ರಂಜಿಲಾಡಿ ಗ್ರಾಮದ ಎಳುವಾಳೆ ದಿ| ಚಂದ್ರಶೇಖರ ಗೌಡ ಹಾಗೂ ಪ್ರೇಮಾ ದಂಪತಿಯ ಪುತ್ರಿ ದೀಕ್ಷಿತಾ ಜೇನು ಕೃಷಿಯಲ್ಲಿ ಖುಷಿಯನ್ನು ಕಂಡಿರುವ ಯುವತಿ. ಪುತ್ತೂರಿನ ಸಂಸ್ಥೆಯೊಂದರಲ್ಲಿ ದೀಕ್ಷಿತಾ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದಾರೆ. ಪದವಿ ತರಗತಿಯಲ್ಲಿದ್ದಾಗ ಕೊರೊನಾ ಹಿನ್ನೆಲೆಯಲ್ಲಿ ಕಾಲೇಜಿಗೆ ಸಾಕಷ್ಟು ರಜೆ ಸಿಕ್ಕಿದ

ಜೇನು ಕೃಷಿಯೊಂದಿಗೆ ಸ್ವಾವಲಂಬಿ ಬದುಕು ಕಟ್ಟಿಕೊಂಡ ಯುವತಿ Read More »

ಜಮೀನಿನ ಬೇಲಿ ಕಿತ್ತು ಹಾಕಿ ಕೃಷಿ ನಾಶ: ಪ್ರಕರಣ ದಾಖಲು

ಇಚ್ಲಂಪಾಡಿ: ಮಾರಕಾಯುಧದೊಂದಿಗೆ ಜಮೀನಿಗೆ ಒಳಗೆ ಅಕ್ರಮ ಪ್ರವೇಶ ಮಾಡಿ ಬೇಲಿ ತೆಗೆದು ಎಸೆದು ಹಾಕಿ ನಾಶಗೊಳಿಸಿದ್ದಾರೆ ಎಂದು ಆರೋಪಿಸಿ ಇಚ್ಲಂಪಾಡಿ ಗ್ರಾಮದ ಅಲಂಗ ಮೇಪರತ್ ನಿವಾಸಿ ಎಂ.ಎಂ.ತೋಮಸ್ ಎಂಬವರು ನೀಡಿದ ದೂರಿನಂತೆ ಅಲೆಕ್ಸ್ ವರ್ಗೀಸ್, ಪಿ.ಜೆ.ಜೋಸೆಫ್ ಹಾಗೂ ರೋಸಮ್ಮ ಎಂಬವರ ವಿರುದ್ಧ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದೆ.ಕಡಬ ತಾಲೂಕಿನ ಇಚ್ಲಂಪಾಡಿ ಗ್ರಾಮದ ಸರ್ವೆ ನಂಬ್ರ: 128-2ರಲ್ಲಿ 0.85ಎಕ್ರೆ ಜಮೀನು ಹೊಂದಿದ್ದು, ಈ ಜಮೀನಿಗೆ ಜು.3ರಂದು ಬೆಳಿಗ್ಗೆ ಅಲೆಕ್ಸ್ ವರ್ಗೀಸ್, ಪಿ.ಜೆ. ಜೋಸೆಪ್, ರೋಸಮ್ಮ ಎಂಬವರು ಕೈಯಲ್ಲಿ

ಜಮೀನಿನ ಬೇಲಿ ಕಿತ್ತು ಹಾಕಿ ಕೃಷಿ ನಾಶ: ಪ್ರಕರಣ ದಾಖಲು Read More »

ಗುರುಪೂರ್ಣಿಮೆ ಆಚರಣೆ:ಹಿಂದೆ ಗುರುವಿರಬೇಕು ಮುಂದೆ ಗುರಿ ಇರಬೇಕು

ಅಜ್ಜಾವರ : ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ದೇವರ ಕಳಿಯ ಚೈತನ್ಯ ಸೇವಾಶ್ರಮದಲ್ಲಿ ಗುರು ಪೂರ್ಣಿಮೆ ಕಾರ್ಯಕ್ರಮವನ್ನು ಆಚರಿಸಲಾಯಿತು.ಗುರುಗಳ ಆಶೀರ್ವಾದದಿಂದ ಜೀವನದಲ್ಲಿ ಸಾಧನೆ ಮಾಡಬಹುದು,ಹಿಂದೆ ಗುರು ಇರಬೇಕು ಮುಂದೆ ಗುರಿ ಇರಬೇಕು. ಗುರುವಿನ ಮೂಲಕ ಪಡೆದ ಶಿಕ್ಷಣ ಶ್ರೇಷ್ಠ ಎಂದು ಆಶ್ರಮದ ಸ್ವಾಮೀಜಿ ಶ್ರೀ ಯೋಶ್ವರಾನಂದ ಸರಸ್ವತಿ ಸ್ವಾಮೀಜಿಯವರು ಹೇಳಿದರು. ಅವರು ಗುರುಪೂರ್ಣಿಮಾ ಅಂಗವಾಗಿ ಆಶ್ರಮದಲ್ಲಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರುಆಶ್ರಮದ ಟ್ರಸ್ಟಿ ಸಾಯಿಗೀತಾ ಅಧ್ಯಕ್ಷತೆ ವಹಿಸಿದ್ದರು. ಡಾ.ನಿತೀನ್ ಮುಖ್ಯ ಅತಿಥಿಯಾಗಿ ಭಾಗವಹಿಸಿದರು.ಆಶ್ರಮದ ಟ್ರಸ್ಟಿ ಪ್ರಣವಿ

