ಕನ್ನಡದ ಘನತೆಗೆ ಕುಂದುಟಾಗದಂತೆ ಕನ್ನಡವನ್ನು ರಕ್ಷಣೆ ಮಾಡುವುದು ಕನ್ನಡಿಗರಾದ ನಮ್ಮ ಹೊಣೆ : ಲೀಲಾ ದಾಮೋದರ್
ಅರಂತೋಡು : ಶಾಸ್ತ್ರೀಯ ಭಾಷೆಯ ಸ್ಥಾನಮಾನ ಹೊಂದಿದ ಕನ್ನಡ ಭಾಷೆಯನ್ನು ವ್ಯಾಪಕವಾಗಿ ಬಳಸುವ, ಅದರ ಘನತೆಗೆ ಕುಂದುಟಾಗದಂತೆ ನೋಡಿಕೊಳ್ಳುವ ಜವಬ್ದಾರಿ ಕನ್ನಡಿಗರಾದ ನಮ್ಮೆಲ್ಲರ ಮೇಲಿದೆ. ಆಗಾದಾಗಲೇ ಕನ್ನಡ ಭಾಷೆ ಸಂಸ್ಕೃತಿ ಖಂಡಿತಾ ಸೋಲುವುದಿಲ್ಲ ಎಂದು ಸುಳ್ಯ ತಾಲೂಕು ೨೭ನೇ ಕನ್ನಡ ಸಾಹಿತ್ಯ ಸಮ್ಮೇಳನದ ಸಮ್ಮೇಳನಾಧ್ಯಕ್ಷೆ ಲೀಲಾದಾಮೋದರ ಹೇಳಿದರು.ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಸುಳ್ಯ ತಾಲೂಕು ಘಟಕ, ಸ್ವಾಗತ ಸಮಿತಿ ೨೭ನೇ ಕನ್ನಡ ಸಾಹಿತ್ಯ ಸಮ್ಮೇಳನ ಅರಂತೋಡು ಇದರ ಆಶ್ರಯದಲ್ಲಿ ಅರಂತೋಡು ನೆಹರು ಸ್ಮಾರಕ ಪದವಿಪೂರ್ವ […]