ಗುರುಪೂರ್ಣಿಮೆ ಆಚರಣೆ:ಹಿಂದೆ ಗುರುವಿರಬೇಕು ಮುಂದೆ ಗುರಿ ಇರಬೇಕು Read More »

ತಹಶೀಲ್ದಾರ್ ಅಜಿತ್ ರೈ ಅವರನ್ನು ಮತ್ತೆ ಕರ್ತವ್ಯಕ್ಕೆ ನೇಮಕಗೊಳಿಸಿದ ಸರಕಾರ

ರಾಜ್ಯ ಸರಕಾರದ ವಿರುದ್ಧ ವ್ಯಾಪಕ ಖಂಡನೆ 500 ಕೋಟಿಗೂ ಅಧಿಕ ಬೇನಾಮಿ ಆಸ್ತಿ ಸಂಪಾದಿಸಿದ ಆರೋಪ ಹೊತ್ತಿರುವ ಬೆಂಗಳೂರಿನ ಕೆಆರ್ ಪುರ ತಹಶೀಲ್ದಾರ್ ಗೆ ಅಜಿತ್ ಕುಮಾರ್ ರೈ ಅವರನ್ನು ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಗ್ರೇಡ್ -2 ತಹಶೀಲ್ದಾರ್ ಹುದ್ದೆಗೆ ಸರ್ಕಾರ ನೇಮಕ ಮಾಡಿದ್ದು, ಸರ್ಕಾರದ ಈ ನಡೆಗೆ ಆಕ್ರೋಶ ವ್ಯಕ್ತವಾಗಿದೆ.ಆದಾಯಕ್ಕಿಂತ ಭಾರಿ ಪ್ರಮಾಣದಲ್ಲಿ ಆಸ್ತಿ ಸಂಪಾದಿಸಿರುವ ಅಜಿತ್ ರೈ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಾಗಿ ತನಿಖೆ ಮುಂದುವರೆದಿದೆ. ಸಿರವಾರದಲ್ಲಿ ಗ್ರೇಡ್ 2 ತಹಶೀಲ್ದಾರ್ ಆಗಿದ್ದ

ತಹಶೀಲ್ದಾರ್ ಅಜಿತ್ ರೈ ಅವರನ್ನು ಮತ್ತೆ ಕರ್ತವ್ಯಕ್ಕೆ ನೇಮಕಗೊಳಿಸಿದ ಸರಕಾರ Read More »

ಮತ್ತೆ ಟೆನಿಸ್ ಆಡಲಿರುವ ಸಾನಿಯಾ ಮಿರ್ಜಾ

ಭಾರತದ ಸ್ಟಾರ್‌ ಆಟಗಾರ್ತಿ ಸಾನಿಯಾ ಮಿರ್ಜಾ ಈಗಾಗಲೇ ಅಂತಾರಾಷ್ಟ್ರೀಯ ಟೆನಿಸ್‌ಗೆ ವಿದಾಯ ಹೇಳಿದ್ದರೂ ವಿಂಬಲ್ಡನ್‌ನಲ್ಲಿ ರ್ಯಾಕೆಟ್‌ ಹಿಡಿದು ಅಂಕಣಕ್ಕೆ ಇಳಿಯಲಿದ್ದಾರೆಹಾಗಾದರೆ ಸಾನಿಯಾ ಮಿರ್ಜಾ ನಿವೃತ್ತಿಯಿಂದ ಹಿಂದೆ ಸರಿದರೇ ಎಂಬುದು ನಿಮ್ಮ ಕುತೂಹಲವೇ? ಇಲ್ಲ, ಸಾನಿಯಾ ಮಿರ್ಜಾ ಆಡುವುದು ಆಮಂತ್ರಿತ ಲೆಜೆಂಡ್ಸ್‌ ಆಟಗಾರರ ವಿಭಾಗದಲ್ಲಿ. ಇಲ್ಲಿ ಅವರು ಬ್ರಿಟನ್‌ನ ಜೊಹಾನ್ನಾ ಕೊಂಟಾ ಜತೆಗೂಡಿ ಆಡಲಿದ್ದಾರೆ. ಕೊಂಟಾ ಮೊದಲು ಆಸ್ಟ್ರೇಲಿಯವನ್ನು ಪ್ರತಿನಿಧಿಸುತ್ತಿದ್ದರು. 2021ರಲ್ಲಿ ಟೆನಿಸ್‌ಗೆ ವಿದಾಯ ಘೋಷಿಸಿದ್ದರು.4 ಬಾರಿಯ ಗ್ರ್ಯಾನ್‌ಸ್ಲಾಮ್‌ ಚಾಂಪಿಯನ್‌ ಕಿಮ್‌ ಕ್ಲಿಸ್ಟರ್, ಮಾರ್ಟಿನಾ ಹಿಂಗಿಸ್‌ ಕೂಡ ಇಲ್ಲಿ

ಮತ್ತೆ ಟೆನಿಸ್ ಆಡಲಿರುವ ಸಾನಿಯಾ ಮಿರ್ಜಾ Read More »

ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ರಸ್ತೆ ಸಂಪರ್ಕ ಕಡಿತ

ಸುಳ್ಯ ತಾಲೂಕಿನಲ್ಲಿ ಭಾರೀ ಮಳೆ ಮಳೆಯಾಗುತ್ತಿರುವ ಹಿನ್ನಲೆಲ್ಲಿ ಅಲ್ಲಲ್ಲಿ ಹಾನಿ ಸಂಭವಿಸಿರುವ ಬಗ್ಗೆ ವರದಿಯಾಗುತ್ತಿವೆ.ತೊಡಿಕಾನ ಗ್ರಾಮದ ತೊಡಿಕಾನ. ಮಾವಿನಕಟ್ಟೆ ಬಾಳಕಜೆ ರಸ್ತೆಗೆ ಗುಡ್ಡ ಕುಸಿದು ಬಿದ್ದು ಸಂಪರ್ಕ ಕಡಿತಗೊಂಡಿದೆ.ಸುಳ್ಯದ ಜಯನಗರ ಪರಿಸರದಲ್ಲಿ ಇಂದು ಸಂಜೆ ಸುರಿದ ಭಾರಿ ಮಳೆಗೆ ಎರಡು ಮನೆಗಳ ಕಾಂಪೌಂಡ್ ಕುಸಿದು ಪಕ್ಕದ ಮನೆಯೊಂದರ ಶೀಟುಗಳುf ಹಾನಿಯಾದ ಘಟನೆ ವರದಿಯಾಗಿದೆ.ಜಯನಗರ ಶ್ರೀ ಗಜಾನನ ಭಜನಾ ಮಂದಿರದ ಬಳಿ ದಾಮೋದರ ಪಡಂಬೈಲು ಎಂಬುವವರ ಮನೆಯ ಕಾಂಪೌಂಡ್ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ನೂತನವಾಗಿ ನಿರ್ಮಿಸಿದ್ದ ಮನೆಯ ಕಾಂಪೌಂಡ್

ತಾಲೂಕಿನಾದ್ಯಂತ ಭಾರೀ ಮಳೆ: ಹಲವೆಡೆ ರಸ್ತೆ ಸಂಪರ್ಕ ಕಡಿತ Read More »

ಭಾರೀ ಮಳೆ ಹಿನ್ನಲೆ: ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಮಂಗಳೂರು ಸೇರಿ 5 ತಾಲೂಕಿನ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ಇಂದು(ಮಂಗಳವಾರ) ರಜೆ ಘೋಷಣೆ ಮಾಡಿದೆ.ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಹಾಗೂ ಹವಾಮಾನ ಇಲಾಖಾ ಮುನ್ಸೂಚನೆಯನ್ನು ಗಮನದಲ್ಲಿರಿಸಿ ಮಕ್ಕಳ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಂಡು, ಜುಲೈ 4ರಂದು ಮಂಗಳೂರು, ಮೂಲ್ಕಿ, ಉಲ್ಲಾಳ, ಮೂಡಬಿದರೆ ಹಾಗೂ ಬಂಟ್ವಾಳ ತಾಲೂಕುಗಳ ಎಲ್ಲಾ ಅಂಗನವಾಡಿ, ಪ್ರಾಥಮಿಕ ಶಾಲ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜು ಮುಂತಾದ ಶೈಕ್ಷಣಿಕ ಸಂಸ್ಥೆಗಳಿಗೆ ಮುಂಜಾಗ್ರತಾ ಕ್ರಮವಾಗಿ

ಭಾರೀ ಮಳೆ ಹಿನ್ನಲೆ: ದ.ಕ ಜಿಲ್ಲೆಯ 5 ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ Read More »

error: Content is protected !!
Scroll to Top